ಸುಪ್ರೀಂಕೋರ್ಟ್‌ ಮನವಿಯ ನಂತರ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ ಏಮ್ಸ್ ವೈದ್ಯರು

Kolkata doctor rape-murder case: ವೈದ್ಯಕೀಯ ವೃತ್ತಿಪರರ ಸುರಕ್ಷತೆಯನ್ನು ಖಾತ್ರಿಪಡಿಸುವ ಕ್ರಮಗಳನ್ನು ಸ್ಥಾಪಿಸಲು ಒಂದು ವಾರದೊಳಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮುಖ್ಯಸ್ಥರೊಂದಿಗೆ ಸಭೆ ಕರೆಯುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ನಿಗದಿಪಡಿಸಿದೆ.

ಸುಪ್ರೀಂಕೋರ್ಟ್‌ ಮನವಿಯ ನಂತರ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ ಏಮ್ಸ್ ವೈದ್ಯರು
ವೈದ್ಯರ ಪ್ರತಿಭಟನೆ
Follow us
ರಶ್ಮಿ ಕಲ್ಲಕಟ್ಟ
|

Updated on: Aug 22, 2024 | 5:08 PM

ದೆಹಲಿ ಆಗಸ್ಟ್ 22: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ (RG Kar Medical College) ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ (Supreme Court) ಗುರುವಾರ ವಿಚಾರಣೆ ನಡೆಸಿದ. ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಮುಷ್ಕರ ನಿರತ ವೈದ್ಯರು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿದೆ. ಆಗಸ್ಟ್ 9 ರಂದು ವೈದ್ಯೆಯ ಅತ್ಯಾಚಾರ- ಹತ್ಯೆಯ ನಂತರ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ, “ವೈದ್ಯಕೀಯ ಸಮುದಾಯವು ಕೆಲಸಕ್ಕೆ ಮರಳಬೇಕಾಗಿದೆ. ಘಟನೆ ನಡೆದು 13 ದಿನಗಳು ಕಳೆದಿವೆ ಎಂದು ಹೇಳಿದೆ.

ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ನಂತರ ಏಮ್ಸ್ ವೈದ್ಯರು ತಮ್ಮ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ್ದಾರೆ. ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಯಲ್ಲಿ, ನವದೆಹಲಿಯ AIIMS ನಲ್ಲಿರುವ RDA 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ಸುಪ್ರೀಂಕೋರ್ಟ್‌ನ ಮೇಲ್ಮನವಿ ಮತ್ತು ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ಬಂದಿದೆ. ಆರ್‌ಜಿ ಕರ್ ಮೆಡಿಕಲ್ ಕಾಲೇಜು ಘಟನೆಯ ಬಗ್ಗೆ ವಿಚಾರಣೆ ನಡೆಸಿ, ದೇಶಾದ್ಯಂತ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಯ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿದ್ದಕ್ಕೆ ನಾವು ಸುಪ್ರೀಂಕೋರ್ಟ್‌ಗೆ ನಮ್ಮ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ ಎಂದು ದೆಹಲಿಯ ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ

ಮುಂದಿನ ವಿಚಾರಣೆ ಸೆಪ್ಟೆಂಬರ್ 5 ರಂದು

ವೈದ್ಯಕೀಯ ವೃತ್ತಿಪರರ ಸುರಕ್ಷತೆಯನ್ನು ಖಾತ್ರಿಪಡಿಸುವ ಕ್ರಮಗಳನ್ನು ಸ್ಥಾಪಿಸಲು ಒಂದು ವಾರದೊಳಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮುಖ್ಯಸ್ಥರೊಂದಿಗೆ ಸಭೆ ಕರೆಯುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ನಿಗದಿಪಡಿಸಿದೆ.

ವೈದ್ಯಕೀಯ ಸಂಸ್ಥೆಗಳಲ್ಲಿ ಹಿಂಸಾಚಾರವನ್ನು ತಡೆಗಟ್ಟುವಂತೆ ನಿರ್ದೇಶನ

ವೈದ್ಯಕೀಯ ಸಂಸ್ಥೆಗಳಲ್ಲಿ ಯಾವುದೇ ಸಂಭಾವ್ಯ ಹಿಂಸಾಚಾರವನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಏತನ್ಮಧ್ಯೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಸಿಐಎಸ್‌ಎಫ್ ನಿಯೋಜಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿ: 30 ವರ್ಷಗಳಲ್ಲಿ ಈ ರೀತಿಯ ಪ್ರಕರಣವನ್ನು ನೋಡಿಲ್ಲ: ಕೋಲ್ಕತ್ತಾ ಕೇಸ್ ಬಗ್ಗೆ ಸುಪ್ರೀಂಕೋರ್ಟ್

‘ಶಾಂತಿಯುತ ಪ್ರತಿಭಟನೆಗೆ ಭಂಗ ತರಬಾರದು’

ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘಟನೆ ಬಗ್ಗೆ ಮಾತನಾಡಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ಈ ನ್ಯಾಯಾಲಯವು ಕಾನೂನುಬದ್ಧ ಅಧಿಕಾರವನ್ನು ಚಲಾಯಿಸುವುದನ್ನು ನಿಷೇಧಿಸಿಲ್ಲ. ಆದರೆ ಶಾಂತಿಯುತ ಪ್ರತಿಭಟನೆಗಳನ್ನು ಅಡ್ಡಿಪಡಿಸಬಾರದು. ಆರ್‌ಜಿ ಕರ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರ ವಿರುದ್ಧ ರಾಜ್ಯವು ಕ್ರಮ ತೆಗೆದುಕೊಳ್ಳುವುದನ್ನು ತಡೆಯಬೇಕು ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್