ಲೈಂಗಿಕ ಕಿರುಕುಳ ಆರೋಪ: ಚಿತ್ರ ನಿರ್ಮಾಪಕ ರಂಜಿತ್ ವಿರುದ್ಧ ಎಫ್ಐಆರ್ ದಾಖಲಿಸಿದ ಕೇರಳ ಪೊಲೀಸ್
ರಂಜಿತ್ ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ.
ಕೊಚ್ಚಿ ಆಗಸ್ಟ್ 27: ಮಲಯಾಳಂ ಚಿತ್ರರಂಗದಲ್ಲಿ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿದ್ದು ಸೋಮವಾರ ಕೇರಳ ಪೊಲೀಸರು ಚಲನಚಿತ್ರ ನಿರ್ಮಾಪಕ ರಂಜಿತ್ ( filmmaker Ranjith) ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ (Sreelekha Mitra) ಅವರು ಕೊಚ್ಚಿ ನಗರ ಪೊಲೀಸ್ ಕಮಿಷನರ್‌ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ರಂಜಿತ್ ವಿರುದ್ಧ ಆರೋಪ
ರಂಜಿತ್ ಅವರು ವರ್ಷಗಳ ಹಿಂದೆ ಸ್ಕ್ರಿಪ್ಟ್ ಕುರಿತು ಚರ್ಚಿಸುವಾಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ಮಿತ್ರ ಆರೋಪಿಸಿದ್ದಾರೆ. “ಸಂಬಂಧಿಸಿದ ವ್ಯಕ್ತಿ (ರಂಜಿತ್) ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಘಟನೆ ನಂತರ ನಾನು ಆ ಪ್ರಾಜೆಕ್ಟ್ ನಲ್ಲಿ ಭಾಗಿಯಾಗಲು ನಿರಾಕರಿಸಿ ಕೋಲ್ಕತ್ತಾಗೆ ಮರಳಿದೆ ಎಂದು ನಟಿ ಹೇಳಿದ್ದಾರೆ.
ಅವರು ಚಿತ್ರರಂಗದ ಇತರ ನಟಿಯರೊಂದಿಗೆ ಅದೇ ರೀತಿ ನಡೆಸಿಕೊಂಡಿದ್ದಾರೆಯೇ ಎಂದು ನನಗೆ ಗೊತ್ತಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ಬಹಿರಂಗಪಡಿಸುವುಗು ಅವರಿಗೆ ಬಿಟ್ಟದ್ದು. ಬಹುಶಃ ನಿರ್ದೇಶಕ ರ ಶಕ್ತಿ ಮತ್ತು ಪ್ರಭಾವವು ಇತರರು ಮಾತನಾಡದಿರುವಂತೆ ತಡೆಯುತ್ತಿದೆ ಎಂದಿದ್ದಾರೆ ಶ್ರೀಲೇಖಾ. ಆದಾಗ್ಯೂ, ನಟಿಯ ಆರೋಪಗಳನ್ನು ತಿರಸ್ಕರಿಸಿದ ರಂಜಿತ್, ಪ್ರಕರಣದಲ್ಲಿ ನಾನೇ “ನಿಜವಾದ ಸಂತ್ರಸ್ತ” ಎಂದು ಹೇಳಿದ್ದಾರೆ.
ಆರೋಪದ ಹಿನ್ನೆಲೆಯಲ್ಲಿ ರಂಜಿತ್ ಅವರು ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿ, ರಂಜಿತ್ ಅವರು ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:‘ರೂಂಗೆ ಕರೆದು..’; ಯುವ ನಟಿಗೆ ಲೈಂಗಿಕ ಕಿರುಕುಳ ನೀಡಿದ ಹಿರಿಯ ನಟ
ಮಾಲಿವುಡ್‌ನಲ್ಲಿ ಲೈಂಗಿಕ ದೌರ್ಜನ್ಯದ ಆರೋಪ
ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕಿರುಕುಳ ಮತ್ತು ನಿಂದನೆಗೆ ಸಂಬಂಧಿಸಿದ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯ ಪರಿಣಾಮ ಬೀರುತ್ತಿದೆ., ಹಲವಾರು ನಟಿಯರು, ತಮ್ಮ ಮೇಲೆ ನಟರು ದೌರ್ಜನ್ಯ, ಕಿರುಕುಳಗಳ ಬಗ್ಗೆ ಮಾತನಾಡಲು ಧೈರ್ಯ ತೋರಿದ್ದಾರೆ.
ಮಲಯಾಳಂನ ಹಿರಿಯ ನಟ ಸಿದ್ದಿಕ್ ತನ್ನ ಮೇಲೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ನಟಿ ರೇವತಿ ಸಂಪತ್ ಆರೋಪಿಸಿದ್ದಾರೆ. ಮಾಧ್ಯಮ ಸಂವಾದದಲ್ಲಿ ರೇವತಿ ಅವರು 21 ವರ್ಷದವಳಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ