ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ
ಪ್ರಥಮ ಪ್ರಜೆಯೂ ಆಗಿರುವ ರಾಷ್ಟ್ರಪತಿಗಳು ಭಾರತದ ಉನ್ನತ ಶಾಸಕಾಂಗದೊಳಗೆ ಅತ್ಯುನ್ನತ ಸಾಂವಿಧಾನಿಕ ಅಧಿಕಾರವನ್ನು ಹೊಂದಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸರ್ಕಾರವು ಪದೇ ಪದೇ ಔಚಿತ್ಯವನ್ನು ಕಡೆಗಣಿಸಿದೆ. ಈ ಸರ್ಕಾರ ರಾಷ್ಟ್ರಪತಿ ಕಚೇರಿಯನ್ನು "ಕೇವಲ ಟೋಕನಿಸಂ" ಗೆ ಇಳಿಸಿದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ.
ದೆಹಲಿ: ನೂತನ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu )ಅವರನ್ನು ಆಹ್ವಾನಿಸದ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ನಡೆಸಿದ್ದು, ಭಾರತದ ರಾಷ್ಟ್ರಪತಿಗಳು ಅತ್ಯುನ್ನತ ಸಾಂವಿಧಾನಿಕ ಅಧಿಕಾರಿಯಾಗಿ, ಸರ್ಕಾರ, ಪ್ರತಿಪಕ್ಷಗಳು ಮತ್ತು ಸಾರ್ವಜನಿಕರನ್ನು ಪ್ರತಿನಿಧಿಸುತ್ತಾರೆ ಎಂದಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಹೊಸ ಸಂಸತ್ ಭವನವನ್ನು ಉದ್ಘಾಟನೆ ಮಾಡುವುದಾದರೆ ಅದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸಂಕೇತಿಸುತ್ತದೆ ಎಂದು ಖರ್ಗೆ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.
ಪ್ರಥಮ ಪ್ರಜೆಯೂ ಆಗಿರುವ ರಾಷ್ಟ್ರಪತಿಗಳು ಭಾರತದ ಉನ್ನತ ಶಾಸಕಾಂಗದೊಳಗೆ ಅತ್ಯುನ್ನತ ಸಾಂವಿಧಾನಿಕ ಅಧಿಕಾರವನ್ನು ಹೊಂದಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸರ್ಕಾರವು ಪದೇ ಪದೇ ಔಚಿತ್ಯವನ್ನು ಕಡೆಗಣಿಸಿದೆ. ಈ ಸರ್ಕಾರ ರಾಷ್ಟ್ರಪತಿ ಕಚೇರಿಯನ್ನು “ಕೇವಲ ಟೋಕನಿಸಂ” ಗೆ ಇಳಿಸಿದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ.
It looks like the Modi Govt has ensured election of President of India from the Dalit and the Tribal communities only for electoral reasons.
While Former President, Shri Kovind was not invited for the New Parliament foundation laying ceremony…
1/4
— Mallikarjun Kharge (@kharge) May 22, 2023
ಮೋದಿ ಸರ್ಕಾರವು ಕೇವಲ ಚುನಾವಣಾ ಕಾರಣಗಳಿಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳಿಂದ ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಖಚಿತಪಡಿಸಿಕೊಂಡಂತೆ ತೋರುತ್ತಿದೆ. ಹೊಸ ಸಂಸತ್ತಿನ ಶಂಕುಸ್ಥಾಪನಾ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ. ನೂತನ ಸಂಸತ್ ಭವನದ ಉದ್ಘಾಟನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ಖರ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿಸ್ತಾ ಯೋಜನೆಯ ಅಡಿಗಲ್ಲು ಹಾಕಿದ್ದು ಪ್ರಧಾನಿ ನರೇಂದ್ರ ಮೋದಿ ಎಂಬ ಕಾರಣಕ್ಕೆ ಹಲವಾರು ವಿರೋಧ ಪಕ್ಷಗಳು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಸಮಾರಂಭವನ್ನು ತಪ್ಪಿಸಿದವು. ಆಗ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಗಿದ್ದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನವನ್ನು ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಅವರು ಮೇ 28 ರಂದು ಹೊಸ ಸಂಸತ್ತಿನ ಕಟ್ಟಡವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಸರ್ಕಾರವು ಪದೇ ಪದೇ ಮತ್ತು ಭಾರತದ ರಾಷ್ಟ್ರಪತಿಗಳ ಕಚೇರಿಯನ್ನು ಟೋಕನಿಸಂಗೆ (ಸಾಂಕೇತಿಕವಾಗಿರುವುದು)ಇಳಿಸಿದೆ ಎಂದಿದ್ದಾರೆ ಖರ್ಗೆ. ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಟ್ವೀಟ್ ಮಾಡಿದ ಒಂದು ದಿನದ ನಂತರ ಖರ್ಗೆ ಈ ರೀತಿ ಗುಡುಗಿದ್ದಾರೆ,
ರಾಹುಲ್ ಗಾಂಧಿ, ಅಸಾದುದ್ದೀನ್ ಓವೈಸಿ, ಸುಖೇಂದು ಶೇಖರ್ ರೇ, ಮನೋಜ್ ಝಾ ಮತ್ತು ಡಿ ರಾಜಾ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟನೆ ಮಾಡುವುದನ್ನು ಟೀಕಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ