AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆ

ಕೇರಳದಲ್ಲಿರುವ ಅಬಕಾರಿ ಅಧಿಕಾರಿಗಳ ಸಮುಚ್ಚಯದಲ್ಲಿ ಮೂವರ ಕೊಳೆತ ಶವ ಪತ್ತೆಯಾಗಿದೆ. ಮೃತರನ್ನು ಹಿರಿಯ ಕಸ್ಟಮ್ಸ್ ಅಧಿಕಾರಿ, ಅವರ ಸಹೋದರಿ ಮತ್ತು ತಾಯಿ ಎಂದು ಶಂಕಿಸಲಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಿಂದಾಗಿ ಗುರುತಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆ
ಪ್ರಾತಿನಿಧಿಕ ಚಿತ್ರImage Credit source: India Today
Follow us
ನಯನಾ ರಾಜೀವ್
|

Updated on: Feb 21, 2025 | 10:29 AM

ಕೊಚ್ಚಿ, ಫೆಬ್ರವರಿ 21: ಕೇರಳದ ಕೊಚ್ಚಿಯಲ್ಲಿರುವ ಕೇಂದ್ರ ಅಬಕಾರಿ ಅಧಿಕಾರಿಗಳ ವಸತಿ ಸಮುಚ್ಚಯದಲ್ಲಿ ಮೂರು ಕೊಳೆತ ಶವಗಳು ಪತ್ತೆಯಾಗಿವೆ. ಕೊಚ್ಚಿಯ ಕಕ್ಕನಾಡ್​ನಲ್ಲಿರುವ ಸಮುಚ್ಚಯದಲ್ಲಿ ಶವ ಸಿಕ್ಕಿದ್ದು, ಮೃತರನ್ನು ಹಿರಿಯ ಕಸ್ಟಮ್ಸ್ ಅಧಿಕಾರಿ, ಅವರ ಸಹೋದರಿ ಮತ್ತು ತಾಯಿ ಎಂದು ಶಂಕಿಸಲಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭಾವಿಸಲಾಗಿದೆ. ಶವಗಳ ತೀವ್ರವಾಗಿ ಕೊಳೆತ ಸ್ಥಿತಿಯಿಂದಾಗಿ ಗುರುತಿಸುವುದು ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮುಚ್ಚಯ ಲಾಕ್ ಆಗಿತ್ತು, ಗಂಟೆಗಳ ಪ್ರಯತ್ನದ ನಂತರ ಅಧಿಕಾರಿಗಳು ಕಟ್ಟಡದ ಸುತ್ತಮುತ್ತಲು ಪರಿಶೀಲಿಸಿದರು. ಅಲ್ಲಿ ವಾಸಿಸುವ ಅಧಿಕಾರಿ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಆದರೆ ಅವರು ಕೆಲಸಕ್ಕೆ ಮರಳದಿದ್ದಾಗ ಅಹೋದ್ಯೋಗಿಗಳು ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅವರು ಕಿಟಕಿಯ ಮೂಲಕ ನೋಡಿದಾಗ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಯಿತು. ಅವರು ಮನೆಗೆ ಬಂದಾಗ ಮತ್ತೊಂದು ಕೋಣೆಯಲ್ಲಿ ಇನ್ನೊಂದು ಶವ ಇರುವುದು ಕಂಡುಬಂದಿದೆ. ನಂತರದ ಹುಡುಕಾಟಗಳಲ್ಲಿ ಮತ್ತೊಂದು ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದ ಅಧಿಕಾರಿಯ ತಾಯಿಯದ್ದಾಗಿರಬಹುದು ಎಂದು ಶಂಕಿಸಲಾಗಿದೆ. ಒಟ್ಟು ಮೂರು ಶವಗಳು ಪತ್ತೆಯಾಗಿವೆ.

ಮತ್ತಷ್ಟು ಓದಿ: ಇಲಿ ಸತ್ತಿರಬಹುದೆಂದು ಕೆಟ್ಟ ವಾಸನೆ ಬಗ್ಗೆ ಪಂಚಾಯ್ತಿಗೆ ದೂರು: ಸ್ವಚ್ಚತೆ ಮಾಡುವಾಗ ಸಿಕ್ತು ಕೊಳೆತ ಶವ

ಕುಟುಂಬವು ಕಳೆದ ಒಂದೂವರೆ ವರ್ಷದಿಂದ ಸಮುಚ್ಚಯದಲ್ಲಿ ವಾಸಿಸುತ್ತಿತ್ತು, ಆದರೆ ನೆರೆಹೊರೆಯವರೊಂದಿಗೆ ಅಷ್ಟಾಗಿ ಮಾತನಾಡುತ್ತಿರಲಿಲ್ಲ. ಕೊಳೆತ ದೇಹಗಳು ಪ್ರದೇಶದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದು, ಅನುಮಾನಗಳನ್ನು ಹುಟ್ಟುಹಾಕಿದೆ. ಎಲ್ಲರ ಸಾವು ಆತ್ಮಹತ್ಯೆಯೇ ಎಂಬುದನ್ನು ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಮುಚ್ಚಯದಲ್ಲಿ ಕ್ವಾರ್ಟರ್ಸ್‌ನಲ್ಲಿ ವಿಧಿವಿಜ್ಞಾನ ತಂಡದ ಪರಿಶೀಲನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ