AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹೆಂಡತಿಯನ್ನು ಕೊಂದು ಕೊಳಕ್ಕೆ ಶವ ಎಸೆದ ಗಂಡ

ಕೇರಳದಲ್ಲಿ ಭೀಕರ ಕೊಲೆಯೊಂದು ಬೆಳಕಿಗೆ ಬಂದಿದೆ. ತನ್ನ ಹೆಂಡತಿಯನ್ನು ಕೊಲೆ ಮಾಡಿದ ಗಂಡ ಆಕೆಯ ಮೃತದೇಹವನ್ನು ಕೊಳಕ್ಕೆ ಎಸೆದಿದ್ದಾನೆ. ಈ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೇರಳದ ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ ಬಳಿ ಈ ಘಟನೆ ನಡೆದಿದೆ. ತನಿಖೆಯ ಸಮಯದಲ್ಲಿ ಪೊಲೀಸರು ಜಾರ್ಜ್‌ನನ್ನು ಪ್ರಶ್ನಿಸಿದರು. ಆಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಆತನನ್ನು ಬಂಧಿಸಲಾಯಿತು.

ಕೇರಳದಲ್ಲಿ ಹೆಂಡತಿಯನ್ನು ಕೊಂದು ಕೊಳಕ್ಕೆ ಶವ ಎಸೆದ ಗಂಡ
Crime
ಸುಷ್ಮಾ ಚಕ್ರೆ
|

Updated on:Oct 03, 2025 | 10:57 PM

Share

ಕೊಟ್ಟಾಯಂ, ಅಕ್ಟೋಬರ್ 3: ತನ್ನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತ್ನಿಯನ್ನು ಕೊಂದು ಆಕೆಯ ಶವವನ್ನು ಕೊಳಕ್ಕೆ ಎಸೆದ ಆರೋಪದ ಮೇಲೆ ಕೇರಳದ (Kerala) 59 ವರ್ಷದ ವ್ಯಕ್ತಿಯೊಬ್ಬನನ್ನು ಇಂದು ಬಂಧಿಸಲಾಗಿದೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ ಬಳಿ ಈ ಘಟನೆ ನಡೆದಿದೆ. ಸ್ಯಾಮ್ ಜಾರ್ಜ್ ಸಂಜೆ 6 ಗಂಟೆ ಸುಮಾರಿಗೆ ಮನೆಗೆ ನುಗ್ಗಿ, ಪತ್ನಿಯ ಕತ್ತು ಹಿಸುಕಿ ಕೊಂದು, ಆಕೆಯ ಶವವನ್ನು ಕಾರಿನ ಬೂಟಿನಲ್ಲಿ ಇರಿಸಿಕೊಂಡು, ನಂತರ ಇಡುಕ್ಕಿ ಜಿಲ್ಲೆಯ ಉಡುಂಬನ್ನೂರ್ ಬಳಿಯ ಕೊಳದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಜ್ ಕಳೆದ 15 ವರ್ಷಗಳಿಂದ ತನ್ನ ಪತ್ನಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದನು. ಎರಡು ಅಂತಸ್ತಿನ ಮನೆಯಲ್ಲಿ ಮೇಲೆ ಆತ ವಾಸವಾಗಿದ್ದರೆ ಕೆಳಗಿನ ಮಹಡಿಯಲ್ಲಿ ಆತನ ಹೆಂಡತಿ ವಾಸವಾಗಿದ್ದಳು. ಆತ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಅವನ ಪತ್ನಿ ಜೆಸ್ಸಿ (49) ತಮ್ಮ ಮೂವರು ಮಕ್ಕಳೊಂದಿಗೆ ಇದ್ದರು. ಮಕ್ಕಳು ವಿದೇಶಕ್ಕೆ ತೆರಳಿದ ನಂತರ, ಜೆಸ್ಸಿ ಕಳೆದ 6 ತಿಂಗಳಿನಿಂದ ಒಂಟಿಯಾಗಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ

ಜಾರ್ಜ್ ಕೂಡ ಕೆಲಸಕ್ಕಾಗಿ ವಿದೇಶದಲ್ಲಿಯೇ ಇದ್ದು, ಕಳೆದ 6 ತಿಂಗಳಿನಿಂದ ಎಂಜಿ ವಿಶ್ವವಿದ್ಯಾಲಯದಲ್ಲಿ ಪ್ರವಾಸೋದ್ಯಮದಲ್ಲಿ ಸ್ನಾತಕೋತ್ತರ ಕೋರ್ಸ್ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದೇಶದಲ್ಲಿದ್ದ ಮಕ್ಕಳು ಎಷ್ಟೇ ಫೋನ್ ಮಾಡಿದರೂ ಸೆಪ್ಟೆಂಬರ್ 26ರಿಂದ ತಮ್ಮ ತಾಯಿಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದರು. ಅವರು ಪೊಲೀಸರೊಂದಿಗೆ ಅವರ ಮನೆಯನ್ನು ಹುಡುಕಿದರು. ಆದರೆ ಏನೂ ಸಿಕ್ಕಿರಲಿಲ್ಲ.

ಆರಂಭದಲ್ಲಿ, ನಾಪತ್ತೆ ಪ್ರಕರಣ ದಾಖಲಾಗಿತ್ತು. ತನಿಖೆಯ ಸಮಯದಲ್ಲಿ ಪೊಲೀಸರು ಜಾರ್ಜ್‌ನನ್ನು ಪ್ರಶ್ನಿಸಿದರು. ಆಗ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಆತನನ್ನು ಬಂಧಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Fri, 3 October 25

Follow Us
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ