ಕೇರಳ: ಕ್ರಿಶ್ಚಿಯನ್ನರ ಸಭೆ, ಎಲ್ಲರೂ ಕಣ್ಮುಚ್ಚಿ ಪ್ರಾರ್ಥಿಸುವ ವೇಳೆಯೇ ಸ್ಫೋಟ, ಉಗ್ರರ ಕೈವಾಡ ಶಂಕೆ

|

Updated on: Oct 29, 2023 | 12:42 PM

ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಣ್ಣು ಮುಚ್ಚಿ ಪ್ರಾರ್ಥಿಸುವ ಸಮಯದಲ್ಲಿಯೇ ಸ್ಫೋಟ ಸಂಭವಿಸಿದೆ, ಸಾಕಷ್ಟು ಮಂದಿಗೆ ಏನು ನಡೆಯುತ್ತಿದೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

ಕೇರಳ: ಕ್ರಿಶ್ಚಿಯನ್ನರ ಸಭೆ, ಎಲ್ಲರೂ ಕಣ್ಮುಚ್ಚಿ ಪ್ರಾರ್ಥಿಸುವ ವೇಳೆಯೇ ಸ್ಫೋಟ, ಉಗ್ರರ ಕೈವಾಡ ಶಂಕೆ
ಸ್ಫೋಟ
Image Credit source: Times Of India
Follow us on

ಕೇರಳದ ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ 3-4 ಸ್ಪೋಟಗಳು ಸಂಭವಿಸಿವೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಣ್ಣು ಮುಚ್ಚಿ ಪ್ರಾರ್ಥಿಸುವ ಸಮಯದಲ್ಲಿಯೇ ಸ್ಫೋಟ ಸಂಭವಿಸಿದೆ, ಸಾಕಷ್ಟು ಮಂದಿಗೆ ಏನು ನಡೆಯುತ್ತಿದೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

ಕ್ರಿಶ್ಚಿಯನ್ನರನ್ನು ಗುರಿಯಾಗಿಸಿ ದಾಳಿ ನಡೆದಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ, ಸಭಾಂಗಣದಲ್ಲಿ 2 ಸಾವಿರ ಮಂದಿ ಇದ್ದರು. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸ್ಪೋಟಕ್ಕೆ ಸಂಬಂಧಿಸಿದಂತೆ ಸರ್ಕಾರ ವಿವರಗಳನ್ನು ಸಂಗ್ರಹಿಸುತ್ತಿದೆ, ಇದೊಂದು ದುರದೃಷ್ಟಕರ ಘಟನೆ, ಎಲ್ಲಾ ಉನ್ನತ ಅಧಿಕಾರಿಗಳು ಎರ್ನಾಕುಲಂಗೆ ತಲುಪಿದ್ದಾರೆ, ಡಿಜಿಪಿ ಸ್ಥಳದಲ್ಲಿದ್ದಾರೆ, ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸ್ಥಳಕ್ಕೆ ಎನ್​ಐಎ ತಂಡ ತೆರಳಿದ್ದು, ಸ್ಪೋಟದ ಬಗ್ಗೆ ತನಿಖೆ ನಡೆಸಲಿದೆ.

ಮತ್ತಷ್ಟು ಓದಿ: Kerala: ಎರ್ನಾಕುಲಂನ ಕನ್ವೆನ್​ಷನ್​ ಸೆಂಟರ್​ನಲ್ಲಿ ಸ್ಪೋಟ, ಓರ್ವ ಸಾವು, 20ಕ್ಕೂ ಅಧಿಕ ಜನರಿಗೆ ಗಾಯ

ಸಮಾವೇಶ ಕೇಂದ್ರದಲ್ಲಿ ನಡೆಯುತ್ತಿರುವ ಮೂರು ದಿನಗಳ ಕಾರ್ಯಕ್ರಮಕ್ಕೆ ಇಂದು ಕೊನೆಯ ದಿನವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟ ಸಂಭವಿಸಿದಾಗ ಎರಡು ಸಾವಿರಕ್ಕೂ ಹೆಚ್ಚು ಜನರು ಸಭಾಂಗಣದಲ್ಲಿ ಇದ್ದರು. ಒಂದರ ಹಿಂದೆ ಒಂದರಂತೆ 3-4 ಸ್ಫೋಟಗಳು ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಸ್ಫೋಟದ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಅವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಮತ್ತು ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ಮತ್ತು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣೆ ನೀಡುವಲ್ಲಿ ಪೊಲೀಸರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಶಾ ಭರವಸೆ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ