Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Dec 18, 2023 | 8:08 AM

ನವದೆಹಲಿ, ಡಿಸೆಂಬರ್ 18: ಕಾಶಿ-ತಮಿಳು ಸಂಗಮಂ 2.0 ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದೇ ವೇಳೆ, ಪ್ರಧಾನಿ ಭಾಷಣವನ್ನು ತಮಿಳುನಾಡಿನವರಿಗೆ ತಮಿಳು ಭಾಷೆಗೆ ಭಾಷಾಂತರಿಸಿ ಕೇಳಲು ಕೃತಕ ಬುದ್ಧಿಮತ್ತೆ (AI) ಸಾಧನ ‘ಭಾಷಿಣಿ’ ಸಾಧನವನ್ನು (Bhashini AI translation tool) ಬಳಸಲಾಗಿತ್ತು. ಈ ಸಾಧನದ ಬಗ್ಗೆಯೂ ಪ್ರಧಾನಿ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ಇದು ಹೊಸ ಆರಂಭ ಮತ್ತು ನಿಮ್ಮನ್ನು ತಲುಪಲು ನನಗೆ ಇನ್ನಷ್ಟು ಸುಲಭವಾಗಲಿದೆ ಎಂದು ಪ್ರಧಾನಿ ಹೇಳಿದ್ದರು.

ಭಾಷಿಣಿ ಎಂದರೇನು?

ಭಾಷಿಣಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಧಾರಿತ ನೇತೃತ್ವದ ಅನುವಾದ ಸಾಧನವಾಗಿದೆ. ಇದು ಇತರ ಭಾಷೆಗಳ ಜನರೊಂದಿಗೆ ಮಾತನಾಡುವಾಗ ತಮ್ಮದೇ ಭಾಷೆಯನ್ನು ಬಳಸಲು ಜನರಿಗೆ ಸಹಾಯ ಮಾಡುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ಈ ಉಪಕರಣವು ತುಂಬಾ ಉಪಯುಕ್ತವಾಗಿದೆ.

ಸರ್ಕಾರದ ಪ್ರಕಾರ, ಈ ಉಪಕರಣವು ಎಲ್ಲಾ ಭಾರತೀಯರಿಗೆ ಅವರ ಸ್ವಂತ ಭಾಷೆಯಲ್ಲಿ ಇಂಟರ್ನೆಟ್ ಮತ್ತು ಡಿಜಿಟಲ್ ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಮಾಡುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು ಧ್ವನಿ-ಆಧಾರಿತ ಆ್ಯಕ್ಸೆಸ್ ಹೊಂದಿದ್ದು, ವಿವಿಧ ಭಾಷೆಗಳಲ್ಲಿ ಸಂವಹನಕ್ಕೆ ನೆರವಾಗುತ್ತದೆ. ಬಳಕೆದಾರರು ಆ್ಯಂಡ್ರಾಯ್ಡ್ (Android) ಮತ್ತು ಐಫೋನ್ (iPhone) ಅಪ್ಲಿಕೇಶನ್‌ಗಳ ಮೂಲಕ ಇದರ ಸೇವೆ ಪಡೆಯಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣದಲ್ಲಿ ಮೊಟ್ಟ ಮೊದಲ ಭಾರಿಗೆ ಎಐ ಆಧಾರಿತ ಅನುವಾದ ಸಾಧನ ಬಳಕೆ

ಡಿಜಿಟಲ್ ಸೇರ್ಪಡೆ ಮತ್ತು ಡಿಜಿಟಲ್ ಸಬಲೀಕರಣವನ್ನು ಇದು ಖಚಿತಪಡಿಸುತ್ತದೆ. ಆ ಮೂಲಕ ಆತ್ಮ ನಿರ್ಭರ ಭಾರತಕ್ಕೆ ಕೊಡುಗೆ ನೀಡಲಿದೆ ಎಂದು bhashini.gov.in ವೆಬ್​ಸೈಟ್​ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಾಶಿ-ತಮಿಳು ಸಂಗಮಂ ಎಕ್ಸ್​ಪ್ರೆಸ್​​ಗೆ ಚಾಲನೆ ನೀಡಿದ್ದಾರೆ. ಇದು ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಉಪಕ್ರಮವಾಗಿದೆ. ಇದು ‘ಏಕ್ ಭಾರತ್, ಶ್ರೇಷ್ಠ ಭಾರತ್’ ಉಪಕ್ರಮದ ಒಂದು ಭಾಗವಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!