AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್

ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದೆ.

Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್
ಕೇರಳ ಮಳೆImage Credit source: DNA
TV9 Web
| Edited By: |

Updated on:May 21, 2022 | 4:11 PM

Share

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಲ್ಲಿನ 10 ಜಿಲ್ಲೆಗಳಲ್ಲಿ ಇಂದು ಮತ್ತು ಭಾನುವಾರ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇದರ ನಡುವೆ ಇಡುಕ್ಕಿ (Idukki) ಜಿಲ್ಲಾಡಳಿತ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಕಲ್ಲರ್ಕುಟ್ಟಿ ಮತ್ತು ಪಾಂಬ್ಲಾ ಅಣೆಕಟ್ಟುಗಳ ಗೇಟ್​ಗಳನ್ನು ತೆರೆದಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಿದೆ. ಮೇ 22ರಂದು ವಯನಾಡ್‌ನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀಗಿಂತ ಹೆಚ್ಚಿನ ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ, ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀನಿಂದ 20 ಸೆಂ.ಮೀವರೆಗೆ ಮಳೆಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಹಳದಿ ಎಚ್ಚರಿಕೆ ಎಂದರೆ 6ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ ಎಂಬುದರ ಮುನ್ನೆಚ್ಚರಿಕೆ. ಕಲ್ಲರ್ಕುಟ್ಟಿ ಅಣೆಕಟ್ಟಿನ ನೀರಿನ ಮಟ್ಟ 455 ಮೀಟರ್‌ಗೆ ತಲುಪಿರುವುದರಿಂದ ನೀರು ಬಿಡಲು ಶಟರ್‌ಗಳನ್ನು ತೆರೆಯಲಾಗಿದೆ ಎಂದು ಇಡುಕ್ಕಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡಗಾಡು ಜಿಲ್ಲೆಯ ಪಾಂಬ್ಲಾ ಅಣೆಕಟ್ಟಿನ ಪ್ರಕರಣದಂತೆಯೇ, ಅಧಿಕಾರಿಗಳು 500 ಕ್ಯುಮೆಕ್ ನೀರು ಬಿಡಲು ಶಟರ್‌ಗಳನ್ನು ತೆರೆದಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪೆರಿಯಾರ್ ನದಿಯ ದಡದ ಜನರಿಗೆ ನೀರಿನ ಒಳಹರಿವಿನಿಂದ ಜಾಗರೂಕರಾಗಿರಲು ತಿಳಿಸಿದೆ. ಕೇರಳದ ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ
Image
ದೆಹಲಿಯಲ್ಲಿ ಭಾರೀ ಮಳೆ; ರಕ್ಷಣಾ ಸಚಿವ ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳ ಮಾರ್ಗ ಬದಲು
Image
ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
Image
Karnataka Rain: ಮಲೆನಾಡಿನಲ್ಲಿ ಮಳೆಯ ಅಬ್ಬರ ಇಳಿಕೆ; ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ
Image
Kerala Rain: ಕೇರಳದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ

ಇದನ್ನೂ ಓದಿ: Karnataka Rain: ಮಲೆನಾಡಿನಲ್ಲಿ ಮಳೆಯ ಅಬ್ಬರ ಇಳಿಕೆ; ಕರಾವಳಿಯಲ್ಲಿ ಇನ್ನೆರಡು ದಿನ ಭಾರೀ ಮಳೆ

IMD ವೆಬ್‌ಸೈಟ್ ಪ್ರಕಾರ, ಮೇ 12ರಿಂದ 18ರ ಅವಧಿಯಲ್ಲಿ ಕೇರಳವು ಶೇ. 237ರಷ್ಟು ಅಧಿಕ ಮಳೆಯನ್ನು ಪಡೆದಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಕೇರಳದಲ್ಲಿ 47.3 ಮಿಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ ಕೇರಳದಲ್ಲಿ 159.3 ಮಿಮೀ ಮಳೆಯಾಗಿದೆ. ಕೇರಳದಲ್ಲಿ ಎಡವಪತಿ ಎಂದೂ ಕರೆಯಲ್ಪಡುವ ನೈಋತ್ಯ ಮಾನ್ಸೂನ್, ಮೇ 27ರೊಳಗೆ ಕೇರಳಕ್ಕೆ ತನ್ನ ಮೊದಲ ಮಳೆಯನ್ನು ಸಾಮಾನ್ಯ ಆರಂಭದ ದಿನಾಂಕಕ್ಕಿಂತ 5 ದಿನಗಳ ಮುಂಚಿತವಾಗಿ ತರುವ ಸಾಧ್ಯತೆಯಿದೆ ಎಂದು IMD ಮೊದಲೇ ಮುನ್ಸೂಚನೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Sat, 21 May 22

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು