AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಕ್ಕಾಗಿ ಖಾದಿ, ರಾಷ್ಟ್ರಧ್ವಜಕ್ಕೆ ಚೀನಾದ ಪಾಲಿಸ್ಟರ್, ಮೋದಿ ಹೇಳುವುದೊಂದು ಮಾಡುವುದೊಂದು: ರಾಹುಲ್ ಟೀಕೆ

ಪ್ರಧಾನಮಂತ್ರಿಯವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶಕ್ಕಾಗಿ ಖಾದಿ ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್. ಎಂದಿನಂತೆ ಪ್ರಧಾನಿಯವರ ಮಾತುಗಳು ಮತ್ತು ಕಾರ್ಯಗಳು ಎಂದಿಗೂ ಹೊಂದಿಕೆಯಾಗುವುದಿಲ್ಲ ಎಂದಿದ್ದಾರೆ.

ದೇಶಕ್ಕಾಗಿ ಖಾದಿ, ರಾಷ್ಟ್ರಧ್ವಜಕ್ಕೆ ಚೀನಾದ ಪಾಲಿಸ್ಟರ್, ಮೋದಿ ಹೇಳುವುದೊಂದು ಮಾಡುವುದೊಂದು: ರಾಹುಲ್ ಟೀಕೆ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 28, 2022 | 5:46 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Rahul Gandhi) ಅವರ ನುಡಿ ಮತ್ತು ನಡೆ ಎಂದಿಗೂ ಹೊಂದಿಕೆಯಾಗುವುದಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಭಾನುವಾರ ನರೇಂದ್ರ ಮೋದಿ ಅವರ ಭಾನುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಆತ್ಮನಿರ್ಭರ ಭಾರತದ ಕನಸನ್ನು ಸಾಧಿಸಲು ಖಾದಿ ಸ್ಫೂರ್ತಿಯ ಮೂಲವಾಗಬಹುದು ಎಂದು ಪ್ರಧಾನಿ ಶನಿವಾರ ಹೇಳಿದ್ದಾರೆ. ಪ್ರಧಾನಮಂತ್ರಿಯವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶಕ್ಕಾಗಿ ಖಾದಿ ಆದರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್. ಎಂದಿನಂತೆ ಪ್ರಧಾನಿಯವರ ಮಾತುಗಳು ಮತ್ತು ಕಾರ್ಯಗಳು ಎಂದಿಗೂ ಹೊಂದಿಕೆಯಾಗುವುದಿಲ್ಲ ಎಂದಿದ್ದಾರೆ. ರಾಷ್ಟ್ರಧ್ವಜವು ಕೈಯಿಂದ ನೂಲುವ ಮತ್ತು ಕೈಯಿಂದ ನೇಯ್ದ ಅಥವಾ ಯಂತ್ರದಿಂದ ತಯಾರಿಸಲ್ಪಟ್ಟ, ಹತ್ತಿ / ಪಾಲಿಸ್ಟರ್ / ಉಣ್ಣೆ / ರೇಷ್ಮೆ ಖಾದಿ ಬಂಟಿಂಗ್‌ನಿಂದ ಮಾಡಬಹುದು ಎಂದು ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಲಾಗಿದೆ. ಆದಾಗ್ಯೂ ಧ್ವ ಜ ಸಂಹಿತೆಗೆ ತಿದ್ದುಪಡಿ ಮಾಡಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಇದಕ್ಕಿಂತ ಮುನ್ನ ಯಂತ್ರದಿಂದ ತಯಾರಿಸಿದ ಮತ್ತು ಪಾಲಿಸ್ಟರ್ ಧ್ವಜಗಳನ್ನು ಬಳಸಲು ಅನುಮತಿಸಲಾಗಿಲ್ಲ.

ಅಹಮದಾಬಾದ್‌ನ ಸಬರಮತಿ ನದಿ ತೀರದಲ್ಲಿ ನಡೆದ ‘ಖಾದಿ ಉತ್ಸವ’ (ಖಾದಿ ಉತ್ಸವ) ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸ್ವಾಭಿಮಾನದ ಸಂಕೇತವಾದ ಖಾದಿ ಅಥವಾ ಹೋಮ್‌ಸ್ಪನ್ ಅನ್ನು ಸ್ವಾತಂತ್ರ್ಯದ ನಂತರ ಕೀಳು ಉತ್ಪನ್ನವೆಂದು ಪರಿಗಣಿಸಲಾಗಿದೆ ಎಂದು ಶನಿವಾರ ಹೇಳಿದ್ದಾರೆ. ಮೊದಲು, ಯಂತ್ರದಿಂದ ತಯಾರಿಸಿದ ಮತ್ತು ಪಾಲಿಸ್ಟರ್ ಧ್ವಜಗಳನ್ನು ಬಳಸಲು ಅನುಮತಿಸಲಾಗಿಲ್ಲ. ಮುಂಬರುವ ಹಬ್ಬ ಹರಿದಿನಗಳಲ್ಲಿ ಖಾದಿ ಗ್ರಾಮೋದ್ಯೋಗದ ಉತ್ಪನ್ನಗಳನ್ನು ಮಾತ್ರ ಉಡುಗೊರೆಯಾಗಿ ನೀಡುವಂತೆ ಮೋದಿ ಜನರಿಗೆ ಮನವಿ ಮಾಡಿದ್ದರು.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು