AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿ ಬಿಡುಗಡೆ, ಸುರಕ್ಷಿತವಾಗಿ ತವರಿಗೆ ಆಗಮನ

ಜಾಗತಿಕವಾಗಿ ಭಾರತ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಮತ್ತೊಮ್ಮೆ ಭಾರತ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಇಸ್ರೇನ್ ಮೇಲಿನ ಯುದ್ದದ ನಡುವೆ ಇರಾನ್ ಸೀಜ್ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ ಸುರಕ್ಷಿತವಾಗಿ ಮರಳಿದ್ದಾರೆ.

ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿ ಬಿಡುಗಡೆ, ಸುರಕ್ಷಿತವಾಗಿ ತವರಿಗೆ ಆಗಮನ
TV9 Web
| Edited By: |

Updated on: Apr 18, 2024 | 8:26 PM

Share

ನವದೆಹಲಿ, (ಏಪ್ರಿಲ್.18) ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಲವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇರಾನ್ ಸತತವಾಗಿ ದಾಳಿ ನಡೆಸುತ್ತಿದೆ. ಈ ದಾಳಿಗೂ ಮೊದಲು ಇಸ್ರೇಲ್ ಮೂಲದ ಹಡಗಿನ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿತ್ತು. ಈ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿಗಳು ಸಿಲುಕಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಭಾರತ, ರಾಜತಾಂತ್ರಿಕ ಮಾತುಕತೆ ನಡೆಸಿ ಇದೀಗ ಈ ಹಡಗಿನಲ್ಲಿದ್ದ ಭಾರತೀಯ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ತವರಿಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದೆ. ಕೇರಳದ ತ್ರಿಶೂರು ಮೂಲದ ಆ್ಯನ್ ತೀಸಾ ಜೊಸೆಫ್ (ann tessa joseph) ಮನೆಗೆ ಮರಳಿದ್ದಾರೆ.  ಈ ಹಿನ್ನೆಲೆಯಲ್ಲಿ ಆ್ಯನ್ ತೀಸಾ ಜೊಸೆಫ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.  ಇನ್ನುಳಿದ 16 ಸಿಬ್ಬಂದಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆದುಕೊಂಡು ಬರಲಾವುವುದು ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಭಾರತೀಯ ವಿದೇಶಾಂಗ ಇಲಾಖೆ, ಇರಾನ್ ವಶಪಡಿಸಿದ ಸರಕು ಹಡಗಿನಲ್ಲಿದ್ದ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಸುರಕ್ಷಿತವಾಗಿ ಮನಗೆ ಮರಳಿದ್ದಾರೆ. ಇರಾನ್ ಆಧಿಕಾರಿಗಳಿಗೆ ಧನ್ಯವಾದ. ಇನ್ನುಳಿದ ಭಾರತೀಯರ ಬಿಡುಗಡೆಗೆ ಇರಾನ್ ಅಧಿಕಾರಿಗಳ ಜೊತೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದೆ.

ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ಖುದ್ದು ಕೇಂದ್ರ ಸಚಿವ ಜೈಶಂಕರ್​ ಸಹ ಇರಾನ್ ಜತೆ ಮಾತುಕತೆ ನಡೆಸಿ ಭಾರತೀಯರನ್ನು ಬಿಟ್ಟು ಕಳುಹಿಸುವಂತೆ ಮನವಿ ಮಾಡಿದ್ದು, ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು. ಇದರ ಪರಿಣಾಮ ಇರಾನ್, ಭಾರತೀಯ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದೆ.

ಇರಾನ್ ವಶಪಡಿಸಿದ ಹಡಗಿನಲ್ಲಿದ್ದ ಸಿಬ್ಬಂದಿಗಳ ಪೈಕಿ 17 ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಭಾರತಕ್ಕೆ ಮರಳಿದ್ದಾರೆ. ಆದ್ರೆ, ಇನ್ನುಳಿದ 16 ಸಿಬ್ಬಂದಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆದುಕೊಂಡು ಬರಲಾವುವುದು ಎಂದು ವಿದೇಶಾಂಗ ಇಲಾಖೆ ಹೇಳಿದೆ. ಭಾರತೀಯ ಸಿಬ್ಬಂದಿಗಳ ಭೇಟಿಗ ಇತ್ತೀಚೆಗೆ ಇರಾನ್ ಅವಕಾಶ ನೀಡಿತ್ತು. ಎಲ್ಲರನ್ನು ಭಾರತೀಯ ಅಧಿಕಾರಿಗಳು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಎಲ್ಲರು ಉತ್ತಮವಾಗಿದ್ದಾರೆ. ಶೀಘ್ರವೇ ತವರಿಗೆ ಮರಳಲಿದ್ದಾರೆ ಎಂದು ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಸ್ಥರಿಗೆ ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?