ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್​ಗೆ 14 ದಿನಗಳ ನ್ಯಾಯಾಂಗ ಬಂಧನ

ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಸಂಜಯ್ ರಾಯ್​ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ನ್ಯಾಯಾಲಯಕ್ಕೆ ಕರೆತರಲಾಯಿತು. ರಾಯ್ ಅವರ ಸಿಬಿಐ ಕಸ್ಟಡಿ ಶುಕ್ರವಾರ ಅಂತ್ಯಗೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ.

ಕೋಲ್ಕತ್ತಾ ಅತ್ಯಾಚಾರ ಆರೋಪಿ ಸಂಜಯ್​ಗೆ 14 ದಿನಗಳ ನ್ಯಾಯಾಂಗ ಬಂಧನ
ಸಂಜಯ್ ರಾಯ್
Follow us
ನಯನಾ ರಾಜೀವ್
|

Updated on:Aug 23, 2024 | 2:55 PM

ಕೋಲ್ಕತ್ತಾದ ಆರ್​ಜಿ ಕರ್​ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಸಂಜಯ್​ ರಾಯ್​ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಸಂಜಯ್​ನನ್ನು ಭಾರಿ ಪೊಲೀಸ್​ ಭದ್ರತೆಯಲ್ಲಿ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಕ್ಕೆ ಕರೆತರಲಾಯಿತು. ರಾಯ್ ಅವರ ಸಿಬಿಐ ಕಸ್ಟಡಿ ಶುಕ್ರವಾರ ಅಂತ್ಯಗೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ.

ಪ್ರತ್ಯೇಕವಾಗಿ, ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಲು ಸಿಬಿಐಗೆ ಅನುಮತಿ ನೀಡಿತು. ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಆರೋಪಿ ಸಂಜಯ್ ರಾಯ್​ನದ್ದು ಕ್ರೂರ ಪ್ರಾಣಿಯ ಮನಸ್ಥಿತಿ, ಆತನಿಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಆತ ನಿತ್ಯವೂ ತನ್ನ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಣೆ ಮಾಡುತ್ತಿರುತ್ತಿದ್ದ, ಪ್ರಾಣಿಯ ಪ್ರವೃತ್ತಿಯನ್ನು ಹೊಂದಿದ್ದ, ಆತನಿಗೆ ತಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತಾಪವೂ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ ಅತ್ಯಾಚಾರ ಆರೋಪಿಯದ್ದು ಕ್ರೂರ ಪ್ರಾಣಿಯ ಸ್ವಭಾವ, ಪಶ್ಚಾತಾಪವೂ ಇಲ್ಲ: ವೈದ್ಯರು

ಸಿಬಿಐ ಆಗಸ್ಟ್ 18ರಂದು ಸಂಜಯ್​ ರಾಯ್ ಮನಸ್ಥಿತಿಯನ್ನು ತಿಳಿದುಕೊಳ್ಳಲು ಸಿಎಫ್​ಎಸ್​ಎಲ್ ತಜ್ಞರಿಗೆ ಹೇಳಿದ್ದರು. ಆಗಸ್ಟ್ 9 ರಂದು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯರ ಶವ ಪತ್ತೆಯಾದ ಮರುದಿನ ಬಂಧಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:52 pm, Fri, 23 August 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್