ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು.

ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಕೇಳಲು ಖಾಪ್ ನಿಯೋಗ ರಾಷ್ಟ್ರಪತಿಯನ್ನು ಭೇಟಿ ಮಾಡಲಿದೆ: ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್
Follow us
ರಶ್ಮಿ ಕಲ್ಲಕಟ್ಟ
|

Updated on: Jun 01, 2023 | 8:53 PM

ಖಾಪ್ ನಿಯೋಗವು ಸರ್ಕಾರ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ರಾಕೇಶ್ ಟಿಕಾಯತ್ (Rakesh Tikait) ಅವರು ಗುರುವಾರ ಹೇಳಿದ್ದಾರೆ. ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರು ಕುಸ್ತಿಪಟುಗಳು (Wrestlers Protest) ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಖಾಪ್ ನಿಯೋಗ ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದೆ. ಖಾಪ್ ಮತ್ತು ಈ ಮಹಿಳೆಯರು (ಪ್ರತಿಭಟಿಸುವ ಕುಸ್ತಿಪಟುಗಳು) ಸೋಲಬಾರದು. ನಾಳೆ ಕುರುಕ್ಷೇತ್ರದಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್ ರಾಜಸ್ಥಾನ ಮತ್ತು ದೆಹಲಿಯ ಖಾಪ್‌ಗಳ ಪ್ರತಿನಿಧಿಗಳು ಗುರುವಾರ ಮುಜಫರ್‌ನಗರದ ಸೋರಂ ಗ್ರಾಮದಲ್ಲಿ ಮಾಜಿ ಬ್ರಿಜ್ ಭೂಷಣ್ ಮೇಲಿನ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಮಹಿಳಾ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ

ಹರ್ಯಾಣದಲ್ಲಿ ನಾಳೆ ಮತ್ತೊಂದು ಪಂಚಾಯತ್

ಮಹಾಪಂಚಾಯತ್‌ನಲ್ಲಿ, ಖಾಪ್‌ಗಳು ಶುಕ್ರವಾರ ಕುರುಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಸಲಿದ್ದು, ಅಲ್ಲಿ ಹೆಚ್ಚಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಕೇಶ್ ಟಿಕಾಯತ್ ಹೇಳಿದರು. ಕುಸ್ತಿಪಟುಗಳ ಬೆಂಬಲಕ್ಕೆ ಖಾಪ್‌ಗಳ ಪ್ರತಿನಿಧಿಗಳು ರಾಷ್ಟ್ರಪತಿ ಮತ್ತು ಸರ್ಕಾರವನ್ನು ಭೇಟಿ ಮಾಡಲಿದ್ದು, ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ:100 ವರ್ಷ ಪುರಾತನ ದೇಗುಲ ಸೇರಿದಂತೆ 4 ದೇವಾಲಯಗಳ ಮೇಲೆ ದುಷ್ಕರ್ಮಿಗಳ ದಾಂಧಲೆ; 12 ಮೂರ್ತಿಗಳು ಧ್ವಂಸ

ಕುಸ್ತಿಪಟುಗಳ ಬೇಡಿಕೆ

12 ವರ್ಷಗಳ ಕಾಲ ಭಾರತೀಯ ಕುಸ್ತಿಯನ್ನು ಆಳಿದ ಗೊಂಡಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತೆ ಸೇರಿದಂತೆ ಅಥ್ಲೀಟ್‌ಗಳ ಲೈಂಗಿಕ ಕಿರುಕುಳ ನೀಡಿದ್ದು ಅವರನ್ನು ಮೇಲೆ ಬಂಧಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಕುಸ್ತಿಪಟುಗಳ ವಿರುದ್ಧ ಗುಡುಗಿದ ಸಿಂಗ್, ಪದಕಗಳು ತಲಾ ₹15 ಮೌಲ್ಯದ್ದಾಗಿವೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್