AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಇಂದಿನಿಂದ ಭಾರಿ ವಾಹನಗಳಲ್ಲಿ ಸೀಟ್​ಬೆಲ್ಟ್​, ಕ್ಯಾಮೆರಾ ಕಡ್ಡಾಯ

ಕೇರಳದಲ್ಲಿ ಇಂದಿನಿಂದ ಭಾರಿ ವಾಹನ(Heavy Vehicle)ಗಳಲ್ಲಿ ಸೀಟ್​ ಬೆಲ್ಟ್​ ಹಾಗೂ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದೆ. ರಸ್ತೆಯಲ್ಲಿ ಯಾವುದೇ ವಾಹನ ತಡೆದು ತಪಾಸಣೆ ನಡೆಸುವುದಿಲ್ಲ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ. ನವೆಂಬರ್ 1ರಿಂದ ಫಿಟ್ನೆಸ್ ಸರ್ಟಿಫಿಕೇಟ್ ಬೇಕಾದರೆ ಸೀಟ್ ಬೆಲ್ಟ್ ಮತ್ತು ಕ್ಯಾಮೆರಾ ಬೇಕು ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು. ಈ ನಿರ್ಧಾರದಿಂದ ಹಿಂದೆ ಸರಿದಿಲ್ಲ ಎಂದು ಸಚಿವರು ಹೇಳಿದರು.

ಕೇರಳ: ಇಂದಿನಿಂದ ಭಾರಿ ವಾಹನಗಳಲ್ಲಿ ಸೀಟ್​ಬೆಲ್ಟ್​, ಕ್ಯಾಮೆರಾ ಕಡ್ಡಾಯ
ಕೆಎಸ್​ಆರ್​ಟಿಸಿ Image Credit source: Kerala Kaumudi
ನಯನಾ ರಾಜೀವ್
|

Updated on: Nov 01, 2023 | 11:18 AM

Share

ಕೇರಳದಲ್ಲಿ ಇಂದಿನಿಂದ ಭಾರಿ ವಾಹನ(Heavy Vehicle)ಗಳಲ್ಲಿ ಸೀಟ್​ ಬೆಲ್ಟ್​ ಹಾಗೂ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದೆ. ರಸ್ತೆಯಲ್ಲಿ ಯಾವುದೇ ವಾಹನ ತಡೆದು ತಪಾಸಣೆ ನಡೆಸುವುದಿಲ್ಲ ಎಂದು ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ. ನವೆಂಬರ್ 1ರಿಂದ ಫಿಟ್ನೆಸ್ ಸರ್ಟಿಫಿಕೇಟ್ ಬೇಕಾದರೆ ಸೀಟ್ ಬೆಲ್ಟ್ ಮತ್ತು ಕ್ಯಾಮೆರಾ ಬೇಕು ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು. ಈ ನಿರ್ಧಾರದಿಂದ ಹಿಂದೆ ಸರಿದಿಲ್ಲ ಎಂದು ಸಚಿವರು ಹೇಳಿದರು.

ಸೀಟ್ ಬೆಲ್ಟ್ ಮತ್ತು ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಿದ್ದರೆ ಮಾತ್ರ ಭಾರೀ ವಾಹನಗಳಿಗೆ ಫಿಟ್‌ನೆಸ್ ಪ್ರಮಾಣಪತ್ರವನ್ನು ನೀಡುವುದಾಗಿ ಕೇರಳ ಸಾರಿಗೆ ಇಲಾಖೆ ತಿಳಿಸಿದೆ. ಹಾಗಾಗಿ ಇಂದಿನಿಂದ ಲಾರಿ, ಬಸ್ ಸೇರಿದಂತೆ ಭಾರೀ ವಾಹನಗಳ ಚಾಲಕರಿಗೆ ಸೀಟ್ ಬೆಲ್ಟ್ ಮತ್ತು ಕ್ಯಾಮೆರಾ ಕಡ್ಡಾಯಗೊಳಿಸಲಾಗಿದೆ.

ಅಕ್ಟೋಬರ್ 31ರೊಳಗೆ 5,200 ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸೀಟ್‌ ಬೆಲ್ಟ್‌ ಅಳವಡಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ಕೇರಳದ ಖಾಸಗಿ ಬಸ್ ಮಾಲೀಕರಿಂದ ಕಡ್ಡಾಯ ಸೀಟ್ ಬೆಲ್ಟ್ ಮತ್ತು ಕ್ಯಾಮೆರಾ ಸುಧಾರಣೆಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ.

ಈ ಹಿಂದೆಯೂ ಸಹ ಸಚಿವರು ವಿದ್ಯಾರ್ಥಿಗಳ ಪ್ರಯಾಣ ದರ ಏರಿಕೆಯನ್ನು ವಿಫಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ. ಮಾರ್ಚ್ 24, 2021 ರಿಂದ ಬಸ್ ಮಾಲೀಕರು ವಿದ್ಯಾರ್ಥಿಗಳ ಟಿಕೆಟ್ ದರವನ್ನು ಹೆಚ್ಚಿಸುವಂತೆ ಒತ್ತಾಯಿಸುತ್ತಿದ್ದಾರೆ. ಕನಿಷ್ಠ ರಿಯಾಯಿತಿ ದರವನ್ನು ರೂ 6 ಕ್ಕೆ ನಿಗದಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ದರವನ್ನು ಕೊನೆಯದಾಗಿ 2012ರಲ್ಲಿ ರೂ 2ಕ್ಕೆ ನಿಗದಿಪಡಿಸಲಾಗಿತ್ತು.

ನ್ಯಾಯಮೂರ್ತಿ ರಾಮಚಂದ್ರನ್ ಆಯೋಗವು ಮೇ 2022 ರಲ್ಲಿ ಸಾಮಾನ್ಯ ಏರಿಕೆಯೊಂದಿಗೆ ವಿದ್ಯಾರ್ಥಿಗಳ ಪ್ರಯಾಣ ದರವನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದ್ದರೂ, ವಿದ್ಯಾರ್ಥಿಗಳ ದರಗಳ ಶಿಫಾರಸನ್ನು ಅಧ್ಯಯನ ಮಾಡಲು ಯೋಜನಾ ಮಂಡಳಿಯ ಸದಸ್ಯ ಕೆ ರವಿ ರಾಮನ್ ನೇತೃತ್ವದ ಮತ್ತೊಂದು ಸಮಿತಿಯನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿತು.

ಮತ್ತಷ್ಟು ಓದಿ: ಕೇರಳದಲ್ಲಿ ನಾಳೆ ಖಾಸಗಿ ಬಸ್‌ ಮುಷ್ಕರ

ವಿದ್ಯಾರ್ಥಿಗಳಿಗೆ ಟಿಕೆಟ್ ದರ ಏರಿಕೆ, ಸೀಟ್ ಬೆಲ್ಟ್ ಜತೆಗೆ ಕಣ್ಗಾವಲು ಕ್ಯಾಮೆರಾ ಅಳವಡಿಸಬೇಕು ಎಂಬ ಆದೇಶವನ್ನು ಹಿಂಪಡೆಯುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರಾಕರಿಸಿದ್ದರಿಂದ ಮಂಗಳವಾರ ಮುಷ್ಕರ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ