ಕೇರಳದಲ್ಲಿ ಬಿರುಗಾಳಿ ಸಹಿತ ಮಳೆ; 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ
Kerala Weather Today: ಜೂನ್ ತಿಂಗಳಿನಲ್ಲಿ ಕೇರಳದಲ್ಲಿ ಶೇ.60ರಷ್ಟು ಕಡಿಮೆ ಮಳೆ ದಾಖಲಾಗಿದ್ದರೆ, ಜುಲೈ ತಿಂಗಳಿನಲ್ಲಿ ಶೇ.9ರಷ್ಟು ಕಡಿಮೆ ಮಳೆಯಾಗಿದೆ. ಕಳೆದ 123 ವರ್ಷಗಳ ಇತಿಹಾಸದಲ್ಲೇ ಕೇರಳದಲ್ಲಿ ಈ ಬಾರಿ ಆಗಸ್ಟ್ ತಿಂಗಳಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ.
ತಿರುವನಂತಪುರಂ: ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು (ಶನಿವಾರ) ಕೂಡ ಬಿರುಗಾಳಿ ಬೀಸಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕೇರಳದ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ 10 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.
ಅರೇಬಿಯನ್ ಸಮುದ್ರದ ಕೊಂಕಣ-ಗೋವಾ ಕರಾವಳಿ ಮತ್ತು ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದ ಕರಾವಳಿಯಲ್ಲಿ ಪಶ್ಚಿಮ ಮಾರುತಗಳು ಪ್ರಬಲಗೊಂಡಿವೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಜನರಿಗೆ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ. ರೂಢಿಯಂತೆ 2023ರ 122 ದಿನಗಳ ಮಾನ್ಸೂನ್ ಅಂತ್ಯಗೊಳ್ಳಲು ಕೇವಲ 1 ದಿನ ಬಾಕಿಯಿದೆ. ಈ ನಡುವೆ ಕೇರಳದಲ್ಲಿ ಮಳೆ ಮತ್ತೆ ಪ್ರಾರಂಭವಾಗಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಅಧಿಕ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಜೂನ್ ತಿಂಗಳಿನಲ್ಲಿ ಕೇರಳದಲ್ಲಿ ಶೇ.60ರಷ್ಟು ಕಡಿಮೆ ಮಳೆ ದಾಖಲಾಗಿದ್ದರೆ, ಜುಲೈ ತಿಂಗಳಿನಲ್ಲಿ ಶೇ.9ರಷ್ಟು ಕಡಿಮೆ ಮಳೆಯಾಗಿದೆ. ಕಳೆದ 123 ವರ್ಷಗಳ ಇತಿಹಾಸದಲ್ಲೇ ಕೇರಳದಲ್ಲಿ ಈ ಬಾರಿ ಆಗಸ್ಟ್ ತಿಂಗಳಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ.
ಇತ್ತ ಕರ್ನಾಟಕದ ಕರಾವಳಿಯಲ್ಲೂ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಕಳೆದ 15 ದಿನಗಳಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಳಿದಂತೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಮಳೆ ಇಳಿಮುಖವಾಗಿದೆ. ಉತ್ತರ ಕರ್ನಾಟಕದ ಭಾಗದಲ್ಲೂ ಮಳೆ ಕಡಿಮೆಯಾಗಿದೆ.
ಇದನ್ನೂ ಓದಿ: Karnataka Weather: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ
ಕರ್ನಾಟಕ ಹೊರತುಪಡಿಸಿ, ಅಂಡಮಾನ್ ದ್ವೀಪಗಳು, ತಮಿಳುನಾಡಿನ ಕರಾವಳಿ, ಉತ್ತರ ಪ್ರದೇಶ, ಲಡಾಖ್, ಜಮ್ಮು-ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಭಾರೀ ಮಳೆಯಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ