Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

monsoon 2021: ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕೋಲ್ಕತ್ತದಲ್ಲಿ ವಿಪರೀತ ಮಳೆ; ರಸ್ತೆಗಳೆಲ್ಲ ಜಲಾವೃತ..ಆದಷ್ಟು ಮನೆಯಲ್ಲೇ ಇರುವಂತೆ ಜನರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಕೋಲ್ಕತ್ತ ಮಳೆ (ಪಿಟಿಐ ಚಿತ್ರ)
Follow us
TV9 Web
| Updated By: Lakshmi Hegde

Updated on: Jun 17, 2021 | 3:26 PM

ಕೋಲ್ಕತ್ತದಲ್ಲಿ ನಿನ್ನೆಯಿಂದಲೂ ವಿಪರೀತ ಮಳೆ ಸುರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಇಡೀ ಪಶ್ಚಿಮ ಬಂಗಾಳದಾದ್ಯಂತ ಗುಡುಗು-ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೋಲ್ಕತ್ತದಲ್ಲಿ ಬುಧವಾರದಿಂದಲೇ ನಿರಂತರವಾಗಿ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಇಂದು ಹಲವು ಪ್ರಮುಖ ಮತ್ತು ಕಾಲುದಾರಿಗಳೆಲ್ಲ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿಹೋಗಿದ್ದು ಸಂಚಾರಕ್ಕೆ ತೀವ್ರ ತೊಡಕಾಗಿ ಪರಿಣಮಿಸಿದೆ.

ಕೋಲ್ಕತ್ತದ ಉತ್ತರ ಭಾಗಕ್ಕಿಂತ ದಕ್ಷಿಣದ ಭಾಗಗಳಲ್ಲಿ ತುಂಬ ಮಳೆ ಸುರಿಯುತ್ತಿದೆ. ಹೀಗಾಗಿ ಬ್ಯಾಲಿಗಂಜ್ ವೃತ್ತಾಕಾರದ ರಸ್ತೆ, ಲೌಡಾನ್ ಸ್ಟ್ರೀಟ್, ಸದರ್ನ್ ಅವೆನ್ಯೂ ಮತ್ತು ಕಾಸ್ಬಾ, ಬೆಹಾಲಾ ಮತ್ತು ಟೋಲಿಗಂಗೆಯ ಬಳಿಯೆಲ್ಲ ರಸ್ತೆಗಳು ನೀರಿನಿಂದ ತುಂಬಿ ಹೋಗಿವೆ. ಇನ್ನು ಇಂದಿನಿಂದ ಜೂ.19ರವರೆಗೂ ಪಶ್ಚಿಮಬಂಗಾಳದಲ್ಲಿ ಗುಡುಗುಮಿಂಚು ಸಹಿತ ವಿಪರೀತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೋಲ್ಕತ್ತದಲ್ಲಿ 24 ಗಂಟೆಯಲ್ಲಿ 144 ಮಿಮೀ ಮಳೆಯಾಗಿದೆ. ನಿರಂತರವಾದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ನೀರಿನ ಮಟ್ಟ ಏರುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹಾಗೇ, ಅತಿಯಾದ ಗುಡುಗು-ಮಿಂಚು ಕೂಡ ಇರುವದರಿಂದ ಜನರೂ ಸಹ ಆದಷ್ಟು ಮನೆಯೊಳಗೇ ಇರಬೇಕು ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Viral video: ತಲೆ ಮೇಲೆ ಭಾರದ ಪಾತ್ರೆ ಬುಟ್ಟಿ ಹೊತ್ತು ನೀರಿನಲ್ಲಿ ಬೈಕ್​ ಓಡಿಸಿದ ಮಹಿಳೆ! ಅದ್ಭುತ ಪ್ರತಿಭೆಗೆ ಪ್ರಶಂಸೆ

Kolkata and several parts of the West Bengal received incessant rain

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ