ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ; ಕೇರಳದ ವಿಶ್ವವಿದ್ಯಾಲಯದಿಂದ ಐತಿಹಾಸಿಕ ನಿರ್ಧಾರ

| Updated By: ಸುಷ್ಮಾ ಚಕ್ರೆ

Updated on: Jan 14, 2023 | 4:30 PM

ಕುಸಾಟ್‌ನಲ್ಲಿರುವ ಮಹಿಳಾ ವಿದ್ಯಾರ್ಥಿನಿಯರು ಋತುಚಕ್ರದ ರಜೆ ಪಡೆಯಬಹುದು. ಅವರ ಹಾಜರಾತಿಯಲ್ಲಿ ಒಂದು ತ್ರೈಮಾಸಿಕಕ್ಕೆ ಶೇ. 2ರಷ್ಟು ಹಾಜರಾತಿಯನ್ನು ಹೆಚ್ಚುವರಿಯಾಗಿ ನೀಡಲಾಗುವುದು.

ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ; ಕೇರಳದ ವಿಶ್ವವಿದ್ಯಾಲಯದಿಂದ ಐತಿಹಾಸಿಕ ನಿರ್ಧಾರ
ಸಾಂದರ್ಭಿಕ ಚಿತ್ರ
Image Credit source: Zee News
Follow us on

ಕೊಚ್ಚಿ: ಇದೇ ಮೊದಲ ಬಾರಿಗೆ ಕೇರಳದ ವಿಶ್ವವಿದ್ಯಾಲಯವೊಂದು (Kerala University) ತನ್ನ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ (menstrual leave) ನೀಡಲು ನಿರ್ಧರಿಸಿದೆ. ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವಿಶ್ವವಿದ್ಯಾನಿಲಯವು ಕೊನೆಗೂ ವಿದ್ಯಾರ್ಥಿನಿಯರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದೆ. ಇದರಿಂದ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಕುಸಾಟ್‌ನಲ್ಲಿರುವ ಮಹಿಳಾ ವಿದ್ಯಾರ್ಥಿನಿಯರು ಋತುಚಕ್ರದ ರಜೆ ಪಡೆಯಬಹುದು. ಅವರ ಹಾಜರಾತಿಯಲ್ಲಿ ಒಂದು ತ್ರೈಮಾಸಿಕಕ್ಕೆ ಶೇ. 2ರಷ್ಟು ಹಾಜರಾತಿಯನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಪ್ರಸ್ತುತ ಶೇ. 75ರಷ್ಟು ಹಾಜರಾತಿ ಇದ್ದವರು ಮಾತ್ರ ಸೆಮಿಸ್ಟರ್ ಪರೀಕ್ಷೆ ಬರೆಯಬಹುದು. ಇದಕ್ಕಿಂತ ಕಡಿಮೆ ಹಾಜರಾತಿ ಇದ್ದಲ್ಲಿ ಉಪಕುಲಪತಿಗಳಿಗೆ ಅರ್ಜಿ ಸಲ್ಲಿಸಿ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಆದರೆ, ಮುಟ್ಟಿನ ರಜೆಗೆ ವೈದ್ಯಕೀಯ ಪ್ರಮಾಣಪತ್ರದ ಅಗತ್ಯವಿಲ್ಲ.

ಇದನ್ನೂ ಓದಿ: Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ

ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನೇತೃತ್ವದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವು ವಿಶ್ವವಿದ್ಯಾನಿಲಯಕ್ಕೆ ಋತುಚಕ್ರದ ರಜೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿತ್ತು. ಒಕ್ಕೂಟದ ಮಧ್ಯಸ್ಥಿಕೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಆದೇಶವು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವವರು ಸೇರಿದಂತೆ ಎಲ್ಲಾ ಸ್ಟ್ರೀಮ್‌ಗಳ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ ಮತ್ತು ತಕ್ಷಣದಿಂದಲೇ ಜಾರಿಗೆ ಬರುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ