Nipah Virus: ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು, ಸಹಾಯಕ್ಕೆ ಧಾವಿಸಿದ ಕೇಂದ್ರ ಆರೋಗ್ಯ ತಂಡ

ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಜ್ವರದಿಂದ ಇಬ್ಬರು ಮೃತಪಟ್ಟಿದ್ದು, ಇದೀಗ ಈ ಇಬ್ಬರು ನಿಫಾ(Nipah) ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಖಚಿತಪಡಿಸಿದ್ದಾರೆ. ಇಂದು ಬೆಳಿಗ್ಗೆ ಈ ಸಾವನ್ನು ಅಸಹಜ ಎಂದು ಹೇಳಲಾಗಿತ್ತು. ಆದರೆ ಇದೀಗ ಕೇಂದ್ರ ಆರೋಗ್ಯ ಸಚಿವಾಲಯ ಈ ಸಾವು ನಿಪಾ ವೈರಸ್​​ನಿಂದ ಸಂಭವಿಸಿದೆ ಎಂದು ತಿಳಿಸಿದೆ.

Nipah Virus: ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ನಿಫಾ ವೈರಸ್‌ನಿಂದ ಇಬ್ಬರು ಸಾವು, ಸಹಾಯಕ್ಕೆ ಧಾವಿಸಿದ ಕೇಂದ್ರ ಆರೋಗ್ಯ ತಂಡ
ಬಾವುಲಿImage Credit source: The Nature Conservancy
Follow us
ನಯನಾ ರಾಜೀವ್
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 12, 2023 | 6:10 PM

ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಜ್ವರದಿಂದ ಇಬ್ಬರು ಮೃತಪಟ್ಟಿದ್ದು, ಇದೀಗ ಈ ಇಬ್ಬರು ನಿಫಾ(Nipah) ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು (ಸೆ.12) ಖಚಿತಪಡಿಸಿದ್ದಾರೆ. ಇಂದು ಬೆಳಿಗ್ಗೆ ಈ ಸಾವನ್ನು ಅಸಹಜ ಎಂದು ಹೇಳಲಾಗಿತ್ತು. ಆದರೆ ಇದೀಗ ಕೇಂದ್ರ ಆರೋಗ್ಯ ಸಚಿವಾಲಯ ಈ ಸಾವು ನಿಫಾ ವೈರಸ್​​ನಿಂದ ಸಂಭವಿಸಿದೆ ಎಂದು ತಿಳಿಸಿದೆ. ಇನ್ನು ಕೇರಳ ಸರ್ಕಾರಕ್ಕೆ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ ನಿಪಾ ವೈರಸ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಲು ಕೇಂದ್ರ ತಂಡವನ್ನು ಕೇರಳಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಕೇರಳದ ಆರೋಗ್ಯ ಇಲಾಖೆಯು ನಿಫಾ ವೈರಸ್ ಎಚ್ಚರಿಕೆಯನ್ನು ನೀಡಿದ್ದು. ಇಬ್ಬರದ್ದು ಅಸಹಜ ಸಾವು ಎಂದು ಹೇಳಿತ್ತು. ಆದರೆ ಇದೀಗ ಈ  ಸಾವು ,ನಿಫಾ ವೈರಸ್​ನಿಂದ  ಸಂಭವಿಸಿದೆ ಎಂದು ಅಧಿಕೃತವಾಗಿ ದೃಢಪಡಿಸಿದೆ.  ಮೃತರ ಪೈಕಿ ಒಬ್ಬರ ಸಂಬಂಧಿಕರು ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ನಿಟ್ಟಿನಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಹಿಂದೆ 2018ರಲ್ಲಿ ಕೋಯಿಕ್ಕೋಡ್​ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಫಾ ಏಕಾಏಕಿ ಹಬ್ಬಿತ್ತು ನಂತರ 2021ರಲ್ಲಿ ಕೂಡ ಪ್ರಕರಣಗಳು ವರದಿಯಾಗಿತ್ತು.

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ನಿಫಾ ವೈರಸ್ ಬಾವಲಿಗಳಿಂದ ಹರಡುತ್ತದೆ. ಇದು ಮನುಷ್ಯ ಹಾಗೂ ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ಕಾಯಿಲೆಯ ಜತೆಗೆ ಇದು ಜ್ವರ, ಸ್ನಾಯು ಸೆಳೆತ, ತಲೆನೋವು, ತಲೆತಿರುಗುವಿಕೆ ಮತ್ತು ವಾಕರಿಕೆಗೆ ಕಾರಣವಾಗುತ್ತದೆ.

ನಿಫಾ ವೈರಸ್ ಕುರಿತು ಮಾಹಿತಿ

ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.

1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ.

ಮತ್ತಷ್ಟು ಓದಿ: Nipah Virus: ಕೇರಳದಲ್ಲಿ ಮತ್ತೆ ನಿಫಾ ವೈರಸ್ ಆತಂಕ, ಕೊರೊನಾದಷ್ಟೇ ಅಪಾಯಕಾರಿಯೇ?

ವೈರಸ್ ಹೇಗೆ ಹರಡುತ್ತದೆ? ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. (ಬಾವಲಿಗಳು ಕಚ್ಚಿದ ಹಣ್ಣನ್ನು ತಿನ್ನುವುದರಿಂದ ಹರಡುತ್ತದೆ) ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ ಬಾವಲಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ ಪ್ರಾಣಿಗಳಿಂದ ಪ್ರಾಣಿಗಳಿಗೆ ಹರಡುತ್ತದೆ

ನಿಪಾ ವೈರಸ್ ಲಕ್ಷಣಗಳೇನು?

– ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ -ಪ್ರಜ್ಞಾಹೀನರಾಗುತ್ತಾರೆ – ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ -ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ -ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ -ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:02 am, Tue, 12 September 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್