AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ

ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

Shocking News: ಹೊಟ್ಟೆಯಲ್ಲಿ 1 ಕೆಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ಭೂಪ; ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ
ಚಿನ್ನದ ಸ್ಮಗ್ಲಿಂಗ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 20, 2022 | 11:24 AM

Share

ತಿರುವನಂತಪುರಂ: ಹೊಟ್ಟೆಯಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಸ್ಮಗ್ಲಿಂಗ್ (Gold Smuggling) ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕೇರಳದ (Kerala) ಕರಿಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿ 36 ವರ್ಷದ ನೌಫಲ್ ತನ್ನ ಹೊಟ್ಟೆಯಲ್ಲಿ 4 ಚಿನ್ನದ ಕ್ಯಾಪ್ಸುಲ್‌ಗಳನ್ನು ಸಾಗಿಸುತ್ತಿದ್ದನು. ಆತ ಮಲಪ್ಪುರಂ (Malappuram) ಜಿಲ್ಲೆಯ ನಿವಾಸಿಯಾಗಿದ್ದಾನೆ. ವರದಿಗಳ ಪ್ರಕಾರ, ನೌಫಲ್ ಸೆಪ್ಟೆಂಬರ್ 19ರಂದು ದುಬೈನಿಂದ (Dubai) ಬಂದಿದ್ದ. ಆತ ಚಿನ್ನದ ಸ್ಮಗ್ಲಿಂಗ್ ಮಾಡುತ್ತಿದ್ದಾನೆ ಎಂಬ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಆತನನ್ನು ತಪಾಸಣೆ ಮಾಡಿದ್ದರು.

ತಮಗೆ ಸಿಕ್ಕ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ವಿಮಾನ ನಿಲ್ದಾಣದಲ್ಲಿ ಕೂಲಂಕುಷವಾಗಿ ಪರಿಶೀಲಿಸಿದರೂ ಎಲ್ಲೂ ಚಿನ್ನ ಪತ್ತೆಯಾಗಿರಲಿಲ್ಲ. ನಂತರ ಅವನನ್ನು ವೈದ್ಯಕೀಯ ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ಹೊಟ್ಟೆಯಲ್ಲಿ ಚಿನ್ನದ ಲೋಹ ಪತ್ತೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ವಿಮಾನ ನಿಲ್ದಾಣದಲ್ಲಿ ಈ ರೀತಿಯ 59 ಚಿನ್ನ ಕಳ್ಳಸಾಗಣೆ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Malur BJP: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಾಲೂರು ಆಸ್ಪತ್ರೆಗಳಲ್ಲಿ ಇಂದು ಜನಿಸಿದ 14 ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ!

ನೌಫಲ್ ತಮ್ಮ ಗುದನಾಳದಲ್ಲಿ 4 ಚಿನ್ನದ ಕ್ಯಾಪ್ಸುಲ್​ಗಳನ್ನು ಬಚ್ಚಿಟ್ಟುಕೊಂಡು ದುಬೈನಿಂದ ಬಂದಿದ್ದ. ಈ ಚಿನ್ನದ ತೂಕ 1.063 ಕೆಜಿ ಇತ್ತು. ಪೊಲೀಸರು ಆತನ ದೇಹ ಮತ್ತು ಲಗೇಜನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಆದರೆ, ಅವರಿಗೆ ಚಿನ್ನ ಪತ್ತೆಯಾಗಲಿಲ್ಲ. ಬಳಿಕ ಆತನನ್ನು ಕೊಂಡೊಟ್ಟಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ವಿವರವಾದ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ದೇಹದ ಎಕ್ಸ್-ರೇ ಹೊಟ್ಟೆಯೊಳಗೆ ಚಿನ್ನವನ್ನು ಹೊಂದಿರುವ ನಾಲ್ಕು ಕ್ಯಾಪ್ಸುಲ್​ಗಳು ಇರುವುದು ಪತ್ತೆಯಾಯಿತು. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್