ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ

ಕೇರಳದ ವಯನಾಡ್ ಶಾಲೆಯ 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. 38 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇರಳದ ವಯನಾಡ್ ಜಿಲ್ಲೆಯ ಅನುದಾನಿತ ಪ್ರಾಥಮಿಕ ಶಾಲೆಯೊಂದರ ಸುಮಾರು 150 ವಿದ್ಯಾರ್ಥಿಗಳಲ್ಲಿ ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ವಾಂತಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಭಾರಿ ಆತಂಕ ಮೂಡಿಸಿದೆ. ಇವರಲ್ಲಿ ಲಕ್ಷಣಗಳು ತೀವ್ರವಾಗಿದ್ದ 38 ವಿದ್ಯಾರ್ಥಿಗಳನ್ನು ಸುಲ್ತಾನ್ ಬತ್ತೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಆಡಳಿತ ಮಂಡಳಿಯು ಶಾಲೆಗೆ ಒಂದು ವಾರ ರಜೆ ಘೋಷಿಸಿದೆ.

ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ
Kerala Students
Image Credit source: x

Updated on: Jun 06, 2026 | 8:37 PM

ಮಲಪ್ಪುರಂ, ಜೂನ್ 6: ಕೇರಳದ ಶಾಲೆಯೊಂದರಲ್ಲಿ ಸುಮಾರು 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಶಾಲೆಯ ತರಗತಿಗಳನ್ನು 1 ವಾರದ ಕಾಲ ಮುಂದೂಡಲಾಗಿದೆ. ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕೀಝಾತ್ತೂರು ಎಂಬಲ್ಲಿನ ಸರ್ಕಾರಿ ಮಾದರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಶಾಲೆಯ ಸುಮಾರು 150 ವಿದ್ಯಾರ್ಥಿಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಭೇದಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಕಲುಷಿತ ನೀರು ಅಥವಾ ಆಹಾರದ ಸೇವನೆಯಿಂದ ಉಂಟಾದ ಫುಡ್ ಪಾಯ್ಸನಿಂಗ್ ಇರಬಹುದು ಎಂದು ಆರೋಗ್ಯ ಇಲಾಖೆ ಅನುಮಾನ ವ್ಯಕ್ತಪಡಿಸಿದೆ. ಶಾಲೆಯಲ್ಲಿದ್ದ ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ತರಗತಿಗಳಿಗೆ 1 ವಾರಗಳ ಕಾಲ ರಜೆ ನೀಡಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಅವಧಿಯಲ್ಲಿ ಶಾಲೆಯ ಆವರಣ, ನೀರಿನ ಟ್ಯಾಂಕ್‌ಗಳು ಮತ್ತು ಅಡುಗೆ ಕೋಣೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಹಾಗೂ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್

ಅನಾರೋಗ್ಯಕ್ಕೆ ಒಳಗಾದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸದ್ಯಕ್ಕೆ ಯಾರ ಪರಿಸ್ಥಿತಿಯೂ ಗಂಭೀರವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇಲಾಖೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಪೋಷಕರು ಆತಂಕ ಪಡದಂತೆ ಧೈರ್ಯ ತುಂಬಿದ್ದಾರೆ. ಅನಾರೋಗ್ಯದ ನಿಖರ ಕಾರಣಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ವೈದ್ಯಾಧಿಕಾರಿಗಳು ಪೋಷಕರು ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದು, ಸದ್ಯಕ್ಕೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಮತ್ತು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡಿದ್ದಾರೆ. ವೈದ್ಯಕೀಯ ನೆರವು ಅಗತ್ಯವಿರುವ ವಿದ್ಯಾರ್ಥಿಗಳನ್ನು ನಿರ್ವಹಿಸಲು ಸುಲ್ತಾನ್ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಅನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: ಹಣಕೊಡಲಿಲ್ಲವೆಂದು ತಾವೇ ಸರಿಪಡಿಸಿದ್ದ ಬಾಲಕಿಯ ಮೂಳೆಯನ್ನು ಮತ್ತೆ ಮುರಿದು ಕಳುಹಿಸಿದ ವೈದ್ಯರು

ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ಇಟ್ಟಿದ್ದು, ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳಲ್ಲದೆ, ಅದೇ ಶಾಲೆಯ ಓರ್ವ ಶಿಕ್ಷಕರಿಗೂ ಇಂತಹದೇ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಅವರ ಮೇಲೂ ನಿಗಾ ಇಡಲಾಗಿದೆ.

ಜೂನ್ 1ರಂದೇ ಕೆಲವು ವಿದ್ಯಾರ್ಥಿಗಳಲ್ಲಿ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದವು. ಆದರೆ, ಈ ದಿಢೀರ್ ಅನಾರೋಗ್ಯದ ಹಿಂದಿನ ನಿಖರವಾದ ಕಾರಣ ಏನೆಂಬುದು ಇನ್ನೂ ಪತ್ತೆಯಾಗಿಲ್ಲ. ಆರೋಗ್ಯ ಇಲಾಖೆಯ ತಂಡಗಳು ಪ್ರಯೋಗಾಲಯದ ಪರೀಕ್ಷೆಗಾಗಿ ಶಾಲೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ನೀರಿನ ಹಾಗೂ ಆಹಾರದ ಮಾದರಿಗಳನ್ನು ಸಂಗ್ರಹಿಸಿವೆ. ಈ ಅನಾರೋಗ್ಯವು ಕಲುಷಿತ ಆಹಾರ, ನೀರು, ವೈರಲ್ ಸೋಂಕು ಅಥವಾ ಇನ್ಯಾವುದೇ ಮೂಲದಿಂದ ಉಂಟಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಈಗ ಪರೀಕ್ಷಾ ವರದಿಗಳಿಗಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us