Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ: ವೈದ್ಯರ ಮುಷ್ಕರದಿಂದ ಇಲ್ಲಿಯವರೆಗೆ 23 ರೋಗಿಗಳು ಸಾವನ್ನಪ್ಪಿದ್ದಾರೆ

ಕೋಲ್ಕತ್ತಾದಲ್ಲಿ ನಡೆದ ವೈದ್ಯರ ಮುಷ್ಕರದಿಂದಾಗಿ 23 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಆಗಸ್ಟ್​ನಲ್ಲಿ ಕೋಲ್ಕತ್ತಾದ ಆರ್​ಜಿಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆಯನ್ನು ಖಂಡಿಸಿ ವೈದ್ಯರು ನಡೆಸಿದ ಮುಷ್ಕರದಿಂದ 23 ರೋಗಿಗಳು ಪ್ರಾಣ ಬಿಟ್ಟಿದ್ದಾರೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.

ಕೋಲ್ಕತ್ತಾ: ವೈದ್ಯರ ಮುಷ್ಕರದಿಂದ ಇಲ್ಲಿಯವರೆಗೆ 23 ರೋಗಿಗಳು ಸಾವನ್ನಪ್ಪಿದ್ದಾರೆ
ಪ್ರತಿಭಟನೆ
Follow us
ನಯನಾ ರಾಜೀವ್
|

Updated on: Sep 09, 2024 | 2:36 PM

ವೈದ್ಯರ ಮುಷ್ಕರದಿಂದಾಗಿ 23 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಆಗಸ್ಟ್​ನಲ್ಲಿ ಕೋಲ್ಕತ್ತಾದ ಆರ್​ಜಿಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆಯನ್ನು ಖಂಡಿಸಿ ವೈದ್ಯರು ನಡೆಸಿದ ಮುಷ್ಕರದಿಂದ 23 ರೋಗಿಗಳು ಪ್ರಾಣ ಬಿಟ್ಟಿದ್ದಾರೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ಅವರು ವರದಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಮುಚ್ಚಿದ ವರದಿಯನ್ನು ಪರಿಶೀಲಿಸಿತು.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭದ್ರತೆಯ ಹೊಣೆ ಹೊತ್ತಿರುವ ಸಿಐಎಸ್‌ಎಫ್‌ಗೆ ಲಾಜಿಸ್ಟಿಕ್ ಬೆಂಬಲ ನೀಡಲು ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಹೇಳಿದೆ. ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ .

ಮತ್ತಷ್ಟು ಓದಿ:Kolkata rape-murder case: ನಾಳೆ ಸಂಜೆ 5 ಗಂಟೆಯೊಳಗೆ ಕೆಲಸಕ್ಕೆ ಮರಳಲು ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಸೂಚನೆ, ಶಿಸ್ತು ಕ್ರಮದ ಎಚ್ಚರಿಕೆ

ಕಲ್ಕತ್ತಾ ಹೈಕೋರ್ಟ್ ಈ ಸೂಕ್ಷ್ಮ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ. ಸಿಬಿಐ ತನಿಖೆಗೆ ಸುಮಾರು ಒಂದು ತಿಂಗಳು ಕಳೆದಿದೆ, ಸಂಜಯ್ ರಾಯ್ ಅವರನ್ನು ಬಂಧಿಸಲಾಗಿದೆ.

ಅಪರಾಧ ಸ್ಥಳದಿಂದ ಸಾಕ್ಷ್ಯಾಧಾರಗಳು ನಾಪತ್ತೆಯಾಗಿರುವುದರಿಂದ ತನಿಖೆಗೆ ಅಡ್ಡಿಯುಂಟಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ, ಇದು ಪ್ರಕರಣದ ಪ್ರಮುಖ ಅಂಶಗಳನ್ನು ಸಂಪರ್ಕಿಸಲು ಕಷ್ಟಕರವಾಗಿದೆ ಮತ್ತು ಪ್ರಗತಿಯನ್ನು ನಿಧಾನಗೊಳಿಸಿದೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರಾದ ಡಾ.ಸಂದೀಪ್ ಘೋಷ್ ಅವರು ವಿದ್ಯಾರ್ಥಿನಿಯ ಶವ ಪತ್ತೆಯಾದ ಮರುದಿನ ಆಗಸ್ಟ್ 10 ರಂದು ಸೆಮಿನಾರ್ ಕೊಠಡಿಯ ಸಮೀಪವಿರುವ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯವನ್ನು ಕೆಡವಲು ಆದೇಶಿಸಿದ್ದರು ಎಂದು ಕೇಂದ್ರೀಯ ಸಂಸ್ಥೆ ಬಹಿರಂಗಪಡಿಸಿದೆ.

ಮಹಿಳಾ ವೈದ್ಯರ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಲು ಕೋಲ್ಕತ್ತಾ ಪೊಲೀಸರ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ರಾಜ್ಯ ಆರೋಗ್ಯ ಇಲಾಖೆಯ ವರದಿ ಪ್ರಕಾರ ವೈದ್ಯರು ಕೆಲಸ ಮಾಡದ ಕಾರಣ ಇದುವರೆಗೆ 23 ಜನರು ಸಾವನ್ನಪ್ಪಿದ್ದಾರೆ. ಸ್ಥಿತಿಗತಿ ವರದಿ ಸಲ್ಲಿಕೆಯಾಗಿದೆ, ರಾಜ್ಯ ಆರೋಗ್ಯ ಇಲಾಖೆ ವರದಿ ಸಲ್ಲಿಸಿದೆ, ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಸಿಬಿಐ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ಸುಪ್ರೀಂ ಕೋರ್ಟ್ ಅಧ್ಯಯನ ನಡೆಸುತ್ತಿದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಇನ್ನೂ ಒಂದು ವಾರ ಕಾಲಾವಕಾಶ ನೀಡಿದೆ. ಹೊಸ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ದಕ್ಷಿಣ ಕೋಲ್ಕತ್ತಾದ 40 ಕ್ಕೂ ಹೆಚ್ಚು ಶಾಲೆಗಳ ಸುಮಾರು 4,000 ಮಾಜಿ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ