Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ.

Kerala Weather: ಕೇರಳದಲ್ಲಿ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು, ನಿಮ್ಮ ಆರೋಗ್ಯ ಜೋಪಾನ ಮಾಡುವುದು ಹೇಗೆ?
ಉಷ್ಣಗಾಳಿImage Credit source: Indian Express
Follow us
ನಯನಾ ರಾಜೀವ್
|

Updated on: Mar 10, 2023 | 12:01 PM

ಈ ವರ್ಷ ಕೊರೆಯುವ ಚಳಿಯ ಬಳಿಕ ಬಿಸಿಲ ಝಳ ತೀರಾ ಹೆಚ್ಚಾಗಿದೆ. ಕೇರಳದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ತೀರಾ ಏರಿಕೆಯಾಗಿದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ. ವರ್ಷದ ಹಿಂದೆ ಅತಿವೃಷ್ಟಿಯಿಂದ ಕೇರಳ ನಲುಗಿಹೋಗಿತ್ತು, ಇದೀಗ ದಾಖಲೆ ಮುರಿಯುವ ತಾಪಮಾನದಿಂದಾಗಿ ತತ್ತರಿಸಿದೆ. ಕೇರಳದಲ್ಲಿ ಈಗಷ್ಟೇ ಬೇಸಿಗೆ ಆರಂಭವಾಗಿದ್ದರೂ ಕೂಡ ಈಗಾಗಲೇ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದು ಗಂಭೀರ ಆರೋಗ್ಯ ಅಪಾಯವನ್ನುಂಟುಮಾಡುತ್ತದೆ. ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ,ಕೋಳಿಕ್ಕೋಡ್, ಕಣ್ಣೂರಿನಲ್ಲಿ 45-54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿತ್ತು. ದೀರ್ಘಕಾಲದವರೆಗೆ ಸೂರ್ಯನಿಗೆ ಒಡ್ಡಿಕೊಂಡರೆ ಆಯಾಸಕ್ಕೆ ಕಾರಣವಾಗಬಹುದು. ಕರ್ನಾಟಕದ ಕರಾವಳಿ ಭಾಗದಲ್ಲಿ ಕೂಡ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ಉಷ್ಣಗಾಳಿಯಿಂದ ರಕ್ಷಿಸಿಕೊಳ್ಳುವುದು ಹೇಗೆ? ಈ ಹೀಟ್​ ವೇವ್ ಶಾರೀರಿಕ ಒತ್ತಡಕ್ಕೆ ಕಾರಣವಾಗಬಹುದು, ಇದು ಸಾವಿಗೆ ಕಾರಣವಾಗಬಹುದು. ಶಾಖದ ಅಲೆಯ ಸಮಯದಲ್ಲಿ ಪ್ರಭಾವವನ್ನು ಕಡಿಮೆ ಮಾಡಲು ಮಾಡಬೇಕಾದ ವಿಷಯಗಳು ಇಲ್ಲಿವೆ:

ಮತ್ತಷ್ಟು ಓದಿ: Health benefits of Buttermilk: ಶಾಖದ ಅಲೆ ಹೆಚ್ಚಾಗುತ್ತಿದೆ, ಮಜ್ಜಿಗೆ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ

-ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ. -ಬಾಯಾರಿಕೆಯಿಲ್ಲದಿದ್ದರೂ, ಸಾಧ್ಯವಾದಷ್ಟು ಹೆಚ್ಚಾಗಿ ಸಾಕಷ್ಟು ನೀರು ಕುಡಿಯಿರಿ -ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. -ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ -ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ. -ಫ್ಯಾನ್‌ಗಳು, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ. -ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್