ಕೇರಳದ ಎರ್ನಾಕುಲಂ ಸರಣಿ ಸ್ಫೋಟ ಪ್ರಕರಣ: ಸ್ಫೋಟದ ಹೊಣೆಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣು

 ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್​ ಬಾಕ್ಸ್​ನಿಂದ ಮೊದಲ ಸ್ಫೋಟ ಸಂಭವಿಸಿತ್ತು.

ಕೇರಳದ ಎರ್ನಾಕುಲಂ ಸರಣಿ ಸ್ಫೋಟ ಪ್ರಕರಣ: ಸ್ಫೋಟದ ಹೊಣೆಹೊತ್ತು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣು
ಕೇರಳ ಸ್ಫೋಟImage Credit source: Mangalore Today
Follow us
|

Updated on:Oct 29, 2023 | 3:28 PM

ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್​ ಬಾಕ್ಸ್​ನಿಂದ ಮೊದಲ ಸ್ಫೋಟ ಸಂಭವಿಸಿತ್ತು.

ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್​ಷನ್​ ಸೆಂಟರ್​ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಆತಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ,  ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್​ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್​ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಕೇರಳ: ಟಿಫಿನ್ ಬಾಕ್ಸ್​ನಲ್ಲಿತ್ತು ಸ್ಫೋಟಕಗಳು, ಬೆಳಗ್ಗೆ 9.40ಕ್ಕೆ ಸಂಭವಿಸಿತ್ತು ಮೊದಲ ಸ್ಫೋಟ

ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದರು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.

ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್​ಷನ್ ಸೆಂಟರ್​ ಒಳಗೆ ಟಿಫಿನ್​ ಬಾಕ್ಸ್​ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇಂದು ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಪ್ರಾರ್ಥನೆ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಕ್ಟೋಬರ್ 27 ರಂದು ಸಭೆ ಆರಂಭವಾಗಿತ್ತು, ಇವತ್ತು ಮೂರನೇ ದಿನದ ಸಭೆ ನಡೆಯುತ್ತಿತ್ತು, ಕ್ರಿಶ್ಚಿಯನ್​ ಸಮುದಾಯಕ್ಕೆ ಸೇರಿದ ಸಭೆ ಇದಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:24 pm, Sun, 29 October 23

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ