ರೈಲಿನಲ್ಲಿ ಕುಡಿದ ಅಮಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ತಲೆ ಮೇಲೆ ಮೂತ್ರ ವಿಸರ್ಜಿಸಿದ ಟಿಟಿಇ ಬಂಧನ
ಲಕ್ನೋನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಾಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಟಿಟಿಇ ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ.
ಲಕ್ನೋನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಾಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಟಿಟಿಇ ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಇದೀಗ ಪೊಲೀಸರು ಟಿಟಿಇಯನ್ನು ಬಂಧಿಸಿದ್ದಾರೆ, ರೈಲಿನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಆರೋಪಿ ಮುನ್ನಾ ಕುಮಾರ್ ಕರ್ತವ್ಯದಲ್ಲಿ ಇಲ್ಲದ ವೇಳೆ ಸಹ ಪ್ರಯಾಣಿಕ ಮಹಿಳೆಯ ತಲೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಮೂಲಗಳ ಪ್ರಕಾರ, ಆರೋಪಿ ಮೂತ್ರ ವಿಸರ್ಜನೆ ಮಾಡಿದ ಮಹಿಳೆಯ ಪತಿ ಕೂಡ ರೈಲ್ವೆ ಉದ್ಯೋಗಿ.
ಸೋಮವಾರ ರೈಲು ಲಕ್ನೋದ ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಜಿಆರ್‌ಪಿಗೆ ಹಸ್ತಾಂತರಿಸಲಾಯಿತು. ನಂತರ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.
ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ
ಮಹಿಳೆಯ ಕಿರುಚಾಟವನ್ನು ಕೇಳಿದ ಪ್ರಯಾಣಿಕರು ಮಹಿಳೆಯ ಸುತ್ತ ಜಮಾಯಿಸಿ ಕುಡಿದು ಟಿಟಿಇಯನ್ನು ಹಿಡಿದಿದ್ದಾರೆ. ಕೆಲವು ದಿನಗಳ ಹಿಂದೆ, ನ್ಯೂಯಾರ್ಕ್‌ನಿಂದ ನವದೆಹಲಿಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಮದ್ಯದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವರದಿಯಾಗಿದೆ. ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.
ಮಾರ್ಚ್ 3 ರಂದು ರಾತ್ರಿ 9:16 ಕ್ಕೆ ನ್ಯೂಯಾರ್ಕ್‌ನಿಂದ ಹೊರಟು 14 ಗಂಟೆ 26 ನಿಮಿಷಗಳ ನಂತರ ಮಾರ್ಚ್ 4 ರಂದು ರಾತ್ರಿ 10:12 ಕ್ಕೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ