AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್, 9 ಸಾವು

ತೋಟದ ಕಾರ್ಮಿಕರು ಕೆಲಸ ಮುಗಿಸಿ ಬರುವಾಗ ಈ ಭಾಗದಲ್ಲಿ ಹಲವು ಜೀಪುಗಳು ಸಂಚರಿಸುತ್ತವೆ ಎನ್ನುತ್ತಾರೆ ಸ್ಥಳೀಯರು. ಜೀಪ್ ಆಳವಾದ ಕಂದಕಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಸುಮಾರು 30 ಮೀಟರ್ ಆಳಕ್ಕೆ ಬಿದ್ದಿದ್ದು, ಸ್ಥಳೀಯರ ನೇತೃತ್ವದಲ್ಲಿ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು. 

ಕೇರಳ: ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್, 9 ಸಾವು
ವಯನಾಡಿನಲ್ಲಿ ಕಂದಕಕ್ಕೆ ಬಿದ್ದ ಜೀಪ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Aug 25, 2023 | 6:01 PM

Share

ಮಾನಂತವಾಡಿ (ವಯನಾಡ್) ಆಗಸ್ಟ್ 25: ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಜೀಪ್ (Jeep Accident) ಪಲ್ಟಿಯಾಗಿ ಕಂದಕಕ್ಕೆ ಬಿದ್ದು 9 ಮಂದಿ ಸಾವಿಗೀಡಾಗಿರುವ ಘಟನೆ ಕೇರಳದ ವಯನಾಡ್ (Wayanad) ಜಿಲ್ಲೆಯ ಮಾನಂತವಾಡಿಯಲ್ಲಿ (Mananthavady) ನಡೆದಿದೆ. ಜೀಪಿನಲ್ಲಿ 12 ಮಂದಿ ಇದ್ದರು. ಗಾಯಗೊಂಡ ಮೂವರನ್ನು ವಯನಾಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಚಾಲಕ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವಯನಾಡ್ ಕಲೆಕ್ಟರ್ ರೇಣು ರಾಜ್ ಖಚಿತಪಡಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ತಲಪ್ಪುಳ ಕನ್ನೋತ್ ಬೆಟ್ಟದ ಬಳಿ ಅಪಘಾತ ಸಂಭವಿಸಿದೆ. ಜೀಪಿನಲ್ಲಿ ತೋಟದ ಕಾರ್ಮಿಕರು ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಮೃತರನ್ನುರಾಣಿ, ಶಾಂತಾ, ಚಿನ್ನಮ್ಮ, ಲೀಲಾ, ಶಾಜಬಾಬು, ರಬಿಯಾ, ಮೇರಿ ಮತ್ತು ವಸಂತ ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬರ ಗುರುತು ಪತ್ತೆಯಾಗಿಲ್ಲ. ಲತಾ, ಉಮಾದೇವಿ ಹಾಗೂ ಚಾಲಕ ಮಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಬಮಾಳ ಎಸ್ಟೇಟ್ ಕಾರ್ಮಿಕರಾಗಿದ್ದಾರೆ ಇವರು. ಜೀಪ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಊಹಿಸಲಾಗುತ್ತಿದೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.

ತೋಟದ ಕಾರ್ಮಿಕರು ಕೆಲಸ ಮುಗಿಸಿ ಬರುವಾಗ ಈ ಭಾಗದಲ್ಲಿ ಹಲವು ಜೀಪುಗಳು ಸಂಚರಿಸುತ್ತವೆ ಎನ್ನುತ್ತಾರೆ ಸ್ಥಳೀಯರು. ಜೀಪ್ ಆಳವಾದ ಕಂದಕಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿದೆ. ಸುಮಾರು 30 ಮೀಟರ್ ಆಳಕ್ಕೆ ಬಿದ್ದಿದ್ದು, ಸ್ಥಳೀಯರ ನೇತೃತ್ವದಲ್ಲಿ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು.

ಇದನ್ನೂ ಓದಿ: 50 ಡೆಸಿಬಲ್‌ಗಳ ಗರಿಷ್ಠ ಮಿತಿ; ವಾಹನಗಳ ಹಾರ್ನ್ ಸದ್ದು ಮಿತಿಗೊಳಿಸಲು ಕೇಂದ್ರ ಚಿಂತನೆ

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ಮೇರೆಗೆ ಕೋಯಿಕ್ಕೋಡ್‌ನಲ್ಲಿರುವ ಅರಣ್ಯ ಸಚಿವ ಎಕೆ ಶಶೀಂದ್ರನ್ ಅವರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಲು ವಯನಾಡ್‌ಗೆ ತೆರಳಿದ್ದಾರೆ. ಅಪಘಾತದ ವರದಿ ತೀವ್ರ ದುಃಖ ತಂದಿದೆ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Fri, 25 August 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!