AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rains: ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಸಾವು, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Rain Updates: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹಲವೆಡೆ ಭೂಕುಸಿತ ಉಂಟಾಗಿದೆ, ಸೇತುವೆಗಳು ಮುರಿದುಬಿದ್ದಿವೆ. ಈಗಾಗಲೇ ಕೇರಳದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ. ತಾಲೂಕು ಕಚೇರಿಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಕೂಡ ತೆರೆಯಲಾಗಿದೆ.

Kerala Rains: ಕೇರಳದಲ್ಲಿ ಧಾರಾಕಾರ ಮಳೆ; ನಾಲ್ವರು ಸಾವು, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ
ಸುಷ್ಮಾ ಚಕ್ರೆ
|

Updated on:May 23, 2024 | 2:45 PM

Share

Kerala Weather Today: ತಿರುವನಂತಪುರಂ: ಕೇರಳದ (Kerala Rains) ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದು ನಾಲ್ವರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಕೇರಳದ 5 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದು (IMD) ರೆಡ್ ಅಲರ್ಟ್ (Red Alert) ಘೋಷಿಸಿದೆ. ಹವಾಮಾನ ಇಲಾಖೆಯಿಂದ ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಕೇರಳ ರಾಜ್ಯಾದ್ಯಂತ 4 ಸಾವುಗಳು ವರದಿಯಾಗಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂಗೆ ಮೊದಲು ಆರೆಂಜ್ ಅಲರ್ಟ್‌ ಘೋಷಿಸಲಾಗಿತ್ತು. ಆದರೆ, ನಂತರ ಆರೆಂಜ್ ಅಲರ್ಟ್ ತೆಗೆಯಲಾಗಿತ್ತು. ಇದೀಗ ಈ ಭಾಗದಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Karnataka Rains: ಮೇ 29ರವರೆಗೆ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್:

ರೆಡ್ ಅಲರ್ಟ್ ಎಂದರೆ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುತ್ತದೆ. ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀನಿಂದ 20 ಸೆಂ.ಮೀ ವರೆಗಿನ ಅತಿ ಭಾರೀ ಮಳೆಯಾಗಿದೆ. ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗಿದೆ. ತಿರುವನಂತಪುರಂ, ಕೊಲ್ಲಂ, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಮುಂದುವರಿದಿದ್ದು, ಕಣ್ಣೂರು ಮತ್ತು ಕಾಸರಗೋಡಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: Remal Cyclone: ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ, ಈ ರಾಜ್ಯಗಳಲ್ಲಿ ಭಾರಿ ಮಳೆ

ಬುಧವಾರ ಸಂಜೆ ಸುರಿದ ಭಾರೀ ಮಳೆಯ ನಂತರ ಎರ್ನಾಕುಲಂ ಜಿಲ್ಲೆಯ ಕೊಚ್ಚಿನ್ ಸಿಟಿ ಕಾರ್ಪೊರೇಷನ್‌ನ ಕೆಲವು ಭಾಗಗಳು ಜಲಾವೃತಗೊಂಡಿವೆ. ಹಠಾತ್ ಮಳೆಗೆ ಕೊಚ್ಚಿಯ ಕೆಲವು ಭಾಗಗಳಲ್ಲಿ ಮನೆಗಳು ಮತ್ತು ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ತ್ರಿಶೂರ್ ನಗರದ ತಗ್ಗು ಪ್ರದೇಶಗಳು ಸಹ ಜಲಾವೃತವಾಗಿವೆ. ಮುಂದಿನ ಸೂಚನೆ ನೀಡುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕೆಎಸ್‌ಡಿಎಂಎ ಎಚ್ಚರಿಕೆ ನೀಡಿದೆ. ಗುರುವಾರ ರಾತ್ರಿಯವರೆಗೆ 0.4 ರಿಂದ 3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಮತ್ತು ದಕ್ಷಿಣದ ವಿಝಿಂಜಾಂನಿಂದ ಉತ್ತರದ ಕಾಸರಗೋಡುವರೆಗಿನ ಕೇರಳದ ಕರಾವಳಿಯಲ್ಲಿ ಸಮುದ್ರದ ಒಳನುಗ್ಗುವ ಮುನ್ಸೂಚನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 23 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ