ಕೋಲ್ಕತ್ತಾ ದುರ್ಗಾ ಪೂಜೆ ವೇಳೆ ಕಾಲ್ತುಳಿತ, 19 ಮಂದಿ ಸಾವು, 7 ಮಂದಿ ಬಂಧನ, ಆಸ್ಪತ್ರೆಗೆ ಅಮಿತ್ ಶಾ ಭೇಟಿ

ಕೋಲ್ಕತ್ತಾ ದುರ್ಗಾ ಪೂಜೆ ಮಂಟಪದಲ್ಲಿ ಕಾಲ್ತುಳಿತದಿಂದ 19 ಮಂದಿ ಮೃತಪಟ್ಟು, 25 ಗಾಯಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ಜನಸಂದಣಿ ನಿರ್ವಹಣೆಯಲ್ಲಿನ ಲೋಪಗಳ ಶಂಕೆಯ ಹಿನ್ನೆಲೆಯಲ್ಲಿ 7 ಮಂದಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ. ಮೃತರ ಕುಟುಂಬಗಳಿಗೆ ಪರಿಹಾರ ಮತ್ತು ಉದ್ಯೋಗ ಘೋಷಿಸಲಾಗಿದೆ. ಘಟನೆಯ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಕೋಲ್ಕತ್ತಾ ದುರ್ಗಾ ಪೂಜೆ ವೇಳೆ ಕಾಲ್ತುಳಿತ, 19 ಮಂದಿ ಸಾವು, 7 ಮಂದಿ ಬಂಧನ, ಆಸ್ಪತ್ರೆಗೆ ಅಮಿತ್ ಶಾ ಭೇಟಿ
ಅಮಿತ್ ಶಾ

Updated on: Oct 18, 2026 | 11:04 AM

ಕೋಲ್ಕತ್ತಾ, ಅಕ್ಟೋಬರ್ 18: ಕೋಲ್ಕತ್ತಾದ ದುರ್ಗಾ ಪೂಜಾ ಸಮಯದಲ್ಲಿ ಜನಸಂದಣಿ ಹೆಚ್ಚಾಗಿ ಸಂಭವಿಸಿದ ಕಾಲ್ತುಳಿತದಲ್ಲಿ 19 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ತೆರಳಿದ್ದಾರೆ. ಜನಸಂದಣಿ ನಿರ್ವಹಣೆಯಲ್ಲಿ ಲೋಪವಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಪೂಜಾ ಆಯೋಜಕರು ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ತನಿಖೆ ಮುಂದುವರೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ರಾಜ್ಯ ಆರೋಗ್ಯ ಸಚಿವರೂ ಆಸ್ಪತ್ರೆಗೆ ತೆರಳಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವ ಕುರಿತು ಮಾಹಿತಿ ಪಡೆದರು. ಬಳಿಕ ಅಮಿತ್ ಶಾ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗೆ ಕಾಳಿಘಾಟ್ ಕಾಳಿ ದೇವಸ್ಥಾನಕ್ಕೂ ಭೇಟಿ ನೀಡಿದರು.

Loading...

ಜನಸಂದಣಿ ನಿರ್ವಹಣೆಯಲ್ಲಿ ಲೋಪದ ಶಂಕೆ
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಂಟಪದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಇರಲಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಸಪ್ತಮಿ ಆಚರಣೆಯ ವೇಳೆ ಮಳೆ ಸುರಿದಿದ್ದು, ಮಂಟಪ ಕುಸಿಯುವ ಸಾಧ್ಯತೆ ಇದೆ ಎಂಬ ಘೋಷಣೆಯೂ ಜನರಲ್ಲಿ ಆತಂಕ ಮೂಡಿಸಿರಬಹುದು ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಮಂಟಪದ ಪ್ರವೇಶ ಮತ್ತು ನಿರ್ಗಮನ ದ್ವಾರಗಳು ಕಿರಿದಾಗಿದ್ದವು. ಜನರು ಏಕಕಾಲದಲ್ಲಿ ಹೊರಬರಲು ಪ್ರಯತ್ನಿಸಿದಾಗ ನೂಕುನುಗ್ಗಲು ಉಂಟಾಗಿರುವ ಸಾಧ್ಯತೆಯಿದೆ. ಸ್ಥಳದಲ್ಲಿ ಸಾಕಷ್ಟು ಪೊಲೀಸ್ ಹಾಗೂ ಖಾಸಗಿ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂಬ ಆರೋಪಗಳೂ ಕೇಳಿಬಂದಿವೆ.

ಏಳು ಮಂದಿ ಬಂಧನ, ತನಿಖೆ ಚುರುಕು
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾ ಆಯೋಜಕರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಜನರನ್ನು ಬಂಧಿಸುವ ಸಾಧ್ಯತೆಯಿದೆ. ಜನಸಂದಣಿ ನಿರ್ವಹಣೆಯಲ್ಲಿನ ಲೋಪದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಮಂಟಪ ಕುಸಿಯುವ ಸಾಧ್ಯತೆಯ ಬಗ್ಗೆ ಜನರನ್ನು ಹೊರಹೋಗುವಂತೆ ಮಾಡಿದ ಘೋಷಣೆ ಯಾರು ಮಾಡಿದರು ಮತ್ತು ಅದು ಜನರಲ್ಲಿ ಭೀತಿ ಸೃಷ್ಟಿಸಿತೇ ಎಂಬುದನ್ನೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

ಕೊಲ್ಕತ್ತಾದ ಕಾಲ್ತುಳಿತದಲ್ಲಿ 17 ಭಕ್ತರು ಸಾವು; ಪ್ರಧಾನಿ ಮೋದಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾಣ ಘೋಷಣೆ

 

ಘಟನಾ ಸ್ಥಳದ ಸುತ್ತ ನಿಷೇಧಾಜ್ಞೆ
ಕಾಲ್ತುಳಿತ ಸಂಭವಿಸಿದ ಮಂಟಪದ ಸುತ್ತಮುತ್ತಲಿನ ರಸ್ತೆಗಳಲ್ಲಿ ಕೋಲ್ಕತ್ತಾ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಅಕ್ಟೋಬರ್ 20ರವರೆಗೆ ಈ ನಿರ್ಬಂಧಗಳು ಮುಂದುವರೆಯಲಿದ್ದು, ಆ ಪ್ರದೇಶದಲ್ಲಿ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಪ್ರಕರಣದ ತನಿಖೆಗೆ ಕಲ್ಕತ್ತಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವುದಾಗಿಯೂ ತಿಳಿಸಲಾಗಿದೆ. ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಸಂಭವಿಸಿದ ಈ ದುರಂತವು ದೊಡ್ಡ ಜನಸಮೂಹ ಸೇರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುರಕ್ಷತೆ, ಪ್ರವೇಶ-ನಿರ್ಗಮನ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣದ ಅಗತ್ಯವನ್ನು ಮತ್ತೊಮ್ಮೆ ಎತ್ತಿಹಿಡಿದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us