ಅಂತರಾಷ್ಟ್ರೀಯ ಯೋಗ ದಿನದಂದು ‘ಖಾದಿ ಯೋಗ ಮ್ಯಾಟ್’ ಮಾರುಕಟ್ಟೆಗೆ

‘ಖಾದಿ ಯೋಗ ಮ್ಯಾಟ್’ ಉದ್ಘಾಟನೆಗೂ ಮುನ್ನ ಬೆಳಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆವಿಐಸಿ ಅಧಿಕಾರಿಗಳು ಮತ್ತು ನೌಕರರೊಂದಿಗೆ ಮನೋಜ್ ಕುಮಾರ್ ಯೋಗ ಮತ್ತು ಪ್ರಾಣಾಯಾಮ ಮಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಮೋದಿಜಿಯವರ ಪ್ರಯತ್ನದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನವನ್ನು ಆಚರಿಸಲು ಪ್ರಸ್ತಾಪಿಸಿದ್ದರು.

ಅಂತರಾಷ್ಟ್ರೀಯ ಯೋಗ ದಿನದಂದು 'ಖಾದಿ ಯೋಗ ಮ್ಯಾಟ್' ಮಾರುಕಟ್ಟೆಗೆ
ಮನೋಜ್ ಕುಮಾರ್ ಯೋಗ
Follow us
ರಶ್ಮಿ ಕಲ್ಲಕಟ್ಟ
|

Updated on: Jun 21, 2023 | 7:41 PM

ಮುಂಬೈ: 21 ಜೂನ್ 2023 ರಂದು ಅಂತರಾಷ್ಟ್ರೀಯ ಯೋಗ ದಿನದ (International Yoga Day) ಸಂದರ್ಭದಲ್ಲಿ, ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (KVIC) ಗೌರವಾನ್ವಿತ ಅಧ್ಯಕ್ಷರಾದ ಮನೋಜ್ ಕುಮಾರ್ ಬಹು ನಿರೀಕ್ಷಿತ  ಖಾದಿ ಯೋಗ ಮ್ಯಾಟ್​​ನ್ನು (Khadi Yoga Mat) ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಮುಂಬೈನ ಕೆವಿಐಸಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಖಾದಿ ಪ್ರಿಯರಿಗಾಗಿರುವ ಯೋಗ ಮ್ಯಾಟ್ ಬಿಡುಗಡೆಯಾಗಿದೆ .ಉದ್ಘಾಟನಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ‘ಆತ್ಮನಿರ್ಭರ ಭಾರತ್ ಅಭಿಯಾನ’ ದಿನದಿಂದ ದಿನಕ್ಕೆ ಹೊಸ ಮಾದರಿಗಳನ್ನು ರೂಪಿಸುತ್ತಿದೆ. ‘ಖಾದಿ ಯೋಗ ಮ್ಯಾಟ್’ ಬಿಡುಗಡೆ ಮಾಡಿದ್ದೂ ಇದೇ ಅಭಿಯಾನದ ಒಂದು ಭಾಗವಾಗಿದೆ. ಈ ಮ್ಯಾಟ್ ಸಂಪೂರ್ಣವಾಗಿ ಸ್ಥಳೀಯ ಮತ್ತು ಪರಿಸರ ಸ್ನೇಹಿಯಾಗಿದೆ ಎಂದು ಅವರು ಹೇಳಿದರು.

ಎಲ್ಲಾ ರೀತಿಯ ಯೋಗಾಸನಗಳನ್ನು (ವ್ಯಾಯಾಮ) ಮಾಡಬಹುದಾದ ರೀತಿಯಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಸನ್ಮಾನ್ಯ ಅಧ್ಯಕ್ಷರು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ (ಪಿಎಂಇಜಿಪಿ) ಯೋಜನೆಯಡಿಯಲ್ಲಿ ಪಶ್ಚಿಮ ವಲಯದ 237 ಫಲಾನುಭವಿಗಳಿಗೆ ಸುಮಾರು ರೂ.25 ಕೋಟಿಗಳ ಮಾರ್ಜಿನ್ ಮನಿ ಅನುದಾನವನ್ನು ಬಿಡುಗಡೆ ಮಾಡಿದರು. 2022-23ರ ಆರ್ಥಿಕ ವರ್ಷದಲ್ಲಿ ರೂ.1.34 ಲಕ್ಷ ಕೋಟಿಗಳ ಐತಿಹಾಸಿಕ ವಹಿವಾಟು ಸಾಧಿಸಿದ್ದಕ್ಕಾಗಿ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆವಿಐಸಿ ಅಧಿಕಾರಿಗಳು ಮತ್ತು ಲಕ್ಷಗಟ್ಟಲೆ ಖಾದಿ ಕುಶಲಕರ್ಮಿಗಳನ್ನು ಅವರು ಅಭಿನಂದಿಸಿದರು.

‘ಖಾದಿ ಯೋಗ ಮ್ಯಾಟ್’ ಉದ್ಘಾಟನೆಗೂ ಮುನ್ನ ಬೆಳಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆವಿಐಸಿ ಅಧಿಕಾರಿಗಳು ಮತ್ತು ನೌಕರರೊಂದಿಗೆ ಮನೋಜ್ ಕುಮಾರ್ ಯೋಗ ಮತ್ತು ಪ್ರಾಣಾಯಾಮ ಮಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಮೋದಿಜಿಯವರ ಪ್ರಯತ್ನದಿಂದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗ ದಿನವನ್ನು ಆಚರಿಸಲು ಪ್ರಸ್ತಾಪಿಸಿದ್ದು, ಮೂರು ತಿಂಗಳ ಅವಧಿಯಲ್ಲಿ ಇದು ಶೀಘ್ರದಲ್ಲೇ ಅಂಗೀಕರಿಸಲ್ಪಟ್ಟಿದೆ. ನರೇಂದ್ರ ಮೋದಿಯವರ ಪ್ರೇರಣೆಯಿಂದ ಭಾರತವು ಯೋಗ ಗುರುವಿನ ರೂಪದಲ್ಲಿ ಈಗ ಜಗತ್ತಿಗೆ ಯೋಗದ ಪಾಠಗಳನ್ನು ಕಲಿಸುತ್ತಿದೆ ಎಂದಿದ್ದಾರೆ ಕುಮಾರ್.

ಗೌರವಾನ್ವಿತ ಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ, ಕೆವಿಐಸಿಯು “ಲೋಕಲ್ ಫಾರ್ ವೋಕಲ್” ಮತ್ತು ‘ಆತ್ಮನಿರ್ಭರ ಭಾರತ್’ ಅಭಿಯಾನವನ್ನು ಹೊಸದಕ್ಕೆ ಕೊಂಡೊಯ್ಯುವ ಮೂಲಕ ಉತ್ಕೃಷ್ಟ ಭಾರತದ ಉತ್ಕೃಷ್ಟ ಚಿತ್ರವನ್ನು ಜಗತ್ತಿಗೆ ಪ್ರಸ್ತುತಪಡಿಸಿದೆ ಎಂದು ಕೆವಿಐಸಿ ಅಧ್ಯಕ್ಷರು ಹೇಳಿದರು.

ಇದನ್ನೂ ಓದಿ: International Yoga Day 2023; ಯೋಗ ವಿಶ್ವಕ್ಕೆ ಭಾರತದ ಕೊಡುಗೆಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ಕೆವಿಐಸಿ ಉತ್ಪನ್ನಗಳ ವಹಿವಾಟು ರೂ.1.34 ಲಕ್ಷ ಕೋಟಿಗಳನ್ನು ದಾಟಿದೆ, ಆದರೆ ಗ್ರಾಮೀಣ ಪ್ರದೇಶಗಳಲ್ಲಿ 9,54,899 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗಿದೆ. ಇಂದು ಬಿಡುಗಡೆಗೊಂಡಿರುವ ‘ಖಾದಿ ಯೋಗ ಮ್ಯಾಟ್’ ಖಾದಿ ಕುಶಲಕರ್ಮಿಗಳ ಕೌಶಲ್ಯದಿಂದ ಸಿದ್ಧಪಡಿಸಲಾದ ಸಂಪೂರ್ಣ ಸ್ವದೇಶಿ ಉತ್ಪನ್ನವಾಗಿದೆ.. ಈ ಹೊಸ ಸ್ಥಳೀಯ ಉತ್ಪನ್ನಕ್ಕೆ ನಾವೆಲ್ಲರೂ ಧ್ವನಿಗೂಡಿಸಬೇಕು. ಮತ್ತು ನಾವು ನಮ್ಮ ಉತ್ಪನ್ನಗಳಿಗೆ ದನಿಯಾಗುವಾಗ ನಮ್ಮ ಉತ್ಪನ್ನಗಳು ಮಾತ್ರ ‘ಸ್ಥಳೀಯದಿಂದ ಜಾಗತಿಕ’ ವರ್ಗವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ