Kerala Monkeypox: ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್​ ಕೇಸ್ ಪತ್ತೆ; ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ

ಕೇರಳದಲ್ಲಿ ಮಂಕಿಪಾಕ್ಸ್​ ಪ್ರಕರಣ ಪತ್ತೆಯಾಗಿರುವುದರಿಂದ ಈ ನಡುವೆ ಕೇಂದ್ರ ಸರ್ಕಾರವು ಕೇರಳ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ.

Kerala Monkeypox: ಕೇರಳದಲ್ಲಿ ಭಾರತದ ಮೊದಲ ಮಂಕಿಪಾಕ್ಸ್​ ಕೇಸ್ ಪತ್ತೆ; ತಜ್ಞರ ತಂಡ ಕಳುಹಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರImage Credit source: NDTV
Follow us
TV9 Web
| Updated By: Digi Tech Desk

Updated on:Jul 15, 2022 | 11:17 AM

ತಿರುವನಂತಪುರಂ: ಯುಎಇಯಿಂದ (UAE) ವಾಪಸಾದ ವ್ಯಕ್ತಿಯೊಬ್ಬರಿಗೆ ಕೇರಳದಲ್ಲಿ ಮಂಕಿಪಾಕ್ಸ್​ (Monkeypox) ದೃಢಪಡುವ ಮೂಲಕ ಕೇರಳದಲ್ಲಿ (Kerala Monkeypox) ಭಾರತದಲ್ಲೇ ಮೊದಲ ಮಂಕಿಪಾಕ್ಸ್​ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ತಿಳಿಸಿದ್ದರು. ಮಂಗಳವಾರ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಂಕಿಪಾಕ್ಸ್​ ರೋಗಿಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಸಚಿವೆ ತಿಳಿಸಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರವು ಕೇರಳ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ.

ಕೇರಳಕ್ಕೆ ಕೇಂದ್ರ ಸರ್ಕಾರ ಕಳುಹಿಸಿರುವ ತಂಡವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಡಾ. RML ಆಸ್ಪತ್ರೆ, ನವದೆಹಲಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು, ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಯ ತಜ್ಞರನ್ನು ಒಳಗೊಂಡಿದೆ.

ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಮಂಕಿಪಾಕ್ಸ್​ ತಗುಲಿರುವ ರೋಗಿಯ ಸ್ಥಿತಿ ಗಂಭೀರವಾಗಿಲ್ಲ. ಅವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನಿನ್ನೆ ಹೇಳಿದ್ದರು. ರೋಗಿಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಅವರ ಪ್ರಾಥಮಿಕ ಸಂಪರ್ಕಗಳನ್ನು ಗುರುತಿಸಲಾಗಿದೆ. ಅವರ ತಂದೆ, ತಾಯಿ, ಟ್ಯಾಕ್ಸಿ ಚಾಲಕ, ಆಟೋ ಚಾಲಕ ಮತ್ತು ಪಕ್ಕದ ಸೀಟ್​ನಲ್ಲಿ ಕುಳಿತು ವಿಮಾನದಲ್ಲಿ ಪ್ರಯಾಣಿಸಿದ್ದ 11 ಸಹ ಪ್ರಯಾಣಿಕರನ್ನು ಗುರುತಿಸಲಾಗಿದೆ.

ಇದನ್ನೂ ಓದಿ
Image
ಮಂಕಿಪಾಕ್ಸ್: ಯುರೋಪ್​​​ನಲ್ಲಿ ತುರ್ತು ಕ್ರಮ ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಕರೆ
Image
Monkeypox: ಮಂಕಿಪಾಕ್ಸ್​ ಸೋಂಕನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ
Image
Monkeypox ಮಂಕಿಪಾಕ್ಸ್‌ ಎದುರಿಸಲು ಭಾರತ ಸಿದ್ಧ ಎಂದ ಐಸಿಎಂಆರ್; ಸಾಮೂಹಿಕ ಲಸಿಕೆ ಅಗತ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ
Image
Monkeypox alert: ಆಫ್ರಿಕಾ, ಯುರೋಪ್ ಮತ್ತು ಅಮೇರಿಕನ್ ದೇಶಗಳಗಳಲ್ಲಿ ಮಂಕಿಪಾಕ್ಸ್ ಹೊಸ ಸಾಂಕ್ರಾಮಿಕ ರೋಗ ಪತ್ತೆ

ಇದನ್ನೂ ಓದಿ: Monkeypox: ಮಂಕಿಪಾಕ್ಸ್​ ರೋಗದ ಲಕ್ಷಣಗಳೇನು? ಯಾವಾಗ ಚಿಕಿತ್ಸೆ ಪಡೆಯಬೇಕು?

ಇದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪತ್ರ ಬರೆದಿತ್ತು. ಯುರೋಪ್ ಮತ್ತು ಅಮೆರಿಕಾದಲ್ಲಿನ ಮಂಕಿಪಾಕ್ಸ್​ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಸರ್ಕಾರವು ಮೇ ತಿಂಗಳಲ್ಲಿ ಪ್ರತ್ಯೇಕತೆ ಮತ್ತು ಸಂಪರ್ಕ- ಪತ್ತೆಹಚ್ಚುವಿಕೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಿತ್ತು.

ಕೇರಳದ ವ್ಯಕ್ತಿ ಮಂಕಿಪಾಕ್ಸ್​ ವೈರಸ್ ಸೋಂಕಿಗೆ ಒಳಗಾಗಿದ್ದು, ಅವರುಕೊಲ್ಲಂ ಜಿಲ್ಲೆಯವರಾಗಿದ್ದಾರೆ ಎನ್ನಲಾಗಿದೆ. ಅವರು ಜುಲೈ 12 ರಂದು ಯುಎಇಯಿಂದ ಹಿಂದಿರುಗಿದ್ದರು. ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ರೋಗಲಕ್ಷಣದ ವ್ಯಕ್ತಿಯ ಮಾದರಿಗಳ ಪರೀಕ್ಷೆಯ ಮೂಲಕ ಪ್ರಕರಣವು ದೃಢಪಟ್ಟಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಕ್ರೀನಿಂಗ್, ಟೆಸ್ಟಿಂಗ್: ಮಂಕಿಪಾಕ್ಸ್​ ಕುರಿತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಹೊಸ ಮಾರ್ಗಸೂಚಿ

ಈ ವಾರದ ಆರಂಭದಲ್ಲಿ 63 ದೇಶಗಳಿಂದ 9,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು WHO ಹೇಳಿದೆ. ಮಂಕಿಪಾಕ್ಸ್ ಒಂದು ವೈರಲ್ ಝೂನೋಟಿಕ್ ಕಾಯಿಲೆಯಾಗಿದ್ದು, ಸಿಡುಬಿನಂತೆಯೇ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಈ ರೋಗದ ಹರಡುವಿಕೆ ವೇಗವಾಗಿದ್ದರೂ ಅದರಿಂದ ಜೀವ ಕಳೆದುಕೊಳ್ಳುವ ಆತಂಕ ಕಡಿಮೆ ಎನ್ನಲಾಗಿದೆ. ಇಲ್ಲಿಯವರೆಗೆ, ಭಾರತದಲ್ಲಿ ಮಂಕಿಪಾಕ್ಸ್ ವೈರಸ್ ಪ್ರಕರಣಗಳು ವರದಿಯಾಗಿಲ್ಲ. ಜುಲೈ 11ರ ಹೊತ್ತಿಗೆ ಅಮೆರಿಕಾದಲ್ಲಿ ಮಂಕಿಪಾಕ್ಸ್​ನ ಸುಮಾರು 800 ಪ್ರಕರಣಗಳು ದಾಖಲಾಗಿತ್ತು. ಆದರೆ, ಜಾಗತಿಕವಾಗಿ 57 ದೇಶಗಳಲ್ಲಿ 8,200ಕ್ಕೂ ಹೆಚ್ಚು ಮಂಕಿಪಾಕ್ಸ್​ ಪ್ರಕರಣಗಳು ಪತ್ತೆಯಾಗಿದೆ.

Published On - 9:57 am, Fri, 15 July 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್