AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agra Jama Masjid: ಆಗ್ರಾದ ಜಾಮಾ ಮಸೀದಿ ಮೆಟ್ಟಿಲಿನಡಿ ವಿಗ್ರಹವಿರುವ ಶಂಕೆ; ಉತ್ಖನನಕ್ಕೆ ವಿನಂತಿಸಿ ಹೈಕೋರ್ಟ್​ಗೆ ಅರ್ಜಿ

Allahabad High Court: ಆಗ್ರಾದ ಜಾಮಾ ಮಸೀದಿಯಲ್ಲಿ ಉತ್ಖನನ ನಡೆಸಲು ಪುರಾತತ್ವ ಇಲಾಖೆಗೆ ಸೂಚಿಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ.

Agra Jama Masjid: ಆಗ್ರಾದ ಜಾಮಾ ಮಸೀದಿ ಮೆಟ್ಟಿಲಿನಡಿ ವಿಗ್ರಹವಿರುವ ಶಂಕೆ; ಉತ್ಖನನಕ್ಕೆ ವಿನಂತಿಸಿ ಹೈಕೋರ್ಟ್​ಗೆ ಅರ್ಜಿ
ಆಗ್ರಾ ನಗರದಲ್ಲಿರುವ ಜಾಮಾ ಮಸೀದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 06, 2022 | 11:32 AM

Share

ದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಮಥುರಾದ ಶಾಹಿ ಮಸೀದಿ ವಿವಾದದ ಬೆನ್ನಿಗೇ ಮತ್ತೊಂದು ಮಸೀದಿ ವಿವಾದ ಗರಿಗೆದರುವ ಎಲ್ಲ ಸಾಧ್ಯತೆಗಳು ಕಾಣಿಸಿಕೊಂಡಿವೆ. ಆಗ್ರಾದ ಶಾಹಿ ಜಾಮಾ ಮಸೀದಿಯಲ್ಲಿ (Agra Jama Masjid Petition) ಉತ್ಖನನ ನಡೆಸಲು ಪುರಾತತ್ವ ಇಲಾಖೆಗೆ ಸೂಚಿಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್​ಗೆ (Allahabad High Court ) ವಕೀಲ ವರುಣ್ ಕುಮಾರ್ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ.

ಮಂದಿರವನ್ನು ಕೆಡವಿ, ಅದೇ ಜಾಗದಲ್ಲಿ ಜಾಮಾ ಮಸೀದಿಯನ್ನು ನಿರ್ಮಿಸಲಾಗಿದೆ. ಮಸೀದಿಯ ಮೆಟ್ಟಿಲುಗಳ ಅಡಿಯಲ್ಲಿ ಠಾಕೂರ್ ಕೇಶವ್ ದೇವ್ (ದೇವರ) ವಿಗ್ರಹವಿದೆ (Thakur Keshav Dev Ji). ವೈಜ್ಞಾನಿಕ ರೀತಿಯಲ್ಲಿ ಉತ್ಖನನ ಮಾಡಿದರೆ ವಿಗ್ರಹ ಲಭ್ಯವಾಗಲಿದೆ ಎಂದು ಅವರು ಮನವಿ ಮಾಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವರುಣ್ ಕುಮಾರ್ ಅವರು ಏಪ್ರಿಲ್ 14, 2021ರಂದು ಮಥುರಾದ ಸಿವಿನ್ ನ್ಯಾಯಾಧೀಶರಿಗೆ ಇಂಥದ್ದೇ ಅರ್ಜಿ ಸಲ್ಲಿಸಿದ್ದರು. ಆಗ್ರಾದ ಶಾಹಿ ಜಾಮಾ ಮಸೀದಿಯ ಮೆಟ್ಟಿಲುಗಳ ಅಡಿಯಲ್ಲಿ ವಿಗ್ರಹವೊಂದನ್ನು ಅಡಗಿಸಿ ಇಟ್ಟಿರುವ ಶಂಕೆಯಿದೆ. ಹೀಗಾಗಿ ಅಲ್ಲಿ ಉತ್ಖನನ ನಡೆಸಬೇಕು ಎಂದು ವರುಣ್ ಕೋರಿದ್ದರು. ಆದರೆ ಈ ಅರ್ಜಿಯ ವಿಚಾರಣೆ ಇನ್ನೂ ಆರಂಭವಾಗಿಲ್ಲ.

ಉತ್ಖನನ ಬೇಡಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಹಿ ಜಾಮಾ ಮಸೀದಿಯ ಇಮಾಮ್, ‘ಈ ಮಸೀದಿಯನ್ನು ನಿರ್ಮಿಸಿದ್ದು ಮೊಗಲ್ ದೊರೆ ಶಹಜಹಾನ್​ರ ಮಗಳು ಜಹಾನ್ ಆರಾ. ತನ್ನ ಮದುವೆಗೆಂದು ಮೀಸಲಿಟ್ಟಿದ್ದ ಹಣವನ್ನು ಮಸೀದಿಗಾಗಿ ಅವರು ಖರ್ಚು ಮಾಡಿದ್ದರು’ ಎಂದು ವಿವರಿಸಿದರು. ಮಸೀದಿಯಲ್ಲಿ ವಿಗ್ರಹವೊಂದನ್ನು ಅಡಗಿಸಿಡಲಾಗಿದೆ. ದೇವಸ್ಥಾನದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂಬ ಆರೋಪಗಳ ಕುರಿತು ವಿವರಣೆ ನೀಡಿದ ಅವರು, ‘ಇಂಥ ಆರೋಪಗಳಿಗೆ ಯಾವುದೇ ಪುರಾವೆಯಿಲ್ಲ. ಕೇವಲ ಊಹಾಪೋಹ ಆಧರಿಸಿ ಇಡೀ ಮಸೀದಿಯನ್ನು ಕೆಡವುವುದು ಸರಿಯಲ್ಲ’ ಎಂದು ಹೇಳಿದರು.

Published On - 10:56 am, Wed, 6 July 22

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್