Kolkata Doctor Murder Case: ಕೊಲ್ಕತ್ತಾ ವೈದ್ಯೆ ಮರಣೋತ್ತರ ಪರೀಕ್ಷೆ; ಸಾಯುವಾಗ ಕುತ್ತಿಗೆ ಮುರಿತ, ಕಣ್ಣು, ಬಾಯಿಯಿಂದ ರಕ್ತಸ್ರಾವ

|

Updated on: Aug 11, 2024 | 1:46 PM

ಕೊಲ್ಕತ್ತಾದ ಆರ್​ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ಅತ್ಯಾಚಾರ-ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ರಾತ್ರಿ ಡ್ಯೂಟಿಯಲ್ಲಿದ್ದ ಕಿರಿಯ ವೈದ್ಯೆ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿಗೆ ಹೋಗಿದ್ದಾಗ ಆಕೆಯ ಮೇಲೆ ಭಯಾನಕವಾಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಆರಂಭಿಕ ಶವಪರೀಕ್ಷೆಯ ಪ್ರಕಾರ ಆಕೆಯ ಕುತ್ತಿಗೆಯನ್ನು ಮುರಿಯಲಾಗಿದ್ದು, ದೇಹದ ಅಂಗಾಂಗಗಳಲ್ಲಿ ರಕ್ತಸ್ರಾವ ಉಂಟಾಗಿದೆ ಎಂಬುದು ದೃಢಪಟ್ಟಿದೆ.

Kolkata Doctor Murder Case: ಕೊಲ್ಕತ್ತಾ ವೈದ್ಯೆ ಮರಣೋತ್ತರ ಪರೀಕ್ಷೆ; ಸಾಯುವಾಗ ಕುತ್ತಿಗೆ ಮುರಿತ, ಕಣ್ಣು, ಬಾಯಿಯಿಂದ ರಕ್ತಸ್ರಾವ
ಕೊಲ್ಕತ್ತಾದಲ್ಲಿ ವೈದ್ಯೆ ಕೊಲೆ ಖಂಡಿಸಿ ಪ್ರತಿಭಟನೆ
Follow us on

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆರ್​ಜಿ ಕರ್ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜೋಯ್ ರಾಯ್ ಎಂಬ ವ್ಯಕ್ತಿಯನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ರಾಜಧಾನಿಯ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯು ಶವವಾಗಿ ಪತ್ತೆಯಾಗಿದ್ದರು.

ಸ್ನಾತಕೋತ್ತರ ತರಬೇತಿ ವೈದ್ಯರ ಆರಂಭಿಕ ಶವಪರೀಕ್ಷೆಯು ಲೈಂಗಿಕ ದೌರ್ಜನ್ಯದ ನಂತರ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದೆ. ಮಹಿಳೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗಿದೆ ಎಂದು ವರದಿ ತಿಳಿಸಿದೆ. ದೇಹದ ಇತರ ಭಾಗಗಳಿಗೂ ಗಾಯಗಳಾಗಿವೆ. ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿದ್ದು, ಮುಖ ಮತ್ತು ಉಗುರಿನ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವೂ ಆಗಿತ್ತು. ಆಕೆಯ ಹೊಟ್ಟೆ, ಎಡಗಾಲು, ಕುತ್ತಿಗೆ, ಬಲಗೈ, ಉಂಗುರದ ಬೆರಳು ಮತ್ತು ತುಟಿಗಳ ಮೇಲೆ ಗಾಯಗಳಾಗಿವೆ.

ಇದನ್ನೂ ಓದಿ: ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಕಳೆದ ವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಮುಂಜಾನೆ 3-6 ಗಂಟೆಯ ನಡುವೆ ಈ ಕೊಲೆ ನಡೆದಿದೆ. ಆಕೆಯ ಕತ್ತು ಮುರಿದಿರುವುದು ಕೂಡ ಕಂಡು ಬಂದಿದೆ. ವೈದ್ಯೆಯ ಕತ್ತು ಹಿಸುಕಿದ ನಂತರ ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ನೈಟ್ ಡ್ಯೂಟಿಯಲ್ಲಿದ್ದ ವೈದ್ಯೆ ಇತರೆ ವೈದ್ಯರೊಂದಿಗೆ ರಾತ್ರಿ 2 ಗಂಟೆ ಸುಮಾರಿಗೆ ಊಟ ಮಾಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಆಕೆ ಸೆಮಿನಾರ್ ಕೋಣೆಗೆ ಹೋದರು. ನಂತರ ಬೆಳಿಗ್ಗೆ ಆಕೆಯ ಶವ ಪತ್ತೆಯಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Kolkata doctor death: ವೈದ್ಯೆಯ ಸಾವು ಪ್ರಕರಣ: ಪಶ್ಚಿಮ ಬಂಗಾಳದಾದ್ಯಂತ ಭುಗಿಲೆದ್ದ ಪ್ರತಿಭಟನೆ

ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಅತ್ಯಾಚಾರಿಗಳು ಮತ್ತು ಕೊಲೆಗಾರರನ್ನು ಒಂದು ವಾರದೊಳಗೆ ಶೀಘ್ರವಾಗಿ ವಿಚಾರಣೆ ಮತ್ತು ಶಿಕ್ಷೆಗೆ ಗುರಿಪಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಕರೆ ನೀಡಿದ್ದಾರೆ. ಸಮಾಜದಲ್ಲಿ ಬದುಕಲು ಅರ್ಹರಲ್ಲದ ಈ ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಬೇಕು ಅಥವಾ ಗಲ್ಲಿಗೇರಿಸಬೇಕು ಎಂದು ಸಿಎಂ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Sun, 11 August 24