AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ

ಕೇರಳದ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪವು ದೇಶಾದ್ಯಂತ ಕಳವಳ ಮೂಡಿಸಿದೆ. ಸುಮಾರು 78 ಗ್ರಾಂ ಚಿನ್ನದ ಆಭರಣಗಳು ಮತ್ತು ಅಮೂಲ್ಯ 'ವೈರಮ್ ನಾಮ' ವಜ್ರದ ತುಂಡು ಕಾಣೆಯಾಗಿದೆ. ದುರಸ್ತಿಗಾಗಿ ತೆಗೆದುಕೊಂಡು ಹೋಗಿದ್ದ ವಸ್ತುಗಳು ಮರಳಿ ಬಂದಿಲ್ಲ. ಡಿಜಿಪಿ ಈ ಕುರಿತು ವರದಿ ಸಲ್ಲಿಸಿದ್ದು, ದೇವಾಲಯದ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಬಿಗಿ ಭದ್ರತೆಗೆ ಕಡಕ್ ಶಿಫಾರಸುಗಳನ್ನು ಮಾಡಲಾಗಿದೆ.

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ
ಪದ್ಮನಾಭ ದೇವಸ್ಥಾನImage Credit source: PTI
ನಯನಾ ರಾಜೀವ್
|

Updated on: May 27, 2026 | 12:38 PM

Share

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ ಸುಮಾರು 78 ಗ್ರಾಂ ಚಿನ್ನದ ಆಭರಣಗಳು ಮತ್ತು ಅತ್ಯಂತ ಬೆಲೆಬಾಳುವ ‘ವೈರಮ್ ನಾಮ’ ಎಂದು ಕರೆಯಲ್ಪಡುವ ವಜ್ರಖಚಿತ ತುಂಡು ಕಾಣೆಯಾಗಿರುವುದು ಪತ್ತೆಯಾಗಿದೆ.

ದೇವಾಲಯದ ಆಡಳಿತ ಮಂಡಳಿಯ ದಾಖಲೆಗಳ ಪ್ರಕಾರ, ಈ ‘ವೈರಮ್ ನಾಮ’ವನ್ನು ದುರಸ್ತಿ ಕಾರ್ಯಕ್ಕಾಗಿ ಹಲವು ತಿಂಗಳ ಹಿಂದೆಯೇ ಹೊರಗೆ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ಅದನ್ನು ಮರಳಿ ತರಲಾಗಿಲ್ಲ. ಅದೇ ರೀತಿ, ಸುಮಾರು ಆರು ತಿಂಗಳ ಹಿಂದೆ ನಿರ್ವಹಣೆಗಾಗಿ ಕಳುಹಿಸಲಾಗಿದ್ದ ಚಿನ್ನದ ದೀಪವೂ ಸಹ ನಿಗೂಢವಾಗಿ ಕಣ್ಮರೆಯಾಗಿದೆ.

ಮತ್ತಷ್ಟು ಓದಿ: 85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

ಬಿಗಿ ಭದ್ರತೆಗೆ ಡಿಜಿಪಿ ಖಡಕ್ ಶಿಫಾರಸು

ದೇವಾಲಯದ ಅಸ್ತಿತ್ವದಲ್ಲಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಡಿಜಿಪಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೆಲವು ಪ್ರಮುಖ ಶಿಫಾರಸುಗಳನ್ನು ಮಾಡಿದ್ದಾರೆ. ದೇವಾಲಯದ ಎಲ್ಲಾ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಅತ್ಯಂತ ಸುರಕ್ಷಿತ ಕಪಾಟುಗಳಿಗೆ ಸ್ಥಳಾಂತರಿಸಬೇಕು. ಭಕ್ತರು ನೀಡುವ ಕಾಣಿಕೆಗಳನ್ನು ಕಡ್ಡಾಯವಾಗಿ ಮೀಸಲಾದ ಲಾಕರ್‌ಗಳಲ್ಲಿಯೇ ಸಂಗ್ರಹಿಸಬೇಕು. ದೇವಾಲಯದ ಪ್ರತಿಯೊಂದು ಪ್ರವೇಶ ದ್ವಾರದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಮತ್ತು ಸರಿಯಾದ ತಪಾಸಣೆ ಇಲ್ಲದೆ ಯಾರನ್ನೂ ಒಳಗಡೆ ಬಿಡಬಾರದು.

ಶ್ರೀ ಪದ್ಮನಾಭಸ್ವಾಮಿ ದೇವಾಲಯದ ಹಿನ್ನೆಲೆ ಕೇರಳಂನ ತಿರುವನಂತಪುರಂನಲ್ಲಿರುವ ಈ ದೇವಾಲಯವು ಮಹಾವಿಷ್ಣುವಿಗೆ ಅರ್ಪಿತವಾಗಿದೆ. ಸಂಗಮ ಕಾಲದ ಇತಿಹಾಸ ಮತ್ತು ಸಾಹಿತ್ಯದಲ್ಲೂ ಈ ದೇವಾಲಯದ ಅಪಾರ ಸಂಪತ್ತನ್ನು ಉಲ್ಲೇಖಿಸಿ, ಇದನ್ನು ಗೋಲ್ಡನ್ ಟೆಂಪಲ್ (ಚಿನ್ನದ ದೇವಾಲಯ) ಎಂದು ಕರೆಯಲಾಗಿದೆ. ಇಂತಹ ಪೂಜನೀಯ ಸ್ಥಳದಲ್ಲಿ ನಡೆದಿರುವ ಈ ಭದ್ರತಾ ಲೋಪದ ಬಗ್ಗೆ ಈಗ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More