Kerala Rain ಪ್ರವಾಹದಿಂದ ತತ್ತರಿಸಿದ ಕೇರಳದಲ್ಲಿ ಮತ್ತೆ ಮಳೆ ಸಾಧ್ಯತೆ; 35 ಮಂದಿ ಸಾವು

Kerala Floods ಬುಧವಾರದಿಂದ ಮೂರರಿಂದ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಸರ್ಕಾರವು ಹೆಚ್ಚಿನ ಪರಿಹಾರ ಶಿಬಿರಗಳನ್ನು ತೆರೆದಿದೆ ಮತ್ತು ಜನರು ತಮ್ಮ ಹಾನಿಗೊಳಗಾದ ಮನೆಗಳಿಗೆ ಹಿಂತಿರುಗದಂತೆ ಸೂಚಿಸಿದ್ದಾರೆ.

Kerala Rain ಪ್ರವಾಹದಿಂದ ತತ್ತರಿಸಿದ ಕೇರಳದಲ್ಲಿ ಮತ್ತೆ ಮಳೆ ಸಾಧ್ಯತೆ; 35 ಮಂದಿ ಸಾವು
ಕೇರಳದಲ್ಲಿ ಮಳೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 18, 2021 | 8:02 PM

ತಿರುವನಂತಪುರಂ: ಮಳೆಯಿಂದ ತತ್ತರಿಸಿರುವ ಕೇರಳದಲ್ಲಿ ಮಳೆ (Kerala Rains) ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಬುಧವಾರದಿಂದ 11 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಹಳದಿ ಎಚ್ಚರಿಕೆಯು ಕೆಟ್ಟ ಹವಾಮಾನವನ್ನು ಸೂಚಿಸುತ್ತದೆ. ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾದ ಕಾರಣ ಇದನ್ನು ನೀಡಲಾಯಿತು. ರಾಜ್ಯದ 10 ಅಣೆಕಟ್ಟುಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಪತ್ತನಂತಿಟ್ಟದ ಕಕ್ಕಿ ಅಣೆಕಟ್ಟಿನ ಶಟರ್‌ಗಳನ್ನು ತೆರೆಯಲಾಗಿದೆ.

ಪಂಪಾ ಮತ್ತು ಇತರ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಶಬರಿಮಲೆ ದೇವಸ್ಥಾನಕ್ಕೆ ತೀರ್ಥಯಾತ್ರೆ ಸ್ಥಗಿತಗೊಳಿಸಲಾಗಿದೆ ಎಂದು ಕಕ್ಕಿ ಅಣೆಕಟ್ಟಿನ ಗೇಟ್‌ಗಳನ್ನು ತೆರೆದ ನಂತರ ಮಾತನಾಡಿದ ರಾಜ್ಯ ಸಚಿವ ಕೆ ರಾಜನ್ ಹೇಳಿದ್ದಾರೆ. ಪಂಪಾ ನದಿಯಲ್ಲಿ ನೀರಿನ ಮಟ್ಟವು ಕನಿಷ್ಠ 15 ಸೆಂ.ಮೀ.ಗಳಷ್ಟು ಹೆಚ್ಚಾಗುತ್ತದೆ ಮತ್ತು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾತ್ರೆ ಮಾಡುವುದು ಸೂಕ್ತವಲ್ಲ. ನೆರೆಯ ರಾಜ್ಯಗಳಿಂದ ಕೋಟ್ಟಾಯಂ ಮತ್ತು ಪತ್ತನಂತಿಟ್ಟಕ್ಕೆ ಆಗಮಿಸಿದ ಅನೇಕ ಯಾತ್ರಾರ್ಥಿಗಳನ್ನು ವಾಪಸ್ ಕಳುಹಿಸಲಾಯಿತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಸೋಮವಾರ ತುರ್ತು ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಕೆಲವು ಅಣೆಕಟ್ಟುಗಳಿಂದ ನೀರನ್ನು ಬಿಡುಗಡೆ ಮಾಡುವುದನ್ನು ನಿಯಂತ್ರಿಸಲು ತಜ್ಞರ ಸಮಿತಿಯನ್ನು ರಚಿಸಿದರು. ತಜ್ಞರ ಸಮಿತಿಯು ಹವಾಮಾನ ತಜ್ಞರು, ಜಲವಿಜ್ಞಾನಿಗಳು, ರಚನಾತ್ಮಕ ಎಂಜಿನಿಯರ್‌ಗಳು ಮತ್ತು ಹವಾಮಾನ ತಜ್ಞರನ್ನು ಒಳಗೊಂಡಿದೆ. ಇದು ಎಲ್ಲಾ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವನ್ನು ಮೇಲ್ವಿಚಾರಣೆ ಮಾಡುತ್ತದೆ. “ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ವಿಜಯನ್ ಹೇಳಿದರು.

ಏಷ್ಯಾದ ಅತಿದೊಡ್ಡ ಕಮಾನು ಅಣೆಕಟ್ಟೆಯಾದ ಇಡುಕ್ಕಿ ಜಲಾಶಯದಲ್ಲಿನ ನೀರಿನ ಮಟ್ಟ ಸೋಮವಾರ ಏರಿಕೆಯಾಗಿದ್ದು, ಆರೆಂಜ್ ಎಚ್ಚರಿಕೆಯನ್ನು ನೀಡಿದೆ. ಈ ಜಲಾಶಯದ ಕೆಲವು ಗೇಟ್‌ಗಳನ್ನು ತೆರೆಯುವಂತೆ ಇಡುಕ್ಕಿ ಸಂಸತ್ ಸದಸ್ಯ ಡೀನ್ ಕುರಿಯಾಕೋಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬುಧವಾರದಿಂದ ಮೂರರಿಂದ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಸರ್ಕಾರವು ಹೆಚ್ಚಿನ ಪರಿಹಾರ ಶಿಬಿರಗಳನ್ನು ತೆರೆದಿದೆ ಮತ್ತು ಜನರು ತಮ್ಮ ಹಾನಿಗೊಳಗಾದ ಮನೆಗಳಿಗೆ ಹಿಂತಿರುಗದಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಶುಕ್ರವಾರ ಮತ್ತು ಶನಿವಾರ ಭಾರೀ ಮಳೆಯಾಗಿದ್ದು ಇದು ಕೋಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಿದೆ. ಇಡುಕ್ಕಿ ಜಿಲ್ಲೆಯ ಕೊಕ್ಕಾಯಾರ್​​ನಲ್ಲಿ  ನಾಪತ್ತೆಯಾದವರಿಗಾಗಿ ಅತ್ಯಂತ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಣಾ ತಂಡವು ಮೂರು ವರ್ಷದ ಮಗುವಿನ ದೇಹವನ್ನು ಸೋಮವಾರ ಅವಶೇಷಗಳಿಂದ ಹೊರತೆಗೆದಿದೆ. ಕೊಕ್ಕಾಯಾರ್‌ನಲ್ಲಿ ಮೃತಪಟ್ಟ ಎಂಟು ಜನರಲ್ಲಿ ಐದು ಮಕ್ಕಳ ಮೃತದೇಹವಿದೆ. ಕೋಟ್ಟಾಯಂ ಜಿಲ್ಲೆಯಲ್ಲಿ, ಮಳೆ-ಸಂಬಂಧಿತ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 14 ಕ್ಕೆ ಏರಿದೆ.

ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ವಿ ಡಿ ಸತೀಸನ್, ಪರಿಹಾರ ಕಾರ್ಯಾಚರಣೆ ವಿಳಂಬವಾಗಿದೆ ಮತ್ತು ಎಚ್ಚರಿಕೆಯನ್ನು ಸರಿಯಾಗಿ ತಿಳಿಸಲಾಗಿಲ್ಲ. “ಕೆಲವು ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ತಂಡಗಳು ದುರಂತದ ಒಂದು ದಿನದ ನಂತರ ತಲುಪಿದವು. ಗಂಭೀರ ಎಚ್ಚರಿಕೆಯ ಹೊರತಾಗಿಯೂ ಅದು ಹೇಗೆ ಸಂಭವಿಸಿತು? ನಮಗೆ ಸರ್ಕಾರದಿಂದ ಉತ್ತರ ಬೇಕು, “ಎಂದು ಹೇಳಿದರು. ಸರ್ಕಾರದ ಕಡೆಯಿಂದ ಯಾವುದೇ ರೀತಿಯ ವಿಳಂಬವಾಗಿಲ್ಲ ಎಂದು ರಾಜನ್ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Kerala Rain: ಕೇರಳ ಪ್ರವಾಹದ ಎಫೆಕ್ಟ್; ಅಡುಗೆ ಪಾತ್ರೆಯಲ್ಲಿ ಕುಳಿತು ಮಂಟಪ ತಲುಪಿದ ವಧು-ವರರು

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು