AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelson Mandela Day 2023: ಜುಲೈ 18 ರಂದು ವಿಶ್ವದಾದ್ಯಂತ ನೆಲ್ಸನ್ ಮಂಡೇಲಾ ದಿನವನ್ನು ಯಾಕೆ ಆಚರಣೆ ಮಾಡುತ್ತಾರೆ?

ವಿಶ್ವ ಶಾಂತಿ, ಮಾನವ ಹಕ್ಕು, ಸಮನ್ವಯ ಮತ್ತು ಸ್ವಾತಂತ್ರ್ಯದ ಸಂಸ್ಕೃತಿಗೆ ನೆಲ್ಸನ್ ಮಂಡೇಲಾ ಅವರ ಕೊಡುಗೆಯನ್ನು ನೆನಪಿಸಲು ಜುಲೈ 18 ರಂದು ವಿಶ್ವದಾದ್ಯಂತ ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆ ಹೇಗೆ ಆರಂಭವಾಯಿತು, ಇದರ ಮಹತ್ವವೇನು ಎಂಬುದನ್ನು ತಿಳಿಯಿರಿ.

Nelson Mandela Day 2023: ಜುಲೈ 18 ರಂದು ವಿಶ್ವದಾದ್ಯಂತ ನೆಲ್ಸನ್ ಮಂಡೇಲಾ ದಿನವನ್ನು ಯಾಕೆ ಆಚರಣೆ ಮಾಡುತ್ತಾರೆ?
ನೆಲ್ಸನ್ ಮಂಡೇಲಾ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 18, 2023 | 6:00 AM

Share

ಒಂದು ಕಾಲದಲ್ಲಿ ವರ್ಣಭೇದ ನೀತಿಯಿಂದಾಗಿ ಬಿಳಿಯರಿಂದ ಕಪ್ಪು ವರ್ಣೀಯರು ನಿರಂತವಾಗಿ ದಬ್ಬಾಳಿಕೆಗೆ ಒಳಗಾಗಿದ್ದರು, ಈ ವರ್ಣಭೇದ ನೀತಿಯನ್ನು ತೊಡೆದು ಹಾಕಲು ಹಲವಾರು ಹೋರಾಟಗಳು ನಡೆದಿವೆ. ಈ ಹೋರಾಟಗಳಲ್ಲಿ ನೆಲ್ಸನ್ ಮಂಡೇಲಾ (Nelson Mandela) ಅವರ ಹೆಸರು ಮುಖ್ಯವಾಗಿ ಕೇಳಿ ಬರುತ್ತದೆ. ವರ್ಣಭೇದ ನೀತಿಯ ವಿರುದ್ಧದ ಹೋರಾಟದಲ್ಲಿ ನೆಲ್ಸನ್ ಮಂಡೇಲಾ ಅವರ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಪ್ರಪಂಚದಾದ್ಯಂತ ಶಾಂತಿಯ ಸಂದೇಶವಾಹಕನಾಗಿ ಅವರು ಪ್ರಸಿದ್ಧರಾಗಿದ್ದಾರೆ. ಗಾಂಧಿಯಂತೆ ಮಂಡೇಲಾ ಕೂಡಾ ಅಹಿಂಸೆಯ ಮಾರ್ಗವನ್ನು ಅನುಸಿರಿಸದ ವ್ಯಕ್ತಿ. ಅವರನ್ನು ಆಫ್ರಿಕಾದ ಗಾಂಧಿ ಎಂದು ಕರೆಯಲಾಗುತ್ತದೆ. ವರ್ಣಭೇದ ನೀತಿಯ ವಿರುದ್ಧ ಹೋರಾಡಿ ಮಂಡೇಲಾ 27 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು. ಶಾಂತಿಗಾಗಿ ನೊಬೆಲ್ ಪ್ರಶಸ್ತಿಯನ್ನು ಗೆದ್ದ ದಕ್ಷಿಣ ಆಫ್ರಿಕಾದ ಮಾಜಿ ಅದ್ಯಕ್ಷ ನೆಲ್ಸನ್ ಮಂಡೇಲಾ ಅವರ ಜನ್ಮದಿನದ ನೆನಪಿಗಾಗಿ ವಿಶ್ವಸಂಸ್ಥೆಯು ಪ್ರತಿ ವರ್ಷ ಜುಲೈ 18 ರಂದು ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನವನ್ನು ಆಚರಿಸುತ್ತದೆ.

ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನದ ಇತಿಹಾಸ:

2009ರ ನವೆಂಬರ್​ನಲ್ಲಿ, ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ವಿಶ್ವದಲ್ಲಿ ಶಾಂತಿ ಮತ್ತು ಸ್ವಾತಂತ್ರ್ಯದ ಸಂಸ್ಕೃತಿಗೆ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷರಾದ ನೆಲ್ಸನ್ ಮಂಡೇಲಾ ಅವರ ಕೊಡುಗೆಯನ್ನು ಗುರುತಿಸಲು ಜುಲೈ 18 , ಮಂಡೇಲಾ ಅವರ ಜನ್ಮ ದಿನವನ್ನು ‘ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನ’ವೆಂದು ಘೋಷಿಸಿತು. ಜುಲೈ 18, 2010 ರಲ್ಲಿ ಮೊದಲ ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನವನ್ನು ಆಚರಿಸಲಾಯಿತು. ಮಂಡೇಲಾ ಅವರು ಪ್ರಜಾಸತಾತ್ಮಕವಾಗಿ ಚುನಾಯಿತರಾದ ಮೊದಲ ಕಪ್ಪು ವರ್ಣೀಯಾ ಅಧ್ಯಕ್ಷರು ಮಾತ್ರವಲ್ಲದೆ ಜಗತ್ತನ್ನು ಪರಿವರ್ತಿಸುವ ಬೃಹತ್ ಕನಸುಗಳನ್ನು ಹೊಂದಿರುವ ವ್ಯಕ್ತಿಯಾಗಿದ್ದರು. ಈ ದಿನ ಬಡತನ, ಲಿಂಗ ಅಸಮಾನತೆ, ವರ್ಣಭೇದ ನೀತಿ ಮತ್ತು ಮಾನವ ಹಕ್ಕುಗಳ ನಿರ್ಮೂಲನೆ ವಿರುದ್ಧದ ಅವರ ಹೋರಾಟವನ್ನು ನೆನಪಿಸುತ್ತದೆ.

ಇದನ್ನೂ ಓದಿ:ಇಂದು ನೆಲ್ಸನ್ ಮಂಡೇಲಾ ಅಂತಾರಾಷ್ಟ್ರೀಯ ದಿನ; ಮಂಡೇಲಾ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ 

ನೆಲ್ಸನ್ ಮಂಡೇಲಾ ಅಂತರಾಷ್ಟ್ರೀಯ ದಿನದ ಮಹತ್ವ:

ಈ ದಿನವು ಜಗತ್ತಿನ ಎಲ್ಲರಿಗೂ ಸಮಾನ ಅವಕಾಶಗಳೊಂದಿಗೆ ಶಾಂತಿಯುತ ಜಗತ್ತಿನಲ್ಲಿ ವಾಸಿಸುವ ಮಹತ್ವವನ್ನು ತಿಳಿಸುತ್ತದೆ. ಈ ದಿನವು ಜನರಲ್ಲಿ ಒಗ್ಗಟ್ಟು ಮತ್ತು ಏಕತೆಯ ಮೌಲ್ಯವನ್ನು ಬೆಳಗಿಸುತ್ತದೆ. ಅಲ್ಲದೆ ಈ ದಿನದಂದು 46664 ಎಂದು ಕರೆಯಲಾಗುವ ಅಭಿಯಾನವನ್ನು ಆಚರಿಸಲಾಗುತ್ತದೆ. ಈ ಸಂಖ್ಯೆಯು ನೆಲ್ಸನ್ ಮಂಡೇಲಾರವರು ಬಂಧಿಯಾಗಿದ್ದ, ರಾಬೆನ್ ಐಲ್ಯಾಂಡ್ ಜೈಲಿನ ಸಂಖ್ಯೆಯಾಗಿದೆ. ಇದನ್ನು ಹೆಚ್.ಐ.ವಿ ಮತ್ತು ಎಡ್ಸ್ ಕುರಿತು ಜಾಗೃತಿ ಮೂಡಿಸಲು ಪ್ರಾರಂಭಿಸಲಾಯಿತು. ಈ ದಿನದಂದು ಪ್ರಪಂಚದಾತ್ಯಂತ ನಡೆಯುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತದೆ ಮತ್ತು ಪ್ರತಿಯೊಂದು ರಾಷ್ಟ್ರಗಳ ಶಾಂತಿ, ಭದ್ರತೆಯ ಮೌಲ್ಯಗಳ ಬಗ್ಗೆ ತಿಳಿವಳಿಕೆ ಮೂಡಿಸಲಾಗುತ್ತದೆ. ಹಾಗೂ ಸಂಘರ್ಷಗಳನ್ನು ಪರಿಹರಿಸುವಲ್ಲಿ, ಮಾನವ ಹಕ್ಕುಗಳು, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಸಮನ್ವಯವನ್ನು ಉತ್ತೇಜಿಸುವಲ್ಲಿ ಮತ್ತು ಜನಾಂಗೀಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನೆಲ್ಸನ್ ಮಂಡೇಲಾ ಅವರು ವಿಶ್ವ ಶಾಂತಿಗೆ ನೀಡಿದ ಕೊಡುಗೆಯನ್ನು ಜಗತ್ತಿಗೆ ನೆನಪಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ನೆಲ್ಸನ್ ಮಂಡೇಲಾ ಪ್ರಶಸ್ತಿ:

ಪ್ರಪಂಚದಾದ್ಯಂತ ಶಾಂತಿಗಾಗಿ ನೆಲ್ಸನ್ ಮಂಡೇಲಾ ಅವರ ಹೋರಾಟವನ್ನು ಗಮನದಲ್ಲಿಟ್ಟುಕೊಂಡು, 2014 ರಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಪರಿಚಯಿಸುವುದಾಗಿ ಘೋಷಿಸಿತು. ಈ ಪ್ರಶಸ್ತಿಯನ್ನು ಐದು ವರ್ಷಗಳಿಗೊಮ್ಮೆ ನೀಡಲಾಗುತ್ತದೆ, ಮಾನವೀಯತೆಯ ಸೇವೆಯಲ್ಲಿ ತಮ್ಮ ಜೀವನವನ್ನು ಮುಡುಪಾಗಿಟ್ಟವರ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ