ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಪಶ್ಚಿಮ ಬಂಗಾಳದ ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಯಾವುದೇ ಸಮರ್ಥನೆ ಇಲ್ಲ ಎಂದು ಬಿಜೆಪಿ ಹೇಳಿದೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಬಿಜೆಪಿ ಈ ಪ್ರಕರಣದಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಇಂಡಿಯಾ ಬ್ಲಾಕ್​ನ ಮಹಿಳಾ ಸಂಸದರ ಮೌನವನ್ನು ಪ್ರಶ್ನಿಸಿದೆ.

ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಿಎಂ ಮಮತಾ ಬ್ಯಾನರ್ಜಿ
Follow us
|

Updated on: Aug 16, 2024 | 6:42 PM

ಕೊಲ್ಕತ್ತಾ: ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಒತ್ತಾಯಿಸಿದೆ.

ಆಗಸ್ಟ್ 9ರಂದು ತರಬೇತಿ ನಿರತ ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ದುಷ್ಕರ್ಮಿಗಳನ್ನು ರಕ್ಷಿಸಿದ್ದಾರೆ ಎಂದು ಆರೋಪಿಸಿ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೂನಾವಾಲಾ, ಐಎನ್‌ಡಿಐಎ ಬ್ಲಾಕ್ ಈ ಪ್ರಕರಣದಲ್ಲಿ ಏಕೆ ಮೌನಕ್ಕೆ ಶರಣಾಗಿದೆ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Kolkata Doctor Murder Case: ಕೊಲ್ಕತ್ತಾ ವೈದ್ಯೆ ಮರಣೋತ್ತರ ಪರೀಕ್ಷೆ; ಸಾಯುವಾಗ ಕುತ್ತಿಗೆ ಮುರಿತ, ಕಣ್ಣು, ಬಾಯಿಯಿಂದ ರಕ್ತಸ್ರಾವ

ಪಶ್ಚಿಮ ಬಂಗಾಳದಲ್ಲಿ ಕಾನೂನಿನ ನಿಯಮವಿಲ್ಲ ಎಂದು ಆರೋಪಿಸಿದ ಬಿಜೆಪಿ ನಾಯಕ ಪೂನಾವಾಲಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಕೃತ್ಯದ ಅಪರಾಧಿಗಳನ್ನು ಉಳಿಸಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅವರು ಮೃತ ಯುವತಿಗೆ ನ್ಯಾಯ ಕೊಡಿಸುವ ಬಗ್ಗೆ ಗಮನಹರಿಸುತ್ತಿಲ್ಲ. ಆರೋಪಿಗಳು ಈ ಪ್ರಕರಣದಲ್ಲಿ ಟಿಎಂಸಿ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು. ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಸಮರ್ಥ ಅಧಿಕಾರಿಗಳು ನಿರ್ಧರಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆ ಕೊಲೆಗೂ ಮುನ್ನ ಸಾಮೂಹಿಕ ಅತ್ಯಾಚಾರ?; ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಅಂಶ ಬಯಲು

ಕಳೆದ ಶುಕ್ರವಾರ ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ತರಬೇತಿ (ಪಿಜಿಟಿ) ವೈದ್ಯೆಯ ಅರೆ ನಗ್ನ ಶವ ಪತ್ತೆಯಾಗಿತ್ತು. ರಾತ್ರಿ ಡ್ಯೂಟಿಯಲ್ಲಿದ್ದ ಆ ವೈದ್ಯೆ ತನ್ನ ಸಹೋದ್ಯೋಗಿಗಳ ಜೊತೆ ಊಟ ಮುಗಿಸಿ, ವಿಶ್ರಾಂತಿಗೆಂದು ಸೆಮಿನಾರ್​ ಹಾಲ್​ಗೆ ಹೋಗಿದ್ದರು. ಏಕಾಂಗಿಯಾಗಿದ್ದ ಅವರ ಮೇಲೆ ಆಗ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ.

ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗಿತ್ತು ಮತ್ತು ಆಕೆಯ ದೇಹದ ಇತರ ಭಾಗಗಳಲ್ಲಿ ಗಾಯದ ಗುರುತುಗಳಿತ್ತು. ಅವರ ಕಣ್ಣು ಮತ್ತು ಬಾಯಿ ಎರಡರಿಂದಲೂ ರಕ್ತಸ್ರಾವವಾಗಿತ್ತು, ಮುಖ ಮತ್ತು ಉಗುರಿನ ಮೇಲೆ ಗಾಯಗಳಾಗಿತ್ತು. ವೈದ್ಯೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವೂ ಆಗಿತ್ತು. ಆಕೆಯ ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರದ ಬೆರಳು ಮತ್ತು ತುಟಿಗಳಲ್ಲಿ ಗಾಯಗಳಾಗಿವೆ ಎಂದು ಶವಪರೀಕ್ಷೆ ವರದಿ ಬಹಿರಂಗಪಡಿಸಿದೆ. ಈ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ