Khalistan Youtube Channel Ban: ಖಾಲಿಸ್ತಾನ ಬೆಂಬಲಿತ 6 ಯೂಟ್ಯೂಬ್ ಚಾನೆಲ್ ಬ್ಯಾನ್
ಮೇರೆಗೆ ಖಾಲಿಸ್ತಾನ ಪರ ಪ್ರಚಾರ ಮಾಡುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ: ಕೇಂದ್ರ ಸರಕಾರದ ನಿದರ್ಶನದ ಮೇರೆಗೆ ಖಾಲಿಸ್ತಾನ (Khalistan) ಪರ ಪ್ರಚಾರ ಮಾಡುತ್ತಿದ್ದ ಭಾರತದಲ್ಲಿದ್ದ 6 ಯೂಟ್ಯೂಬ್ ಚಾನೆಲ್‌ಗಳನ್ನು (Youtube Channel) ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ (ಮಾ.10) ಪಿಟಿಐಗೆ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ಹೊರ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ 6ರಿಂದ 8 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದ್ದಾರೆ. ಪಂಜಾಬಿ ಭಾಷೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾನೆಲ್‌ಗಳು ಗಡಿ ರಾಜ್ಯದಲ್ಲಿ ತೊಂದರೆಯನ್ನುಂಟು ಮಾಡಲು ಪ್ರಯತ್ನಿಸುತ್ತಿವೆ ಎಂದು ಅವರು ಹೇಳಿದ್ದಾರೆ. ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನ್ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ತಮ್ಮ ಸಹಾಯಕರಲ್ಲಿ ಒಬ್ಬನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಖಡ್ಗ ಮತ್ತು ಬಂದೂಕುಗಳೊಂದಿಗೆ ಅಜ್ನಾಲಾದಲ್ಲಿ ಪೊಲೀಸ್ ಠಾಣೆಗೆ ನುಗ್ಗಿದ ಹಿನ್ನೆಲೆಯಲ್ಲಿ ಈ ಕ್ರಮವನ್ನು ಕೇಂದ್ರ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.
48 ಗಂಟೆಗಳ ಒಳಗಾಗಿ ಚಾನೆಲ್‌ಗಳನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಯೂಟ್ಯೂಬ್ ಈ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಇನ್ನೊಬ್ಬ ಹಿರಿಯ ಅಧಿಕಾರಿ ಹೇಳಿದ್ದಾರೆ. ಆಕ್ಷೇಪಾರ್ಹ ವಿಷಯವನ್ನು ಸ್ವಯಂಚಾಲಿತವಾಗಿ ಗುರುತಿಸಲು ಮತ್ತು ನಿರ್ಬಂಧಿಸಲು ಕೃತಕ ಬುದ್ಧಿಮತ್ತೆ ಮತ್ತು ಅಲ್ಗಾರಿದಮ್‌ಗಳನ್ನು ಬಳಸಲು ಸರ್ಕಾರವು ಯೂಟ್ಯೂಬ್‌ಗೆ ಹೇಳಲಾಗಿದೆ.
ಇದನ್ನೂ ಓದಿ: BIG NEWS: 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಚಾನಲ್ಗಳನ್ನು ಬ್ಯಾನ್ ಮಾಡಿದ ಕೇಂದ್ರ
ಯೂಟ್ಯೂಬ್ ಪ್ರಾದೇಶಿಕ ಭಾಷೆಗಳಲ್ಲಿ ವಿಷಯವನ್ನು ಅಪ್‌ಲೋಡ್ ಮಾಡುತ್ತಿರುವುದರಿಂದ ಸಮಸ್ಯೆಗಳನ್ನು ಎದುರಿಸುತ್ತಿದೆ ಈ ಕಾರಣಕ್ಕೆ ಈಗ ಪ್ರಾದೇಶಿಕ ಭಾಷೆಗಳ ವಿಡಿಯೊಗಳನ್ನು ಇಂಗ್ಲಿಷ್ ಭಾಷೆಯಲ್ಲೂ ಪ್ರದರ್ಶಿಸಲು ವ್ಯವಸ್ಥೆಗಳು ಜಾರಿಯಲ್ಲಿದೆ ಎಂದು ಹೇಳಲಾಗಿದೆ.
Published On - 7:29 pm, Fri, 10 March 23