ಪ್ರತಿಕೂಲ ಹವಾಮಾನ: ವಯನಾಡು ಭೇಟಿ ಮುಂದೂಡಿದ ರಾಹುಲ್, ಪ್ರಿಯಾಂಕಾ ಗಾಂಧಿ
ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ, ಮಣ್ಣು ಸಡಿಲವಾಗಿ ಹಲವೆಡೆ ಭೂಕುಸಿತಗಳು ಸಂಭವಿಸುತ್ತಿವೆ, ಮಂಗಳವಾರ ಗುಡ್ಡ ಕುಸಿತದಿಂದಾಗಿ 100ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಅವರ ವಯನಾಡು ಭೇಟಿಯನ್ನು ಮುಂದೂಡಲಾಗಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಮುಂದೂಡಿದ್ದಾರೆ. ಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಆ ಜಾಗಕ್ಕೆ ಹೋಗುವುದು ಸುಲಭವಲ್ಲ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ನಮಗೆ ತಿಳಿಸಲಾಗಿದೆ. ನಾವು ವಿಮಾನದಲ್ಲಿ ಅಲ್ಲಿಗೆ ಬರಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ವಯನಾಡ್ ಜನತೆಗೆ ಭರವಸೆ ನೀಡಿದ ರಾಹುಲ್ ಗಾಂಧಿ, ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ನೆರವು ನೀಡುತ್ತೇವೆ ಎಂದು ಹೇಳಿದರು.
Priyanka and I were scheduled to visit Wayanad tomorrow to meet with families affected by the landslide and take stock of the situation.
However, due to incessant rains and adverse weather conditions we have been informed by authorities that we will not be able to land.
I…
— Rahul Gandhi (@RahulGandhi) July 30, 2024
ಕೇರಳದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಒಂದಾದ ವಯನಾಡಿನಲ್ಲಿ ಮಂಗಳವಾರ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಿಂದಾಗಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: Wayanad Landslide: ಭೂಕುಸಿತ ಪೀಡಿತ ಕೇರಳದ ವಯನಾಡಿಗೆ ನಾಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಭೇಟಿ
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಈ ಬಾರಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರವನ್ನು ಗೆದ್ದಿದ್ದರು. ಆದರೆ ರಾಯ್ ಬರೇಲಿಯನ್ನು ಪ್ರತಿನಿಧಿಸಲು ನಿರ್ಧರಿಸಿದರು. ಹೀಗಾಗಿ, ವಯನಾಡ್ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಇದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ