ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ

ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಯ ಆರಂಭದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿತು.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ: ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚನೆಗೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on:Aug 20, 2024 | 12:04 PM

ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಇಂದು ಕೆಲವು ಸೂಚನೆಗಳನ್ನು ನೀಡಿದೆ. ಕೆಲಸದ ಸ್ಥಳದಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್​ ಹೇಳಿದೆ.

ಈ ಕಾರ್ಯಪಡೆಯು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ರಾಷ್ಟ್ರದಾದ್ಯಂತ ನೈತಿಕ ಮಾನದಂಡಗಳನ್ನು ಜಾರಿಗೊಳಿಸುವ ಗುರಿಯನ್ನು ಹೊಂದಿರುತ್ತವೆ.

ಸಂತ್ರಸ್ತೆಯ ಗುರುತು ಬಹಿರಂಗವಾಗುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಭದ್ರತೆಗೆ ಸಮಸ್ಯೆಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದವು. ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸುವುದಾಗಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ ಮುಷ್ಕರ ಅಂತ್ಯಗೊಳಿಸಿ ಕೆಲಸಕ್ಕೆ ಮರಳುವಂತೆ ವೈದ್ಯರಿಗೆ ಮನವಿ ಮಾಡಲಾಗಿದೆ.

ಮತ್ತಷ್ಟು ಓದಿ: ಕೋಲ್ಕತ್ತಾ: ಅತ್ಯಾಚಾರ ಆರೋಪಿ ರಾಯ್ ಎಷ್ಟು ಕ್ರೂರಿ ಎಂಬುದನ್ನು ವಿವರಿಸಿದ ಅತ್ತೆ

ಇದೇ ವೇಳೆ ಆರೋಪಿ ಸಂಜಯ್ ರಾಯ್ ಅವರ ಪಾಲಿಗ್ರಫಿ ಪರೀಕ್ಷೆಗೆ ಸಿಬಿಐ ಅನುಮತಿ ಪಡೆದಿದೆ. ಈ ಪರೀಕ್ಷೆ ಇಂದು ನಡೆಯಲಿದೆ. ಸಂಜಯ್ ರಾಯ್ ಅವರ ನಿರಂತರ ವಿಚಾರಣೆ ನಡೆಯುತ್ತಿದೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ನವದೆಹಲಿ ತಲುಪಿದ್ದಾರೆ. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ. ಈ ವೇಳೆ ಅವರು ಬಂಗಾಳದ ಪರಿಸ್ಥಿತಿ ಕುರಿತು ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:03 pm, Tue, 20 August 24

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು