ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಪ್ರತಿಭಟನೆ, ಪ್ರಾಂಶುಪಾಲರು ರಾಜೀನಾಮೆ

ಕೋಲ್ಕತ್ತಾದ ಕಾಲೇಜೊಂದರಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಕಾಲೇಜಿನ ಪ್ರಾಂಶುಪಾಲರು ರಾಜೀನಾನೆ ನೀಡಿದ್ದಾರೆ. ಕೊಲೆಗೂ ಮುನ್ನ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಘಟನೆಯ ನಂತರ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ ಮತ್ತು ವೈದ್ಯರ ಸಂಘಗಳು ನ್ಯಾಯಕ್ಕಾಗಿ ಒತ್ತಾಯಿಸುತ್ತಿವೆ. ಅಷ್ಟರಲ್ಲಿ ಕಾಲೇಜಿನ ಪ್ರಾಂಶುಪಾಲರು ರಾಜೀನಾಮೆ ನೀಡಿದ್ದಾರೆ.

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ, ಪ್ರತಿಭಟನೆ, ಪ್ರಾಂಶುಪಾಲರು ರಾಜೀನಾಮೆ
ವೈದ್ಯಕೀಯ ಕಾಲೇಜು
Follow us
|

Updated on: Aug 12, 2024 | 12:09 PM

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ. ಈ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿದ್ದರು. ಕೊಲೆಗೂ ಮುನ್ನ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಘಟನೆಯ ನಂತರ, ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ ಮತ್ತು ವೈದ್ಯರ ಸಂಘಗಳು ನ್ಯಾಯಕ್ಕಾಗಿ ಒತ್ತಾಯಿಸುತ್ತಿವೆ.

ಅಷ್ಟರಲ್ಲಿ ಕಾಲೇಜಿನ ಪ್ರಾಂಶುಪಾಲರು ರಾಜೀನಾಮೆ ನೀಡಿದ್ದಾರೆ. ಆರಂಭದಲ್ಲಿ ಆರ್ ಜಿ ಕಾರ್ ಮೆಡಿಕಲ್ ಕಾಲೇಜಿನ ವೈದ್ಯರು ಪ್ರತಿಭಟನೆ ಆರಂಭಿಸಿದರು. ಇದಾದ ಬಳಿಕ ಬೇರೆ ಕಡೆಯ ವೈದ್ಯರು ಇದಕ್ಕೆ ಕೈಜೋಡಿಸಿದ್ದು, ಇದೀಗ ಏಮ್ಸ್ ವೈದ್ಯರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂಬಂಧ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ವಿಚಾರಣೆ ಆರಂಭವಾಗಲಿದೆ.

ಮತ್ತಷ್ಟು ಓದಿ: ಕೊಲ್ಕತ್ತಾ ವೈದ್ಯೆ ಮರಣೋತ್ತರ ಪರೀಕ್ಷೆ; ಸಾಯುವಾಗ ಕುತ್ತಿಗೆ ಮುರಿತ, ಕಣ್ಣು, ಬಾಯಿಯಿಂದ ರಕ್ತಸ್ರಾವ

ವಿಚಾರ ಏನು? ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಶುಕ್ರವಾರ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಲಾಗಿತ್ತು. ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

ಅಪರಾಧದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಆ ವ್ಯಕ್ತಿ ಹೊರಗಿನ ವ್ಯಕ್ತಿಯಾಗಿದ್ದು, ಅವರು ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಉಚಿತ ಪ್ರವೇಶ ಹೊಂದಿದ್ದರು. ಅವರ ಚಟುವಟಿಕೆಗಳು ಸಾಕಷ್ಟು ಅನುಮಾನಾಸ್ಪದವಾಗಿದೆ ಮತ್ತು ಅವರು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ತೋರುತ್ತದೆ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

ಬೆಳಗ್ಗೆ ಆರು ಗಂಟೆಗೆ ಅರೆನಗ್ನ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಸಿಸಿಟಿವಿಯಲ್ಲಿ, ವ್ಯಕ್ತಿಯೊಬ್ಬರು ಸೆಮಿನಾರ್ ಹಾಲ್‌ಗೆ ಬೆಳಿಗ್ಗೆ ನಾಲ್ಕು ಗಂಟೆಗೆ ಹೋಗುತ್ತಿರುವುದು ಕಂಡುಬಂದಿದೆ. ಮಹಿಳೆಯ ಶವದ ಬಳಿ ಬ್ಲೂಟೂತ್ ಇಯರ್ ಫೋನ್ ಕೂಡ ಪೊಲೀಸರಿಗೆ ಸಿಕ್ಕಿದೆ.

ಪೊಲೀಸರು ಬ್ಲೂಟೂತ್ ಇಯರ್‌ಫೋನ್‌ಗಳ ಮೂಲಕ ಆರೋಪಿಯನ್ನು ಪತ್ತೆ ಮಾಡಿದರು. ಶಂಕಿತ ವ್ಯಕ್ತಿಯ ಫೋನ್‌ಗೆ ಇಯರ್‌ಫೋನ್‌ಗಳನ್ನು ಸಂಪರ್ಕಿಸಲಾಗಿದೆ. ಬಳಿಕ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳೂ ಪತ್ತೆಯಾಗಿವೆ. ಪೊಲೀಸರು ತನಿಖೆ ಪೂರ್ಣಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಶುಕ್ರವಾರ ಬೆಳಗಿನ ಜಾವ 3 ರಿಂದ 6 ಗಂಟೆಯ ನಡುವೆ ಈ ಕೃತ್ಯ ನಡೆದಿದೆ ಎಂದು ಕೋಲ್ಕತ್ತಾ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ