AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

Kolkata rape-murder case: ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ, ಐದನೇ ದಿನದಲ್ಲಿ ಏಜೆನ್ಸಿ ತನಿಖೆಯನ್ನು ಕೈಗೆತ್ತಿಕೊಂಡಿದೆ. ಅಷ್ಟರಲ್ಲಿ ಅಪರಾಧ ನಡೆದ ಸ್ಥಳದಲ್ಲಿ "ಬದಲಾವಣೆ" ಮಾಡಲಾಗಿದೆ ಎಂದು ಹೇಳಿದ್ದಾರೆ.  "ಎಲ್ಲವನ್ನೂ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ" ಎಂಬುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿದ್ದು ಪ್ರತಿ ಘಟನೆಯ ಟೈಮ್‌ಲೈನ್ ಹೊಂದಿರುವುದಾಗಿ ಹೇಳಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Aug 22, 2024 | 1:27 PM

Share

ದೆಹಲಿ ಆಗಸ್ಟ್ 22: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (RG Kar Medical College and Hospital) ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ(Kolkata Doctor Rape-Murder Case) ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ನಡೆಸುತ್ತಿದೆ.  ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ಸುಪ್ರೀಂಕೋರ್ಟ್, ಆಗಸ್ಟ್ 22 ರಂದು ತನ್ನ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ಸಿಬಿಐಗೆ ಹೇಳಿತ್ತು. ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿದಂತೆ, ವೈದ್ಯಕೀಯ ವೃತ್ತಿಪರರಿಗೆ, ವಿಶೇಷವಾಗಿ ಮಹಿಳೆಯರಿಗೆ ಸುರಕ್ಷತೆಯನ್ನು ಖಾತ್ರಿಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಿದೆ. ಇದುವರೆಗೆ ಮುಷ್ಕರ ನಡೆಸುತ್ತಿರುವ ವೈದ್ಯರ ಸಂಘಟನೆಗಳು ರಾಷ್ಟ್ರೀಯ ಕಾರ್ಯಪಡೆಗೆ ಮಾಹಿತಿ ನೀಡಿ ಸಹಕರಿಸುವುದಾಗಿ ಭರವಸೆ ನೀಡಿದ್ದು, ಈ ಕುರಿತು ಕೇಂದ್ರ ಕಾನೂನು ರೂಪಿಸುವಂತೆಯೂ ಕೋರಿವೆ.

ಸುಪ್ರೀಂಕೋರ್ಟ್ ವಿಚಾರಣೆ: ಇಲ್ಲಿವರೆಗೆ ಏನೇನಾಯ್ತು?

ಮೃತ ವೈದ್ಯೆಯ ಮೆಡಿಕಲ್ ಗಾಯದ ವರದಿಯ ಬಗ್ಗೆ ಪೀಠವು ಕೇಳಿದಾಗ, ಇದು ಕೇಸ್ ಡೈರಿಯ ಭಾಗವಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿಕೊಂಡಿದೆ.

ಅಪರಾಧದ ಸ್ಥಳದಲ್ಲಿ ಬದಲಾವಣೆ ಮಾಡಲಾಗಿದೆ: ಸಿಬಿಐ

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ, ಐದನೇ ದಿನದಲ್ಲಿ ಏಜೆನ್ಸಿ ತನಿಖೆಯನ್ನು ಕೈಗೆತ್ತಿಕೊಂಡಿದೆ. ಅಷ್ಟರಲ್ಲಿ ಅಪರಾಧ ನಡೆದ ಸ್ಥಳದಲ್ಲಿ “ಬದಲಾವಣೆ” ಮಾಡಲಾಗಿದೆ ಎಂದು ಹೇಳಿದ್ದಾರೆ.  “ಎಲ್ಲವನ್ನೂ ವಿಡಿಯೊ ರೆಕಾರ್ಡಿಂಗ್ ಮಾಡಲಾಗಿದೆ” ಎಂಬುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿದ್ದು ಪ್ರತಿ ಘಟನೆಯ ಟೈಮ್‌ಲೈನ್ ಹೊಂದಿದೆ ಎಂದಿದೆ.

ಅತಿಯಾದ ಕೆಲಸ ಮಾಡುವ ವೈದ್ಯರಿಗೆ ಪ್ರತಿರೋಧ ತೋರಿಸುವ ಶಕ್ತಿಯೂ ಇರುವುದಿಲ್ಲ

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಅತಿಯಾದ ಕೆಲಸ ಮಾಡುವ ವೈದ್ಯರನ್ನು “ಯಾರಾದರೂ ಚುಡಾಯಿಸಿದಾಗಲೂ” ವಿರೋಧಿಸುವ ದೈಹಿಕ ಶಕ್ತಿ ಇರುವುದಿಲ್ಲ ಎಂದು ಪ್ರತಿಭಟನಾನಿರತ ವೈದ್ಯರ ಪರ ವಾದಿಸಿದ ವಕೀಲರು ಹೇಳಿದ್ದಾರೆ.

“ನಾವು ಸರ್ಕಾರಿ ಆಸ್ಪತ್ರೆಗಳಿಗೆ ಹೋಗಿದ್ದೇವೆ, ಯಾರಾದರೂ ಇಲ್ಲದಿದ್ದಾಗ ನಾನು ಆಸ್ಪತ್ರೆಯ ನೆಲದ ಮೇಲೆ ಮಲಗಿದ್ದೇನೆ, ವೈದ್ಯರು 36 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಎಂದು ನಮಗೆ ತಿಳಿದಿದೆ” ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ನಿಮ್ಮ ಸಮಸ್ಯೆಯನ್ನು ಆಲಿಸುತ್ತದೆ

ವೃತ್ತಿಪರ ವೈದ್ಯರಿಗೆ ಸುರಕ್ಷತಾ ಕ್ರಮಗಳನ್ನು ಶಿಫಾರಸು ಮಾಡಲು ಸುಪ್ರೀಂಕೋರ್ಟ್ ರಚಿಸಿರುವ ರಾಷ್ಟ್ರೀಯ ಕಾರ್ಯಪಡೆ ನಿಮ್ಮ ಸಮಸ್ಯೆಯನ್ನು ಆಲಿಸಲಿದೆ ಎಂದು ಸಿಜೆಐ ಡಿವೈ ಚಂದ್ರಚೂಡ್ ರೆಸಿಡೆಂಟ್ ವೈದ್ಯರಿಗೆ ಭರವಸೆ ನೀಡಿದ್ದಾರೆ. ಫೆಡರೇಶನ್ ಆಫ್ ಅಸೋಸಿಯೇಷನ್ ಆಫ್ ಮೆಡಿಕಲ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (ಎಫ್‌ಎಐಎಂಎ) ಮತ್ತು ದೆಹಲಿ ಮೆಡಿಕಲ್ ಅಸೋಸಿಯೇಷನ್ ರಾಷ್ಟ್ರೀಯ ಟಾಸ್ಕ್ ಫೋರ್ಸ್‌ಗೆ ರೆಸಿಡೆಂಟ್ ವೈದ್ಯರನ್ನು ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದವು.

ಇದನ್ನೂ ಓದಿ: Kolkata doctor rape-murder: ವೈದ್ಯೆಯ ಅತ್ಯಾಚಾರ ಪ್ರಕರಣ: ಆರ್‌ಜಿ ಕರ್ ಮಾಜಿ ಪ್ರಾಂಶುಪಾಲರ ಪಾಲಿಗ್ರಾಫ್ ಪರೀಕ್ಷೆ ನಡೆಸಲಿದೆಯೇ ಸಿಬಿಐ?

ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್

ಮರಣೋತ್ತರ ಪರೀಕ್ಷೆಯ ಟೈಮ್‌ಲೈನ್ ಮತ್ತು ಅಪರಾಧವನ್ನು ಅಸಹಜ ಸಾವು (ಯುಡಿ) ಎಂದು ದಾಖಲಿಸುವ ಕುರಿತು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

‘ಇದು ಅಸಹಜ ಸಾವಿನ ಪ್ರಕರಣವಲ್ಲವಾದರೆ, ಮರಣೋತ್ತರ ಪರೀಕ್ಷೆಗೆ ಏಕೆ ಸಮಯ ತೆಗೆದುಕೊಂಡಿದ್ದು?. ಮರಣೋತ್ತರ ಪರೀಕ್ಷೆಯು 18: 10 ಕ್ಕೆ ಪ್ರಾರಂಭವಾಗುತ್ತದೆ ಮತ್ತು 19:10 ಕ್ಕೆ ಕೊನೆಗೊಳ್ಳುತ್ತದೆ, 23:30 ಗಂಟೆಗೆ ಯುಡಿ (ಅಸ್ವಾಭಾವಿಕ ಸಾವಿನ ಪ್ರಕರಣ) ನಲ್ಲಿ ನೋಂದಾಯಿಸಿದ್ದೇಕೆ?. 23:30 ಗಂಟೆಗೆ ಥಾಲ ಪೊಲೀಸ್ ಠಾಣೆಯಲ್ಲಿ ಯುಡಿ ಪ್ರಕರಣ ದಾಖಲಾಗಿದ್ದು, 23:40 ಗಂಟೆಗೆ ಎಫ್‌ಐಆರ್ ದಾಖಲಾಗಿದೆ. ಅಸಹಜ ಸಾವು ನೋಂದಣಿಗೆ ಮುಂಚಿತವಾಗಿ ಮರಣೋತ್ತರ ಪರೀಕ್ಷೆಯು ಅಚ್ಚರಿಯೆನಿಸಿದೆ. ಇದು ನಿಜವಾಗಿದ್ದರೆ, ಏನೋ ಒಂದು ಗಂಭೀರವಾದುದು ನಡೆದಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ಮೊದಲ ನಮೂದನ್ನು ದಾಖಲಿಸಿದ ಕೋಲ್ಕತ್ತಾ ಪೊಲೀಸ್ ಅಧಿಕಾರಿಗೆ, ಸಮಯವನ್ನು ಬಹಿರಂಗಪಡಿಸಲು ವಿಚಾರಣೆಯ ಮುಂದಿನ ದಿನಾಂಕದಂದು ಹಾಜರಾಗುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಭೋಜನ ವಿರಾಮದ ನಂತರ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಪುನರಾರಂಭಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Thu, 22 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ