ಕೇರಳದಲ್ಲಿ ಹುಲಿಯ ಶವ ಪತ್ತೆ, ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ

ಕಳೆದ ಎರಡು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದೆ. ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೇರಳದಲ್ಲಿ ಹುಲಿಯ ಶವ ಪತ್ತೆ, ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ
ಹುಲಿ

Updated on: Jan 28, 2025 | 9:36 AM

ಕೇರಳದಲ್ಲಿ ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಶವವಾಗಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ, ಕಿವಿಯೋಲೆ ಪತ್ತೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದೆ.

ನಾಲ್ಕರಿಂದ ಐದು ವರ್ಷ ವಯಸ್ಸಿನ ಹೆಣ್ಣು ಹುಲಿಯನ್ನು ಸೋಮವಾರ ಬೆಳಗ್ಗೆ ವನ್ಯಜೀವಿ ಸಿಬ್ಬಂದಿಯ ತಂಡ ಗುರುತಿಸಿ ಬೆನ್ನಟ್ಟಿದ್ದು, ನಂತರ ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ.
, ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ಅರಣ್ಯ ಅಧಿಕಾರಿಗಳು ಹುಲಿಯ ಕುತ್ತಿಗೆಯಲ್ಲಿ ಹೊಸತಾದ ಮತ್ತು ಆಳವಾದ ಗಾಯಗಳು ಪತ್ತೆಯಾಗಿದ್ದು ಅದು ಸಾವಿಗೆ ಕಾರಣವಾಯಿತು ಎಂದು ಹೇಳಿದರು.

ಕಾಡಿನಲ್ಲಿ ಮತ್ತೊಂದು ಹುಲಿಯೊಂದಿಗೆ ಕಾದಾಟದ ಸಂದರ್ಭದಲ್ಲಿ ಈ ಗಾಯಗಳು ಸಂಭವಿಸಿವೆ ಎಂದು ಹೇಳಲಾಗುತ್ತಿದೆ.
ಶನಿವಾರ ಪಂಚರಕೋಲಿ ಪ್ರದೇಶದಲ್ಲಿ ರಾಧಾ ಎಂಬ ಮಹಿಳೆಯನ್ನು ಕೊಂದಿದ್ದು ಇದೇ ಹುಲಿ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕೂದಲು, ಬಟ್ಟೆ ಮತ್ತು ಕಿವಿಯೋಲೆಗಳು ಅದರ ಹೊಟ್ಟೆಯಲ್ಲಿ ಪತ್ತೆಯಾಗಿವೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ: ತಲೆ, ಉಗುರು ಕದ್ದೊಯ್ದ ಖದೀಮರು

ಇದಕ್ಕೂ ಮೊದಲು, ಮಹಿಳೆಯ ಸಾವು ಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು, ಭಾನುವಾರ ರಾಜ್ಯ ಸರ್ಕಾರವು ಹುಲಿಯನ್ನು ‘ನರಭಕ್ಷಕ’ ಎಂದು ಘೋಷಿಸಲು ಮತ್ತು ಅದನ್ನು ಕೊಲ್ಲಲು ಆದೇಶಿಸುವಂತೆ ಒತ್ತಾಯಿಸಲಾಯಿತು.
ಕರ್ನಾಟಕದ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ವಯನಾಡು ಜಿಲ್ಲೆಯಲ್ಲಿ ಹುಲಿ ಗದ್ದಲ ಮೂರು ದಿನದಿಂದ ಜೋರಾಗಿದೆ.

ಕರ್ನಾಟಕದ ನಾಗರಹೊಳೆ, ಬಂಡೀಪುರ, ಕೇರಳದ ವಯನಾಡು ಹಾಗೂ ತಮಿಳುನಾಡಿನ ಮದುಮಲೈ ಹುಲಿಧಾಮಗಳ ಹೊಂದಿಕೊಂಡಂತೆ ಇರುವುದರಿಂದ ಈ ಪ್ರದೇಶಗಳಲ್ಲಿ ಹುಲಿ ಸಂಖ್ಯೆ ಹೆಚ್ಚಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us