AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿಕ್ಕಿ, ವ್ಯಕ್ತಿ ಸಾವು: ವಶಕ್ಕೆ ಪಡೆದು ಕೆಲವೇ ಗಂಟೆಯಲ್ಲಿ ಜಾಮೀನು

ಕೊಚ್ಚಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ, ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಮೃತನ ಕುಟುಂಬಸ್ಥರು ತನಿಖೆ ಹಾದಿತಪ್ಪಿಸಲು ಮತ್ತು ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣದಲ್ಲಿ ನ್ಯಾಯಾಧೀಶರ ಪ್ರಭಾವದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿಕ್ಕಿ, ವ್ಯಕ್ತಿ ಸಾವು: ವಶಕ್ಕೆ ಪಡೆದು ಕೆಲವೇ ಗಂಟೆಯಲ್ಲಿ ಜಾಮೀನು
ಕೊಚ್ಚಿಯಲ್ಲಿ ಅಪಘಾತImage Credit source: Google
ಅಕ್ಷಯ್​ ಪಲ್ಲಮಜಲು​​
|

Updated on: Oct 26, 2026 | 9:58 AM

Share

ಕೊಚ್ಚಿ, ಅ.26: ಕೇರಳದ ಕೊಚ್ಚಿಯಲ್ಲಿ ಅತ್ಯಂತ ಬೆಚ್ಚಿಬೀಳಿಸುವ ಅಪಘಾತವೊಂದು ಸಂಭವಿಸಿದೆ. ತ್ರಿಸ್ಸೂರ್‌ನ ಸ್ಥಳೀಯ ನ್ಯಾಯಾಲಯದ ನ್ಯಾಯಾಧೀಶರೊಬ್ಬರ 17 ವರ್ಷದ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಐಷಾರಾಮಿ ಮರ್ಸಿಡಿಸ್ ಬೆಂಜ್ (Mercedes-Benz) ಕಾರು, ಬೈಕ್​​ಗೆ ಭೀಕರವಾಗಿ ಢಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ತಂದೆ ನ್ಯಾಯಾಧೀಶರಾಗಿರುವ ಕಾರಣ ಪ್ರಕರಣದ ತನಿಖೆಯನ್ನು ಹಾದಿತಪ್ಪಿಸಲು ಮತ್ತು ಸಾಕ್ಷ್ಯ ನಾಶ ಯತ್ನಿಸಲಾಗುತ್ತಿದೆ ಎಂದು ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಮಂಜಲಿ ನಿವಾಸಿ ಜಯಬಾಲಕೃಷ್ಣನ್ ಎಂಬುವವರು ತಡರಾತ್ರಿ ತಮ್ಮ ರಸ್ತೆ ಬದಿಯ ಉಪಹಾರ ಗೃಹವನ್ನು ಮುಚ್ಚಿ ಬೈಕ್​​ನಲ್ಲಿ ಮನೆಗೆ ಮರಳುತ್ತಿದ್ದರು. ಭಾನುವಾರ ತಡರಾತ್ರಿ 2:20ರ ಸುಮಾರಿಗೆ ಚೇರನಲ್ಲೂರಿನ ಕಂಟೈನರ್ ರಸ್ತೆಯ ಮಾರಪರಂಬು ಬಳಿ ವಲ್ಲಾರ್‌ಪಾಡಮ್‌ನಿಂದ ಕಳಮಸ್ಸೇರಿ ಕಡೆಗೆ ಸಾಗುತ್ತಿದ್ದಾಗ, ನ್ಯಾಯಾಧೀಶರ ಮಗ ಚಲಾಯಿಸುತ್ತಿದ್ದ ಕಾರು ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣ ಪುಡಿಪುಡಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಜಯಬಾಲಕೃಷ್ಣನ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ.

ತಂದೆ-ತಾಯಿಗೆ ತಿಳಿಯದೆ ಡ್ರೈವ್ ಮಾಡುವ ಆಸೆಯಿಂದ ಕಾರು ತಂದಿದ್ದಾಗಿ ಹಾಗೂ ಅಪಘಾತದ ವೇಳೆ ಭಾರಿ ಮಳೆ ಸುರಿಯುತ್ತಿದ್ದರಿಂದ ಸ್ಕೂಟರ್ ದಿಕ್ಕು ಬದಲಾಯಿಸಿ ಅಪಘಾತಕ್ಕೀಡಾಯಿತು ಎಂದು 17 ವರ್ಷದ ಬಾಲಕ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಚೇರನಲ್ಲೂರು ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 281 (ಅಜಾಗರೂಕತೆಯ ಚಾಲನೆ) ಹಾಗೂ 106(1) (ಅಜಾಗರೂಕತೆಯಿಂದ ಸಾವು ಎಸಗುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ವಾಹನದ ನೋಂದಾಯಿತ ಮಾಲೀಕರಾಗಿರುವ ತ್ರಿಸ್ಸೂರ್ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 199A ಅಡಿಯಲ್ಲಿ (ಅಪ್ರಾಪ್ತರಿಗೆ ವಾಹನ ನೀಡಿದ್ದಕ್ಕಾಗಿ ಪೋಷಕರು/ಮಾಲೀಕರ ಮೇಲಿನ ಕ್ರಿಮಿನಲ್ ಪ್ರಕರಣ) ಕಠಿಣ ಕ್ರಮ ಕೈಗೊಳ್ಳುವ ಕುರಿತು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅಪ್ರಾಪ್ತನ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವೈದ್ಯಕೀಯ ತಪಾಸಣೆಯ ಪ್ರಾಥಮಿಕ ವರದಿಯಲ್ಲಿ ಮದ್ಯಪಾನ ಮಾಡಿರುವುದು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಆಕ್ರೋಶದ ಹೇಳಿಕೆಗೆ ತಪ್ಪು ತಿಳುವಳಿಕೆಯೇ ಕಾರಣ?: ಥಳಿತಕ್ಕೊಳಗಾದ ವ್ಯಕ್ತಿಯಿಂದ ಸ್ಫೋಟಕ ಸತ್ಯ ಬಹಿರಂಗ

ತನಿಖೆ ಹಾದಿತಪ್ಪಿಸುವ ಯತ್ನ – ಮೃತನ ಕುಟುಂಬಸ್ಥರ ಆರೋಪ:

ಲೈಸೆನ್ಸ್ ಇಲ್ಲದ 17 ವರ್ಷದ ಮಗನಿಗೆ ಕಾರು ಚಾಲನೆ ಮಾಡಲು ಹೇಗೆ ಬಿಟ್ರಿ ಎಂದು ಪ್ರಶ್ನಿಸಿದ್ದಕ್ಕೆ, ನ್ಯಾಯಾಧೀಶರ ಮಗ ಎಂದು ಬೆದರಿಕೆ ಹಾಕುವಂತೆ ನಡೆದುಕೊಂಡರು ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಅಪಘಾತಕ್ಕೀಡಾದ ಮರ್ಸಿಡಿಸ್ ಬೆಂಜ್ ಕಾರಿನ ಫೋಟೋಗಳನ್ನು ಮೃತನ ಸಹೋದರ ಸೆಲ್ವರಾಜ್ ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಗ, ಪೊಲೀಸರೇ ಬಲವಂತವಾಗಿ ಆ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಾಧೀಶರ ಪ್ರಭಾವ ಬಳಸಿ ಪ್ರಕರಣವನ್ನು ದುರ್ಬಲಗೊಳಿಸಲಾಗುತ್ತಿದೆ ಹಾಗೂ ಎಫ್‌ಐಆರ್‌ನಲ್ಲಿ ಪ್ರಮುಖ ಸಾಕ್ಷ್ಯಗಳನ್ನು ಬಿಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದು, ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಪಿಎಸ್ಐ ವಿದ್ಯಾಶ್ರೀ, ಕಾನ್ಸ್‌ಟೇಬಲ್ ಪ್ರವೀಣ್ ಅಮಾನತು
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್‌ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು