ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ

|

Updated on: Oct 09, 2024 | 12:16 PM

ಜಮ್ಮು-ಕಾಶ್ಮೀರದ ಅನಂತನಾಗ್​ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ. ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಟೆರಿಟೋರಿಯಲ್ ಆರ್ಮಿಯ 161 ಯೂನಿಟ್‌ಗೆ ಸೇರಿದ ಇಬ್ಬರು ಸೈನಿಕರನ್ನು ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಅಪಹರಿಸಲಾಗಿತ್ತು.

ಜಮ್ಮು-ಕಾಶ್ಮೀರದಲ್ಲಿ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ
ಸೈನಿಕರು
Image Credit source: Newsdrum
Follow us on

ಜಮ್ಮು-ಕಾಶ್ಮೀರದ ಅನಂತನಾಗ್​ ಪ್ರದೇಶದಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆಯಾಗಿದ್ದಾರೆ. ಯೋದರ ದೇಹದಲ್ಲಿ ಹಲವು ಗುಂಡಿನ ಗುರುತುಗಳಿವೆ, ಅಕ್ಟೋಬರ್ 8 ರಂದು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಆರಂಭಿಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಟೆರಿಟೋರಿಯಲ್ ಆರ್ಮಿಯ 161 ಯೂನಿಟ್‌ಗೆ ಸೇರಿದ ಇಬ್ಬರು ಸೈನಿಕರನ್ನು ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಅಪಹರಿಸಲಾಗಿತ್ತು.

ಆದರೆ, ಅವರಲ್ಲಿ ಒಬ್ಬರು ಎರಡು ಗುಂಡಿನ ಗಾಯಗಳ ನಂತರವೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಮತ್ತೋರ್ವ ಯೋಧ ಬುಧವಾರ, ಅಕ್ಟೋಬರ್ 9 ರಂದು ಅನಂತನಾಗ್‌ನ ಪತ್ರಿಬಲ್ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ದೇಹದ ಮೇಲೆ ಗುಂಡಿನ ಗಾಯಗಳಿದ್ದು, ಶೋಧ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದ್ದಾರೆ.

ಗಾಯಗೊಂಡ ಯೋಧನನ್ನು ಅಗತ್ಯ ಚಿಕಿತ್ಸೆಗಾಗಿ ವೈದ್ಯಕೀಯ ಸೌಲಭ್ಯಕ್ಕೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನ ಈ ಘಟನೆ ನಡೆದಿದೆ.ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಅಕ್ಟೋಬರ್ 8 ರಂದು ಕೋಕರ್ನಾಗ್‌ನ ಕಜ್ವಾನ್ ಅರಣ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಏಜೆನ್ಸಿಗಳೊಂದಿಗೆ ಭಾರತೀಯ ಸೇನೆಯು ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಪ್ರಾದೇಶಿಕ ಸೇನೆಯ ಒಬ್ಬ ಯೋಧ ನಾಪತ್ತೆಯಾಗಿರುವುದರಿಂದ ಕಾರ್ಯಾಚರಣೆಯು ರಾತ್ರಿಯಿಡೀ ಮುಂದುವರೆಯಿತು.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಇಬ್ಬರು ಯೋಧರ ಅಪಹರಣ

ಈ ವರ್ಷದ ಆಗಸ್ಟ್‌ನಲ್ಲಿ ಅನಂತ್‌ನಾಗ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದರು ಮತ್ತು ಮೂವರು ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ