ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ: ಎರಡನೇ ಹಂತದಲ್ಲಿ ಶೇ 76 ಮತದಾನ
ಸಾಂದರ್ಭಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 10, 2020 | 8:29 PM

ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆದಿದ್ದು ಶೇ 76 ಮತದಾನವಾಗಿದೆ. ಕೋಟ್ಟಯಂ, ಎರ್ನಾಕುಳಂ, ತ್ರಿಶ್ಶೂರ್, ಪಾಲಕ್ಕಾಡ್, ವಯನಾಡ್ ಜಿಲ್ಲೆಗಳ ಜನರು ಗುರುವಾರ ಮತಚಲಾಯಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರಗೆ ಎಲ್ಲರಿಗೂ ಮತದಾನ ಮಾಡುವ ಅವಕಾಶ ಕಲ್ಪಿಸಿದ್ದು , 6 ಗಂಟೆಯಿಂದ 7 ಗಂಟೆವರೆಗೆ ಕೋವಿಡ್ ರೋಗಿಗಳಿಗೆ ಮತ್ತು ಕ್ವಾರಂಟೈನ್ ನಲ್ಲಿರುವವರಿಗೆ ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಸಂಜೆ 6.30ರವರೆಗೆ ಕೋಟ್ಟಯಂನಲ್ಲಿ ಶೇ 73.72, ಎರ್ನಾಕುಳಂನಲ್ಲಿ ಶೇ 76.74, ತ್ರಿಶ್ಶೂರ್​ನಲ್ಲಿ ಶೇ 74.58, ಪಾಲಕ್ಕಾಡ್​ನಲ್ಲಿ ಶೇ 77.53, ವಯನಾಡ್​ನಲ್ಲಿ ಶೇ 79.22ರಷ್ಟು ಮತದಾನವಾಗಿದೆ. ಕೊಚ್ಚಿ, ತ್ರಿಶ್ಶೂರ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಕ್ರಮವಾಗಿ ಶೇ 61.45, ಶೇ 63.39ರಷ್ಟು ಮತದಾನ ದಾಖಲಾಗಿದೆ.

ಎರಡನೇ ಹಂತದ ಮತದಾನದಲ್ಲಿ 47,28,489 ಪುರುಷರು, 51,28,361 ಮಹಿಳೆಯರು, 93  ಟ್ರಾನ್ಸ್ ಜೆಂಡರ್, 265-ಅನಿವಾಸಿ ಭಾರತೀಯರು ಸೇರಿದಂತೆ 98,57,208 ಮತದಾರರಿದ್ದರು.  12,643 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

ಕೇರಳ ಚುನಾವಣೆ: ಮೊದಲ ಹಂತದಲ್ಲಿ ಶೇ 71.59 ಮತದಾನ

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ