AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!

ಕೇರಳದಲ್ಲಿ ಕೊವ್ಯಾಕ್ಸಿನ್ 2 ಡೋಸ್ ಪಡೆದ ವ್ಯಕ್ತಿಯೋರ್ವ ತನಗೆ ಮತ್ತೊಮ್ಮೆ ಕೋವಿಶೀಲ್ಡ್​ ಲಸಿಕೆ ಹಾಕಬೇಕೆಂದು ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾನೆ.

Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 18, 2021 | 6:44 PM

Share

ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಕೇಸುಗಳು ಸಂಖ್ಯೆ ವಿಪರೀತ ಹೆಚ್ಚಾಗುತ್ತಿದೆ. ಹೀಗಾಗಿ, ಕರ್ನಾಟಕದ (Karnataka) ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಭಾರತದಲ್ಲಿ ಕೊವಿಡ್ (COVID-19) ನಿಯಂತ್ರಿಸಲು ಈಗಾಗಲೇ ಕೋವಿಶೀಲ್ಡ್ (Covishield)​, ಕೊವ್ಯಾಕ್ಸಿನ್ (Covaxin), ಸ್ಪುಟ್ನಿಕ್ (Sputnik-V) ಸೇರಿದಂತೆ ಹಲವು ಲಸಿಕೆಗಳನ್ನು ನೀಡಲಾಗುತ್ತಿದೆ. ಇದರ ನಡುವೆ ಕೇರಳದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದ್ದು, ಕೊವ್ಯಾಕ್ಸಿನ್ ಎರಡು ಡೋಸ್ ಲಸಿಕೆಗಳನ್ನು ಪಡೆದ ವ್ಯಕ್ತಿಯೋರ್ವ ತನಗೆ ಮತ್ತೆ ಕೋವಿಶೀಲ್ಡ್​ ಲಸಿಕೆ ಹಾಕಬೇಕೆಂದು ಕೋರ್ಟ್ ಮೊರೆ ಹೋಗಿದ್ದಾನೆ.

ಯಾವುದೇ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಾಗಲೂ ಎರಡನೇ ಡೋಸ್ ಕೂಡ ಅದೇ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂಬ ನಿಯಮವಿದೆ. ಒಮ್ಮೆ ಕೋವಿಶೀಲ್ಡ್ ಮತ್ತೊಮ್ಮೆ ಕೊವ್ಯಾಕ್ಸಿನ್ ಹಾಕಿಸಿಕೊಳ್ಳಲು ಅವಕಾಶವಿಲ್ಲ. ಕೇರಳದಲ್ಲಿ ಕೊವ್ಯಾಕ್ಸಿನ್ 2 ಡೋಸ್ ಪಡೆದ ವ್ಯಕ್ತಿಯೋರ್ವ ತನಗೆ ಮತ್ತೊಮ್ಮೆ ಕೋವಿಶೀಲ್ಡ್​ ಲಸಿಕೆ ಹಾಕಬೇಕೆಂದು ಕೇರಳ ಹೈಕೋರ್ಟ್​ ಮೆಟ್ಟಿಲೇರಿದ್ದಾನೆ. ಆದರೆ, ಈಗಾಗಲೇ ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ಮತ್ತೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಖಚಿತಪಡಿಸಿದೆ.

ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡರೂ ಆ ವ್ಯಕ್ತಿಗೆ ಆರೋಗ್ಯದ ಸಮಸ್ಯೆಗಳು ಉಂಟಾಗಿತ್ತು. ಹೀಗಾಗಿ, ಆತ ಕೋವ್ಯಾಕ್ಸಿನ್ ಲಸಿಕೆಯಿಂದ ಏನೂ ಪ್ರಯೋಜನವಾಗಿಲ್ಲ ಎಂದು ಮತ್ತೆ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಹಾಕಬೇಕೆಂದು ಒತ್ತಾಯಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಆದರೆ, ಓರ್ವ ವ್ಯಕ್ತಿಗೆ ಎರಡು ಡೋಸ್​ಗಿಂತ ಹೆಚ್ಚು ಕೊರೊನಾ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿರುವುದರಿಂದ ಆತನಿಗೆ ನಿರಾಸೆಯಾಗಿದೆ.

ಎರಡಕ್ಕಿಂತ ಹೆಚ್ಚು ಡೋಸ್ ಕೊರೊನಾ ಲಸಿಕೆಯನ್ನು ಪಡೆಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮತ್ತೊಮ್ಮೆ ಕೊರೊನಾ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇರಳದ 50 ವರ್ಷದ ಗಿರಿಕುಮಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದವರು. ನನಗೆ ಕೊವ್ಯಾಕ್ಸಿನ್ ಲಸಿಕೆಯಿಂದ ಆರೋಗ್ಯ ಸುಧಾರಿಸಿಲ್ಲ. ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿರುವ ನಾನು ಆಗಸ್ಟ್ 30ರೊಳಗೆ ಅಲ್ಲಿಗೆ ವಾಪಾಸ್ ಹೋಗಬೇಕು. ಇಲ್ಲವಾದರೆ ನನ್ನ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ. ಸೌದಿ ಅರೇಬಿಯಾದಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದ ಕಾರಣ ನನಗೆ ಕೋವಿಶೀಲ್ಡ್​ ಲಸಿಕೆ ಹಾಕಿ ಎಂದು ಕೋರ್ಟ್​ನಲ್ಲಿ ಅವರು ಮನವಿ ಮಾಡಿದ್ದಾರೆ.

ಕಳೆದ ಜನವರಿಯಲ್ಲಿ ಸೌದಿ ಅರೇಬಿಯಾದಿಂದ ಕೇರಳಕ್ಕೆ ಬಂದಿದ್ದ ಗಿರಿ ಕುಮಾರ್ ಕೊವ್ಯಾಕ್ಸಿನ್ ಲಸಿಕೆ ಪಡೆದಿದ್ದರು. ಆದರೆ, ಸೌದಿಯಲ್ಲಿ ಕೊವ್ಯಾಕ್ಸಿನ್​ಗೆ ಮಾನ್ಯತೆ ಇಲ್ಲ ಎಂದು ಗೊತ್ತಾದ ಬಳಿಕ ಚಿಂತಿತರಾದ ಅವರು ಕೋವಿಶೀಲ್ಡ್​ ಹಾಕಿಸಿಕೊಳ್ಳಲು ಮುಂದಾಗಿದ್ದರು.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ

MEA Helpline Number: ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಸಹಾಯವಾಣಿ ಆರಂಭ

(Kerala man files plea in High Court for Covishield after taking both doses of Covaxin Vaccine)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ