ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್ ಬಾಕ್ಸ್ನಿಂದ ಮೊದಲ ಸ್ಫೋಟ ಸಂಭವಿಸಿತ್ತು.
ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್ಷನ್ ಸೆಂಟರ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಆತಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ, ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ.
ಮತ್ತಷ್ಟು ಓದಿ: ಕೇರಳ: ಟಿಫಿನ್ ಬಾಕ್ಸ್ನಲ್ಲಿತ್ತು ಸ್ಫೋಟಕಗಳು, ಬೆಳಗ್ಗೆ 9.40ಕ್ಕೆ ಸಂಭವಿಸಿತ್ತು ಮೊದಲ ಸ್ಫೋಟ
ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದರು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.
ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್ಷನ್ ಸೆಂಟರ್ ಒಳಗೆ ಟಿಫಿನ್ ಬಾಕ್ಸ್ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಇಂದು ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ, ಪ್ರಾರ್ಥನೆ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಕ್ಟೋಬರ್ 27 ರಂದು ಸಭೆ ಆರಂಭವಾಗಿತ್ತು, ಇವತ್ತು ಮೂರನೇ ದಿನದ ಸಭೆ ನಡೆಯುತ್ತಿತ್ತು, ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಸಭೆ ಇದಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:24 pm, Sun, 29 October 23