Metro Man Sreedharan ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಕೇರಳದ ಮೆಟ್ರೊಮ್ಯಾನ್ ಇ ಶ್ರೀಧರನ್

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರನ್, ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿ ತೊಡಗುವುದಿಲ್ಲ. ರಾಜಕೀಯದಿಂದ ದೂರ ಉಳಿದು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Metro Man Sreedharan ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ ಕೇರಳದ ಮೆಟ್ರೊಮ್ಯಾನ್ ಇ ಶ್ರೀಧರನ್
ಇ ಶ್ರೀಧರನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 16, 2021 | 3:51 PM

ಕೊಚ್ಚಿ: ‘ಮೆಟ್ರೊ ಮ್ಯಾನ್’ (Metro Man) ಎಂದೇ ಖ್ಯಾತರಾಗಿರುವ ಇ ಶ್ರೀಧರನ್ (E Sreedharan)  ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ನಡೆದ ಕೇರಳ ವಿಧಾನಸಭೆ ಚುನಾವಣೆಯಲ್ಲಿ (Kerala Assembly elections) ಶ್ರೀಧರನ್ ಅವರು ಕೇರಳದ ಪಾಲಕ್ಕಾಡ್‌ನಲ್ಲಿ ಬಿಜೆಪಿ (BJP) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರನ್ನು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದೂ ಬಿಂಬಿಸಲಾಗಿತ್ತು. ಆದರೆ ಬಿಜೆಪಿ ಕೇರಳದಲ್ಲಿ ಇದ್ದ ಒಂದೇ ಒಂದು ಸ್ಥಾನವನ್ನು ಚುನಾವಣೆಯಲ್ಲಿ ಕಳೆದುಕೊಂಡಿತ್ತು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರನ್, ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿ ತೊಡಗುವುದಿಲ್ಲ. ರಾಜಕೀಯದಿಂದ ದೂರ ಉಳಿದು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ಕೇವಲ ಅಧಿಕಾರಶಾಹಿಯಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದೆ. 90 ವರ್ಷ ವಯಸ್ಸಿನ ನಾನು ಇನ್ನು ಮುಂದೆ ಸಕ್ರಿಯ ರಾಜಕಾರಣದಲ್ಲಿರುವುದು ಸೂಕ್ತವಲ್ಲ ಎಂದು ಶ್ರೀಧರನ್ ಹೇಳಿದ್ದಾರೆ. 90 ವರ್ಷ ವಯಸ್ಸಾಯಿತು. ಈ ವಯಸ್ಸಿನಲ್ಲಿ ರಾಜಕೀಯಕ್ಕೆ ಹೋಗುವುದು ಅಪಾಯಕಾರಿ ಪರಿಸ್ಥಿತಿ. ರಾಜಕೀಯಕ್ಕೆ ಬಂದಾಗ ಒಳ್ಳೆಯ ಭರವಸೆ ಇತ್ತು. ಇನ್ನು ಮುಂದೆ ರಾಜಕೀಯದಲ್ಲಿ ಉತ್ಸಾಹ ಇರುವುದಿಲ್ಲ ಮತ್ತು ಸಕ್ರಿಯ ರಾಜಕಾರಣದಲ್ಲಿ ಇರುವುದಿಲ್ಲ. ಸೋಲಿನ ನಂತರ ತುಂಬಾ ನಿರಾಸೆಯಾಗಿದೆ. ನಂತರ ಅದು ಬದಲಾಯಿತು. ದೇಶ ಸೇವೆ ಮಾಡಲು ರಾಜಕೀಯ ಬೇಕಿಲ್ಲ. ಇಲ್ಲದೆಯೂ ಸಾಧ್ಯವಿದೆ. ಪ್ರಸ್ತುತ ಜನರ ಸೇವೆಗಾಗಿ ಮೂರು ಟ್ರಸ್ಟ್‌ಗಳು ತಮ್ಮ ಕೈಕೆಳಗೆ ಇದೆ ಎಂದು ಶ್ರೀಧರನ್ ಹೇಳಿದ್ದಾರೆ.

ನಾನು ರಾಜಕಾರಣಿಯಲ್ಲ, ರಾಷ್ಟ್ರ ಸೇವಕ. ನಾನು ಸ್ಪರ್ಧೆಯಿಂದ ನಿರಾಶೆಗೊಂಡಿಲ್ಲ ಬಹಳಷ್ಟು ಕಲಿಯಲು ಸಿಕ್ಕಿತು ಎಂದು ಹೇಳಿದರು. ಚುನಾವಣೆಯಲ್ಲಿ ಸೋತಾಗ ನಿರಾಸೆ ಇತ್ತು. ಆದರೆ ಈಗ ಅಲ್ಲ. ಅಧಿಕಾರ ಸಿಗದೇ ಕೇವಲ ಶಾಸಕರಿಂದ ಏನೂ ಮಾಡಲು ಸಾಧ್ಯವಿಲ್ಲ. ಕೇರಳದ ಬಿಜೆಪಿಗೆ ಹಲವು ವಿಷಯಗಳಲ್ಲಿ ತಿದ್ದುಪಡಿಗಳ ಅಗತ್ಯವಿದೆ. ತಿದ್ದುಪಡಿಯು ವ್ಯತ್ಯಾಸವನ್ನುಂಟು ಮಾಡುತ್ತದೆ. ನೀತಿಗಳನ್ನು ಬದಲಾಯಿಸಿದರೆ ಕೇರಳದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದರು.

ಶ್ರೀಧರನ್ ಅವರು ಪಾಲಕ್ಕಾಡ್‌ನಲ್ಲಿ ಉತ್ತಮ ಪೈಪೋಟಿ ನೀಡಿದ್ದರು. ಕಾಂಗ್ರೆಸ್‌ನ ಹಾಲಿ ಶಾಸಕ ಶಾಫಿ ಪರಂಬಿಲ್ ಅವರ ಮುನ್ನಡೆ 2016 ರಲ್ಲಿ 17,400 ಇತ್ತು.ಅದು 2021 ರಲ್ಲಿ ಸುಮಾರು 3,850 ಕ್ಕೆ ಇಳಿದಿದೆ. ಶ್ರೀಧರನ್ ಎಣಿಕೆಯ ಅಂತಿಮ ಗಂಟೆಗಳವರೆಗೆ ಮುನ್ನಡೆ ಕಾಯ್ದುಕೊಂಡಿದ್ದರು.  ಈ ವರ್ಷದ ಫೆಬ್ರವರಿಯಲ್ಲಿ ಶ್ರೀಧರನ್ ಬಿಜೆಪಿ ಸೇರಿದರು. ಪಕ್ಷದ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರು ಬಹು ಪ್ರಚಾರದ ಘೋಷಣೆ ಮಾಡಿದರು ಮತ್ತು ನಂತರ ‘ಮೆಟ್ರೊ ಮ್ಯಾನ್’ ಅವರನ್ನು ರಾಜ್ಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಗೂ ಅವರು ವಿಶೇಷ ಆಹ್ವಾನಿತರಾಗಿದ್ದರು.

ಇದನ್ನೂ ಓದಿ:  Natural Farming ಕೃಷಿಯನ್ನು ಕೆಮಿಸ್ಟ್ರಿ ಲ್ಯಾಬ್​​ನಿಂದ ಹೊರತರಬೇಕು, ನೈಸರ್ಗಿಕ ಕೃಷಿ ತಂತ್ರ ಅಳವಡಿಸಿ: ನರೇಂದ್ರ ಮೋದಿ

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

Published On - 3:32 pm, Thu, 16 December 21

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ