AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಭಾರೀ ಪ್ರವಾಹ; ಇನ್ನೆರಡು ದಿನ ಆರೆಂಜ್ ಅಲರ್ಟ್​ ಘೋಷಣೆ

ಸೆಪ್ಟೆಂಬರ್ 7ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರ್ನಾಟಕದಲ್ಲೂ ಸೆ. 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕೇರಳದಲ್ಲಿ ಭಾರೀ ಪ್ರವಾಹ; ಇನ್ನೆರಡು ದಿನ ಆರೆಂಜ್ ಅಲರ್ಟ್​ ಘೋಷಣೆ
ಕೇರಳದಲ್ಲಿ ಮಳೆImage Credit source: Live Mint
ಸುಷ್ಮಾ ಚಕ್ರೆ
|

Updated on: Sep 04, 2023 | 6:54 PM

Share

ಪಥನಾಂತಿಟ್ಟ: ಕೇರಳದಲ್ಲಿ (Kerala Rains) ಈ ವರ್ಷವೂ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರವರೆಗೂ ಕೇರಳದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (IMD) ಪಥನಾಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ (ಸೆ. 5) ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.

ಹಾಗೇ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಜಿಲ್ಲೆಗಳಿಗೆ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 5ರಂದು ಪಥನಾಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ. ಸೆಪ್ಟೆಂಬರ್ 6ರಂದು ಎರ್ನಾಕುಲಂ, ಇಡುಕ್ಕಿಯಲ್ಲಿ ಮಳೆಯಾಗಲಿದೆ. ಸೆಪ್ಟೆಂಬರ್ 7ರಂದು ಅಲಪ್ಪುಳ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಇದನ್ನೂ ಓದಿ:  ರಾಜ್ಯದಲ್ಲಿ ಮಳೆ ಕೊರತೆ, ಮೋಡ ಬಿತ್ತನೆ ಮೊರೆ ಹೋದ ಕಾಂಗ್ರೆಸ್ MLA; ಇಲ್ಲಿದೆ ವಿಡಿಯೋ

ಕೇರಳದ ಉತ್ತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವವರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಚಾಲ್ತಿಯಲ್ಲಿರುವ ಚಂಡಮಾರುತ ವ್ಯವಸ್ಥೆಯು ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಮಧ್ಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಸೆಪ್ಟೆಂಬರ್ 7ರವರೆಗೆ ಕೇರಳದ ಬಹುತೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕರ್ನಾಟಕದಲ್ಲೂ ಸೆ. 12ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ನಂತರ ಅಂದರೆ ಗುರುವಾರದಿಂದ 3 ದಿನ ಮಳೆಯಾಗಲಿದೆ. ನಂತರ ಸೆ.12ರವರೆಗೆ ತುಂತುರು ಮಳೆ ಸುರಿಯುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ