AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇತನ್ ಅಗರ್ವಾಲ್ ಕೊಲೆ ಪ್ರಕರಣ; ಸಿಯಾ ಗೋಯಲ್, ಚೇತನ್‌ ಜುಲೈ 3ರವರೆಗೆ ಪೊಲೀಸ್ ವಶಕ್ಕೆ

ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ, ಪ್ರಮುಖ ಆರೋಪಿ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮಿ ಚೇತನ್ ಚೌಧರಿಯನ್ನು ಶುಕ್ರವಾರದವರೆಗೆ (ಜುಲೈ 3) ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಜೂನ್ 18ರಂದು ಲೋಹಗಢ ಕೋಟೆಯಿಂದ ಕೇತನ್‌ನನ್ನು ಸಿಯಾ ಮತ್ತು ಚೇತನ್ ತಳ್ಳಿ ಕೊಂದಿದ್ದಾರೆ ಎಂಬ ಆರೋಪವಿದೆ. ಆರಂಭದಲ್ಲಿ, ಫೋಟೋ ತೆಗೆದುಕೊಳ್ಳುವಾಗ ಕೇತನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ ಎಂದು ಸಿಯಾ ವಾದಿಸಿದ್ದಳು. ಆದರೆ, ಇದೊಂದು ಪ್ಲಾನ್ ಮಾಡಲಾದ ಕೊಲೆ ಎಂದು ಪತ್ತೆಹಚ್ಚಿದ ಪೊಲೀಸರು ಸಿಯಾ ಮತ್ತು ಚೇತನ್ ಇಬ್ಬರನ್ನೂ ಬಂಧಿಸಿದ್ದರು.

ಕೇತನ್ ಅಗರ್ವಾಲ್ ಕೊಲೆ ಪ್ರಕರಣ; ಸಿಯಾ ಗೋಯಲ್, ಚೇತನ್‌ ಜುಲೈ 3ರವರೆಗೆ ಪೊಲೀಸ್ ವಶಕ್ಕೆ
Siya And ChetanImage Credit source: TV9
ಸುಷ್ಮಾ ಚಕ್ರೆ
|

Updated on: Jun 29, 2026 | 8:40 PM

Share

ಮುಂಬೈ, ಜೂನ್ 29: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಹಾರಾಷ್ಟ್ರದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವು ಪ್ರಮುಖ ಆದೇಶವೊಂದನ್ನು ಹೊರಡಿಸಿದೆ. ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಜುಲೈ 3ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.

ಈ ಪ್ರಕರಣದ ಹೆಚ್ಚಿನ ವಿಚಾರಣೆ ಹಾಗೂ ಕೊಲೆಗೆ ಬಳಕೆಯಾದ ಆಯುಧಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಲು ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕೆಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಪೊಲೀಸರ ವಾದವನ್ನು ಆಲಿಸಿದ ನ್ಯಾಯಾಧೀಶರು ಜುಲೈ 3ರವರೆಗೆ ಆರೋಪಿಗಳನ್ನು ಪೊಲೀಸ್ ವಿಚಾರಣೆಗೆ ಒಪ್ಪಿಸಿದ್ದಾರೆ.

ಏನಿದು ಪ್ರಕರಣ?:

ಕೇತನ್ ಅಗರ್ವಾಲ್ ಅವರ ನಿಗೂಢ ಕೊಲೆಯ ನಂತರ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಡಿಜಿಟಲ್ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಬಂಧಿಸಿದ್ದರು. ತನ್ನ ಪ್ರಿಯಕರ ಚೇತನ್ ಜೊತೆ ಸೇರಿ ತಾನು ಮದುವೆಯಾಗಬೇಕಿದ್ದ ಕೇತನ್​ನನ್ನು ಸಿಯಾ ರಾಯಗಢ ಕೋಟೆ ಮೇಲಿಂದ ತಳ್ಳಿ ಕೊಲೆ ಮಾಡಿದ್ದಳು. ಬಳಿಕ, ಆತ ಫೋಟೋಗೆ ಪೋಸ್ ಕೊಡುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದನೆಂದು ನಾಟಕವಾಡಿದ್ದಳು.

ಇದನ್ನೂ ಓದಿ: ವಿಗ್ ಧರಿಸಿದ್ದರಿಂದಲೇ ಕೇತನ್​ನನ್ನು ಕೊಂದಳಾ ಸಿಯಾ?; ಮಹಾರಾಷ್ಟ್ರ ಸಿಎಂ ಭೇಟಿ ಬಳಿಕ ತಂದೆಯ ಶಾಕಿಂಗ್ ಹೇಳಿಕೆ

ಇದಕ್ಕೂ ಮುನ್ನ ಜೂನ್ 14ರಂದೂ ಕೇತನ್‌ನನ್ನು ಕೊಲ್ಲಲು ಇಂತಹುದೇ ಪ್ರಯತ್ನ ನಡೆದಿತ್ತು, ಆದರೆ ಅದು ವಿಫಲವಾಗಿತ್ತು ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಕೇತನ್ ತಂದೆ ವಿಶಾಲ್ ಅಗರ್ವಾಲ್ ಅವರ ಪ್ರಕಾರ, ಸಿಯಾ ಜೂನ್ 14ರಂದು ಪ್ರಪಾತದ ಅಂಚಿನಲ್ಲಿ ಕೇತನ್‌ನನ್ನು ತಳ್ಳಿದ್ದಳು. ಆದರೆ ಅವರು ಪಕ್ಕದಲ್ಲಿದ್ದ ಮರವನ್ನು ಗಟ್ಟಿಯಾಗಿ ಹಿಡಿದುಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದರು. ಆ ಸಮಯದಲ್ಲಿ ಸಿಯಾ, “ನಿನ್ನನ್ನು ಹಾವಿನಿಂದ ರಕ್ಷಿಸಲು ನಾನು ತಳ್ಳಿದೆ” ಎಂದು ಸುಳ್ಳು ಹೇಳಿದ್ದರಿಂದ ಕೇತನ್ ಆಕೆಯ ಮೇಲೆ ಯಾವುದೇ ಅನುಮಾನ ಪಟ್ಟಿರಲಿಲ್ಲ.

ಇದನ್ನೂ ಓದಿ: ಕೇತನ್ ಕೊಲೆಗೂ ಮುನ್ನ ಲವರ್ ಜೊತೆ ಕೆಫೆಯಲ್ಲಿ ಕುಳಿತು ಪ್ಲಾನ್ ಮಾಡಿದ್ದಳು ಸಿಯಾ ಗೋಯಲ್!

ಪೊಲೀಸರ ಪ್ರಕಾರ, ಮೇ 31ರಂದು ಸಿಯಾ ಮೊದಲ ಬಾರಿಗೆ ಕೇತನ್ ಜೊತೆ ಲೋಹಗಢ್ ಕೋಟೆಗೆ ಭೇಟಿ ನೀಡಿದ್ದಳು. ಆ ಪ್ರವಾಸದ ವೇಳೆಯಲ್ಲೇ ಆಕೆ ಕೇತನ್‌ನನ್ನು ಕೊಂದು, ಅದನ್ನು ಅಪಘಾತ ಎಂದು ಬಿಂಬಿಸುವ ಆಲೋಚನೆಯನ್ನು ರೂಪಿಸಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಕೊನೆಗೆ ಜೂನ್ 18ರಂದು ಮತ್ತೊಮ್ಮೆ ಕೋಟೆಗೆ ಭೇಟಿ ನೀಡಿದಾಗ ಸಿಯಾ ಮತ್ತು ಚೇತನ್ ಇಬ್ಬರೂ ಸೇರಿ ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK