AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Rains: ಕೇರಳದಲ್ಲಿ ಮಳೆಯ ಆರ್ಭಟ; 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ

Kerala Weather Updates: ಭಾರತ ಮುಂಗಾರು ಮಳೆಯ ಆಗಮನದ ನಿರೀಕ್ಷೆಯಲ್ಲಿದೆ. ಮುಂಗಾರು ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳದ ದಕ್ಷಿಣ ಭಾಗಕ್ಕೆ ಆಗಮಿಸುತ್ತದೆ. ಅದಾದ ನಂತರ ಭಾರತದ ಇತರೆ ರಾಜ್ಯಗಳಲ್ಲಿ ಮಳೆ ಶುರುವಾಗುತ್ತದೆ. ಆದರೆ, ಇದೀಗ ಕೇರಳದಲ್ಲಿ ಮಾನ್ಸೂನ್ ಪ್ರವೇಶವಾಗುವುದಕ್ಕೂ ಮೊದಲೇ ಮಳೆಯ ಅಬ್ಬರ ಶುರುವಾಗಿದೆ.

Kerala Rains: ಕೇರಳದಲ್ಲಿ ಮಳೆಯ ಆರ್ಭಟ; 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ
ಮಳೆ
ಸುಷ್ಮಾ ಚಕ್ರೆ
|

Updated on: May 15, 2024 | 9:19 PM

Share

ತಿರುವನಂತಪುರಂ: ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ (Kerala Rain) ಬಹುತೇಕ ಭಾಗಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು (Weather Today) ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ​(Yellow Alert) ಘೋಷಿಸಿದೆ. ಭಾರೀ ಮಳೆಯಾದರೆ ಮಣಿಯಾರ್ ಅಣೆಕಟ್ಟಿನ ಶೆಟರ್‌ಗಳನ್ನು ಮೇಲಕ್ಕೆತ್ತುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಇದರ ನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. ಸಾಮಾನ್ಯವಾಗಿ, ಜೂನ್ 10ರೊಳಗೆ ಮುಂಗಾರು ಮಹಾರಾಷ್ಟ್ರವನ್ನು ಪ್ರವೇಶಿಸುತ್ತದೆ. ಈ ವರ್ಷ ಅದು ಸರಿಯಾದ ಸಮಯಕ್ಕೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 15ರ ವೇಳೆಗೆ ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಬಿಹಾರಕ್ಕೆ ಮುಂಗಾರು ಪ್ರವೇಶಿಸಬಹುದು. ಜೂನ್ 20-25ರ ನಡುವೆ ಮುಂಗಾರು ಉತ್ತರ ಪ್ರದೇಶ, ಹಿಮಾಚಲ, ಉತ್ತರಾಖಂಡ ಮತ್ತು ಕಾಶ್ಮೀರವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಮಾನ್ಸೂನ್ ಜೂನ್ 30ರಂದು ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್‌ಗೆ ಅಪ್ಪಳಿಸಬಹುದು. ಇದು ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ.

ಇದನ್ನೂ ಓದಿ: Monsoon 2024: ಮೇ ತಿಂಗಳಲ್ಲೇ ಭಾರತ ಪ್ರವೇಶಿಸಲಿದೆ ಮುಂಗಾರು, ಯಾವ್ಯಾವ ರಾಜ್ಯಗಳಲ್ಲಿ ಯಾವಾಗ ಮಳೆ?

ತಿರುವನಂತಪುರದಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 34 ಡಿಗ್ರಿ ಸೆಲ್ಸಿಯಸ್ ಇತ್ತು. ಬುಧವಾರ ರಾತ್ರಿ 11.30ರವರೆಗೆ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಯಾವ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ?:

ಭಾರೀ ಮಳೆಯಿಂದಾಗಿ ಇಂದು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿತ್ತು.

ಮೇ 16: ಪಥನಾಂತಿಟ್ಟ, ಎರ್ನಾಕುಲಂ, ಇಡುಕ್ಕಿ

ಮೇ 17: ತಿರುವನಂತಪುರಂ, ಕೊಲ್ಲಂ, ಪಥನಾಂತಿಟ್ಟ, ಇಡುಕ್ಕಿ, ಪಲಕ್ಕಾಡ್, ಮಲಪ್ಪುರಂ.

ಮೇ 18: ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ, ಪಥನಾಂತಿಟ್ಟ, ಎರ್ನಾಕುಲಂ, ಇಡುಕ್ಕಿ.

ಮೇ 19: ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಕೊಟ್ಟಾಯಂ, ಪಥನಾಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಲಕ್ಕಾಡ್, ಮಲಪ್ಪುರಂ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತೇ ಧಾರಾಕಾರ ಮಳೆ, ವಾರದಲ್ಲಿ ನಾಲ್ಕನೇ ಬಾರಿ ಸುರಿದ ಮಳೆರಾಯ!

ಹಳದಿ ಅಲರ್ಟ್ 24 ಗಂಟೆಗಳಲ್ಲಿ 64.5 – 115.5 ಮಿಮೀ ವರೆಗಿನ ಮಳೆಯನ್ನು ಸೂಚಿಸುತ್ತದೆ. ಮೇ 15-18ರವೆರೆಗೆ ಕೇರಳ ರಾಜ್ಯದಲ್ಲಿ ಭಾರೀ ಮಳೆ, ಗುಡುಗು, ಮಿಂಚು ಮತ್ತು ರಭಸದ ಗಾಳಿ ಇರಲಿದೆ. ಮೇ 19ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬುಧವಾರ ಮತ್ತು ಗುರುವಾರದಂದು ದಕ್ಷಿಣ ಕೇರಳ ಕರಾವಳಿಯುದ್ದಕ್ಕೂ ಗಾಳಿಯ ವೇಗ ಗಂಟೆಗೆ 40-45 ಕಿ.ಮೀ ಇರಲಿದೆ.

ಕರ್ನಾಟಕದಲ್ಲೂ ಇಂದಿನಿಂದ 1 ವಾರಗಳ ಕಾಲ ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಕೂಡ ಶುಕ್ರವಾರದ ನಂತರ ಮಳೆ ಜೋರಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ