ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆಗಳನ್ನು, ತನ್ನವರನ್ನು ಕಳೆದುಕೊಂಡವರಿಗೆ ಸಹಾಯ ಮಾಡಲು ಪುಟ್ಟ ಬಾಲಕಿ ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ಮಾಡಿ ನಿಧಿ ಸಂಗ್ರಹಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ನೀಡಿದ್ದಾಳೆ.

ವಯನಾಡು ಭೂಕುಸಿತ: ನಿಧಿ ಸಂಗ್ರಹಿಸಲು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ ಬಾಲಕಿ
ಬಾಲಕಿ

Updated on: Aug 09, 2024 | 9:04 AM

ಕೇರಳದ ವಯನಾಡಿನಲ್ಲಿ ಸಾಲು ಸಾಲು ಗುಡ್ಡಗಳು ಕುಸಿದಿರುವುದರ ಜತೆಗೆ ಪ್ರವಾಹದ ಪರಿಸ್ಥಿತಿಯೂ ನಿರ್ಮಾಣವಾಗಿದೆ. 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಯನಾಡಿಗಾಗಿ ಎಲ್ಲರ ಹೃದಯ ಮಿಡಿಯುತ್ತಿದೆ. ತಮಿಳುನಾಡಿನಿಂದ ಹಿಡಿದು ಎಲ್ಲಾ ರಾಜ್ಯಗಳಲ್ಲಿ ನಿಧಿ ಸಂಗ್ರಹಿಸಲಾಗುತ್ತಿದೆ.

ನಿಧಿ ಸಂಗ್ರಹಿಸಲು 13 ವರ್ಷದ ಬಾಲಕಿಯೊಬ್ಬಳು ಸತತ 3 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಬಾಲಕಿಯನ್ನು ಶ್ಲಾಘಿಸಿದ್ದಾರೆ.

ಹರಿಣಿ ಶ್ರೀ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ತನ್ನ ಉಳಿತಾಯ ಸೇರಿದಂತೆ 15 ಸಾವಿರ ರೂ.ವನ್ನು ನೀಡಿದ್ದಾರೆ. ತಮ್ಮ ಭರತನಾಟ್ಯವನ್ನು ಫೋನ್​ನಲ್ಲಿ ರೆಕಾರ್ಡ್​ ಮಾಡಿ ಮುಖ್ಯಮಂತ್ರಿಗೆ ತೋರಿಸಿದ್ದಾರೆ.

ಮತ್ತಷ್ಟು ಓದಿ:
ಗುಡ್ಡ, ಭೂ ಕುಸಿತ: ಮುಳ್ಳಯ್ಯನಗಿರಿ, ಚಾರ್ಮಾಡಿ, ಶೃಂಗೇರಿ ಡೇಂಜರಸ್: ಸ್ಫೋಟಕ ವರದಿ ಬಹಿರಂಗ

ಜುಲೈ 30ರಂದು ಸುರಿದ ಧಾರಾಕಾರ ಮಳೆ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಭೂಕುಸಿತವನ್ನುಂಟು ಮಾಡಿತು.
ನೂರಾರು ಮನೆಗಳು ಬೃಹತ್ ಗುಡ್ಡ ಕುಸಿತಕ್ಕೆ ಸಿಲುಕಿ ನೆಲಸಮಗೊಂಡಿವೆ. ಜನರು ಅವಶೇಷಗಳಡಿ ಸಿಲುಕಿದರು.ದುರಂತದಲ್ಲಿ ಇದುವರೆಗೆ 417 ಮಂದಿ ಸಾವನ್ನಪ್ಪಿದ್ದಾರೆ.

ವಿಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷಗಳ ನಾಯಕರ ಕರೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆಗಸ್ಟ್ 10) ವಯನಾಡಿಗೆ ಭೇಟಿ ನೀಡಲಿದ್ದಾರೆ.

ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದರಿಂದ ಪರಿಹಾರ ಮತ್ತು ಪುನರ್ವಸತಿಗಾಗಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಖಚಿತಪಡಿಸಲಾಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ವಿಜಯನ್, ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಮತ್ತು ತೀವ್ರ ವಿಪತ್ತು ಎಂದು ಘೋಷಿಸಲು ಕೇರಳ ಸರ್ಕಾರವು ಕೇಂದ್ರವನ್ನು ಕೇಳಿದೆ ಎಂದು ಹೇಳಿದರು.

ದುರಂತದ ತೀವ್ರತೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ಕೇಂದ್ರ ಗೃಹ ಸಚಿವಾಲಯ ಒಂಬತ್ತು ಸದಸ್ಯರ ಸಮಿತಿಯನ್ನು ನೇಮಿಸಿದೆ ಎಂದರು .

ವಿಪತ್ತು ಎದುರಿಸಲು ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ವಿಜಯನ್ ಹೇಳಿದರು. ರಾಜ್ಯ ಸರ್ಕಾರಕ್ಕೆ ಕೇಂದ್ರದ ನೆರವು ಮತ್ತು ಸಮಗ್ರ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ ಮತ್ತು ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us